LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

16 ಜನ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಜೂನ್​ 17: ಐಎಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. 16 ಜನ ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ಜಾನಕಿ ಕೆ ಎಂ ಅವರನ್ನು ವರ್ಗಾವಣೆ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿಯಾಗಿದ್ದ ಸತ್ಯಭಾಮಾ ಅವರನ್ನು ಸಮಗ್ರ ಶಿಕ್ಷಣ ಅಭಿಯಾನ ರಾಜ್ಯ ಯೋಜನಾ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.

  1. ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ ಜಾನಕಿ ಕೆ.ಎಂ ಅವರು ರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ವರ್ಗ

  2. ಹಾಸನ ಜಿಲ್ಲಾಧಿಕಾರಿಯಾಗಿದ್ದ ಸತ್ಯಭಾಮಾ ಅವರು ಸಮಗ್ರ ಶಿಕ್ಷಣ ಅಭಿಯಾನ ರಾಜ್ಯ ಯೋಜನಾ ನಿರ್ದೇಶಕಿಯಾಗಿ ವರ್ಗ

  3. ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಲತಾ ಕುಮಾರಿ ಅವರು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗ

  4. ಆರ್‌ಡಿಪಿಆರ್ ಇ ಆಡಳಿತದ ನಿರ್ದೇಶಕರಾಗಿದ್ದ​ ​ಸ್ವರೂಪ ಟಿಕೆ ಅವರು ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗ

  5. ಬಿಬಿಎಂಪಿಯ ವಿಶೇಷ ಆಯುಕ್ತರಾಗಿದ್ದ ಅವಿನಾಶ್​ ಮೆನನ್ ರಾಜೇಂದ್ರ ಅವರು ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಆರೋಗ್ಯ ನಿರ್ದೇಶನಾಲಯದ ಮಿಷನ್​ ನಿರ್ದೇಶಕರಾಗಿ ವರ್ಗ

  6. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಘಲನ್ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಐಜಿಯಾಗಿ ನೇಮಕ

  7. ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ನಳಿನಿ ಅತುಲ್- ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿಯಾಗಿ ನೇಮಕ

  8. ವಾಣಿಜ್ಯ ತೆರಿಗೆಗಳ (ಸೇವಾ ವಿಶ್ಲೇಷಣಾ ವಿಭಾಗ) ಹೆಚ್ಚುವರಿ ಆಯುಕ್ತರಾಗಿದ್ದ ದರ್ಶನ್ ಹೆಚ್ ವಿ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗ

  9. ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಸಂಗಪ್ಪ ನೇಮಕ

  10. ದಾವಣಗೆರೆ ಜಿಲ್ಲಾ ಪಂಚಾಯತ್​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಸುರೇಶ್ ಬಿ ಇಟ್ನಾಳ್ ಅವರು ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗ

  11. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನವೀನ್​ ಭಟ್​ ನೇಮಕ ಕೊಪ್ಪಳ ಡಿಸಿ ನಳಿನಿ ಅತುಲ್ ವರ್ಗಾವಣೆ

  12. ಕೈಮಗ್ಗ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕರಾಗಿ ಗರಿಮಾ ಪನ್ವರ್​ ನೇಮಕ

  13. ಸ್ಮಾರ್ಟ್ ಗವರ್ನೆನ್ಸ್​ ಕಾರ್ಯನಿರ್ವಾಹಕ ನಿರ್ದೇಶಕರಾಗಿ ರಾಹುಲ್ ರತ್ನಂ​ ಪಾಂಡೆ ನೇಮಕ

  14. ಮಧ್ಯಾಹ್ನ ಬಿಸಿ ಊಟದ ಸಾರ್ವಜನಿಕ ಶಿಕ್ಷಣ ನಿರ್ದೇಶಕರಾಗಿ ಪ್ರಕಾಶ್​ ಜಿ ಟಿ ನಿಟ್ಟಾಲಿ ವರ್ಗ

  15. ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಣಿತ ನೇಗಿ ವರ್ಗ

  16. ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ​ ಗೆಟ್ಟಿ ಮಹಾದೇವ ವಿಠಲ್ ರಾವ್​ ಅವರನ್ನು ನೇಮಕ ಮಾಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್