ಬಳ್ಳಾರಿ. ಜೂ. 16:: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ 10 - 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಿ, ಅವರ ಜೀವನಕ್ಕೆ ಭದ್ರತೆ ಒದಗಿಸಬೇಕು ಎಂದು ಬಳ್ಳಾರಿ ಜಿಲ್ಲೆಯ ಬುಡಾ ಅಧ್ಯಕ್ಷ ಆಂಜಿನೆಲು ಅವರ ಮೂಲಕ ರಾಜ್ಯ ಸರ್ಕಾರ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದರು.
ಆಗ್ರಹಿಸಿ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳಾದ D. K. ಶಿವಕುಮಾರ್ ಅವರಿಗೆ ಬರೆದಿರುವ ಮನವಿಯನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ J. S. ಆಂಜನೇಯಲು ಅವರ ಮೂಲಕ ಸಲ್ಲಿಸಲಾಯಿತು.
ಮನವಿಯಲ್ಲಿ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಲ್ಪ ಸಂಭಾವನೆಯಲ್ಲೇ ಬದುಕು ಸಾಗಿಸುವ ಪರಿಸ್ಥಿತಿ ಎದುರಾಗಿದೆ. ಹಿಂದೆ 10 ತಿಂಗಳ ಸೇವಾ ಅವಧಿಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಈಗ ಅದನ್ನು ಎಂಟು ತಿಂಗಳಿಗೆ ಇಳಿಸಿರುವುದರಿಂದ ಆರ್ಥಿಕ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ ಎಂದು ಅತಿಥಿ ಉಪನ್ಯಾಸಕರು ಅಳಲು ತೋಡಿಕೊಂಡಿದ್ದಾರೆ.
ಸೇವೆಯಿಂದ ಬಿಡುಗಡೆ ಮಾಡಿದ ಬಳಿಕವೂ ಪರೀಕ್ಷಾ ಕಾರ್ಯಗಳು ಸೇರಿದಂತೆ ವಿವಿಧ ಶೈಕ್ಷಣಿಕ ಚಟುವಟಿಕೆಗಳಿಗೆ ಕಾಲೇಜು ಆಡಳಿತ ಮಂಡಳಿಗಳು ತಮ್ಮ ಸೇವೆಯನ್ನು ಬಳಸಿಕೊಳ್ಳುತ್ತಿವೆ. ಆದರೆ ಅದಕ್ಕೆ ತಕ್ಕಂತೆ ಸೇವಾ ಭದ್ರತೆ ಅಥವಾ ಸೂಕ್ತ ಸೌಲಭ್ಯಗಳು ದೊರೆಯುತ್ತಿಲ್ಲ. ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ, ಮನೆ ಬಾಡಿಗೆ, ವೈದ್ಯಕೀಯ ವೆಚ್ಚ ಹಾಗೂ ದಿನನಿತ್ಯದ ಖರ್ಚುಗಳನ್ನು ಭರಿಸುವುದು ದುಸ್ತರವಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಯುಜಿಸಿ ಮತ್ತು ನಾನ್-ಯುಜಿಸಿ ಎಂಬ ತಾರತಮ್ಯ ಮಾಡದೆ ಎಲ್ಲ ಅತಿಥಿ ಉಪನ್ಯಾಸಕರ ಸೇವೆಯನ್ನು ಸಕ್ರಮಗೊಳಿಸಿ ಖಾಯಂ ನೇಮಕಾತಿಗೆ ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಅತಿಥಿ ಉಪನ್ಯಾಸಕರ ಸೇವೆ ಖಾಯಂಗೊಳಿಸುವ ಭರವಸೆ ನೀಡಲಾಗಿತ್ತು. ಆ ಭರವಸೆಯನ್ನು ಈಡೇರಿಸಿ, ರಾಜ್ಯದ ಸಾವಿರಾರು ಅತಿಥಿ ಉಪನ್ಯಾಸಕರಿಗೆ ಶಾಶ್ವತ ಉದ್ಯೋಗ ಭದ್ರತೆ ಕಲ್ಪಿಸುವ ಮೂಲಕ ಅವರ ಜೀವನಕ್ಕೆ ನೆಮ್ಮದಿ ನೀಡಬೇಕು ಎಂದು ಸರ್ಕಾರವನ್ನು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕಾಲೇಜಿನ ಅತಿಥಿ ಉಪನ್ಯಾಸಕರಾದ ಡಾ.ಟಿ ದುರುಗಪ್ಪ, ಡಾ. ಹನುಮೇಶ, ರಫೀಕ್, ಸಿದ್ದೇಶ್, ಡಾ.ಬಸಪ್ಪ, ಡಾ. ಗಿರೀಶ್ ಕುಮಾರ್ ಗೌಡ, ಮಾರೆಪ್ಪ, ಕುಮಾರಸ್ವಾಮಿ ಮತ್ತು ಇನ್ನೀತರು ಹಾಜರಿದ್ದರು.
