Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಮರಳು ದಂಧೆ ಕೋರರ ಪರವಾನಿಗೆಯನ್ನು ರದ್ದು ಪಡಿಸಿ : ಅಂಗಡಿ ಶಂಕರ್ ಆಗ್ರಹ 


 ಬಳ್ಳಾರಿ ಮೇ 30.: ತಾಲೂಕಿನ ಗ್ರಾಮಾಂತರ ಪ್ರದೇಶದ ತೊಲಮಾಮಿಡಿ, ಯಾಳ್ಪಿ ಹಗರಿ  ಸೇರಿದಂತೆ ಇತರ ಗ್ರಾಮಗಳಲ್ಲಿ  ಎಂ ರಾಮಕೃಷ್ಣರಾವ್ ಎಂಬುವರು ಮರಳು ಲೈಸೆನ್ಸ್ ಪಡೆದುಕೊಂಡು  ಮರಳು ಗಣಿಗಾರಿಕೆಯನ್ನು ನಡೆಸಿದ್ದಾರೆ. ಅವರು ಪಡೆದ ಗುತ್ತಿಗೆ ಅವಧಿ ಮುಗಿದಿದ್ದು ಈಗಲೂ ಸಹ ಅವರು ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಅವರ ಮೇಲೆ ಕಾನೂನು ಕ್ರಮ ಕೈಗೊಂಡು ಅವರ ಗುತ್ತಿಗೆಯನ್ನು ರದ್ದುಪಡಿಸಬೇಕು ಮತ್ತು ಅವರನ್ನು ಕಪ್ಪುಪಟ್ಟಿಗೆ ಸೇರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷರಾದ ಅಂಗಡಿ ಶಂಕರ್ ಜಿಲ್ಲಾಧಿಕಾರಿಗಳನ್ನು  ಆಗ್ರಹಿಸಿದರು.


 ಅವರು ಇಂದು ವೇದಿಕೆಯ ಹಲವಾರು ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಮನವಿ ಪತ್ರವನ್ನು ನೀಡಿ ಮಾತನಾಡಿ, ರಾಮಕೃಷ್ಣರಾವ್ ಎನ್ನುವರು ತಾವು ಗುತ್ತಿಗೆ ಪಡೆದಿದ್ದ ಸ್ಥಳವನ್ನು ಬಿಟ್ಟು ಬೇರೆ ಕಡೆಯಿಂದ ಅಕ್ರಮವಾಗಿ ಮರಳು ತಂದು ತಮ್ಮ ಸ್ಟಾಕ್ ಯಾರ್ಡ್ ನಲ್ಲಿ  ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ ಈ ಮರಳನ್ನು ದುಬಾರಿ ಬೆಲೆಗೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಲಾಭವನ್ನು ಪಡೆಯುತ್ತಿದ್ದಾರೆ. ಇದನ್ನು ಯಾರಾದರೂ ಪ್ರಶ್ನಿಸಿದಲ್ಲಿ ಇದನ್ನು ನಾನು ಗುತ್ತಿಗೆ ಪಡೆದಿದ್ದೇನೆ ಎಂದು ಹೇಳಿ  ಅವರ ಬಾಯಿ ಮುಚ್ಚಿಸುತ್ತಾರೆ, ಇವರ ಈ ಮರಳು ದಂದೆಗೆ ಜಿಲ್ಲಾ ಖನಿಜ ಅಧಿಕಾರಿಗಳು ಮತ್ತು ಗಣಿ ಮತ್ತು ಭೂ ವಿಜ್ಞಾನ

ಇಲಾಖೆಯ ಅಧಿಕಾರಿಗಳು ಸಹ ಸಾತ್ ನೀಡುತ್ತಿದ್ದಾರೆ ಈ ಅಕ್ರಮ ಮರಳು  ದಂಧೆ ಕೋರ ರಾಮಕೃಷ್ಣರಾವ್ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಅವರು ಸಂಗ್ರಹಿಸಿ ಇಟ್ಟುಕೊಂಡಿರುವ ಮರಳನ್ನು ಸೀಸ್ ಮಾಡಿ ಸರ್ಕಾರದ ವಶಕ್ಕೆ ಪಡೆಯಬೇಕೆಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.


 ಅದೇ ರೀತಿಯಲ್ಲಿ ಮತ್ತೊಬ್ಬ ಗುತ್ತಿಗೆದಾರ ಗಾದಿಲಿಂಗಪ್ಪ ಎನ್ನುವವರು ಸಹ ಮರಳು ಗಣಿಗಾರಿಕೆ  ಗುತ್ತಿಗೆಯನ್ನು ಪಡೆದುಕೊಂಡಿದ್ದು ಅವರು ಸಹ ಒಂದು ಪರಮಟ್ಟಿಗೆ ಐದಾರು ಲಾರಿ  ಲೋಡುಗಳಷ್ಟು ಮರುಳನ್ನು ಕಾಳದಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟವನ್ನು ಉಂಟು ಮಾಡುತ್ತಿದ್ದಾರೆ ಇವರ ಜೊತೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಚಾರ್ಮಿಳಾಗಿ ಎಗ್ಗಿಲ್ಲದೆ ಅಕ್ರಮವಾಗಿ ಮರಳುಗಾರಿಕೆಯನ್ನು ನಡೆಸುತ್ತಿದ್ದಾರೆ ಕೂಡಲೇ ಜಿಲ್ಲಾಡಳಿತ ಈ ಅಕ್ರಮ ಮರಳು ದಂಧೆ ಗೌರವ ವಿರುದ್ಧ ಕ್ರಮ ಕೈಗೊಂಡು ಇವರ ಪರವಾಗಿಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು.


 ಈ ಪ್ರತಿಭಟನೆಯಲ್ಲಿ ಕುರುಗೋಡು ತಾಲೂಕು ಅಧ್ಯಕ್ಷ ಗಣಿಕಾಳು ವೀರೇಶ್, ಬಳ್ಳಾರಿ ತಾಲೂಕು ಅಧ್ಯಕ್ಷ ದಿವಾಕರ್  ಸೇರಿದಂತೆ ಹಲವಾರು ಜನ ವೇದಿಕೆಯ ಕಾರ್ಯಕರ್ತರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ