ಬಳ್ಳಾರಿ,ಸೆ.12: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ. ಪರಮೇಶ್ವರ ನಾಯ್ಕ ಅವರು ಸೆಪ್ಟೆಂಬರ್ 12 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆಪ್ಟೆಂಬರ್ 12 ರಂದು ಬೆಳಿಗ್ಗೆ 9 ಗಂಟೆಗೆ ಹರಪನಹಳ್ಳಿಯಿಂದ ಹೊರಟು 11.30ಕ್ಕೆ ಬಳ್ಳಾರಿಗೆ ಆಗಮಿಸಲಿದ್ದಾರೆ. ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರ ನೇತೃತ್ವದಲ್ಲಿ ರೂಪನಗುಡಿಯಲ್ಲಿ ಹಮ್ಮಿಕೊಂಡಿರುವ ‘ಪ್ರಜಾಸೇವಾ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆಯಿAದ ಬಳ್ಳಾರಿ ಜಿಲ್ಲೆಯ ಐದು ಶಾಸಕರೊಂದಿಗೆ ಸಭೆ ನಡೆಸಿ, ಜಿಲ್ಲೆಯ ಗ್ರಾಮ ಪಂಚಾಯಿತಿ ಮಟ್ಟದ ಹಾಗೂ ವಾರ್ಡ್ ಮಟ್ಟದ ಗ್ಯಾರಂಟಿ ಸಮಿತಿಗಳ ರಚನೆ ಕುರಿತು ಚರ್ಚೆ ನಡೆಸಲಿದ್ದಾರೆ. ಬಳಿಕ ವಾಸ್ತವ್ಯ ಮಾಡುವರು.
ಸೆ.13 ರಂದು 11 ಗಂಟೆಗೆ ಹೊಸಪೇಟೆಗೆ ಪ್ರಯಾಣಿಸುವರು ಎಂದು ಪ್ರಾಧಿಕಾರದ ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ಕಾಂತರಾಜು ತಿಳಿಸಿದ್ದಾರೆ.