Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ತವ್ಯ ಲೋಪವೆಸಗಿದರೆ ಕಟ್ಟುನಿಟ್ಟಿನ ಕ್ರಮ: ಡಾ.ಶಂಕ್ರಪ್ಪ ಮೈಲಾರಿ

ಬಳ್ಳಾರಿ: ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಮಾಸಿಕ ಪ್ರಗತಿ ಪರಿಶೀಲನಾ ಸಭೆ



ಬಳ್ಳಾರಿ,ಜೂ.18 : ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ‘ಕಾಮ್ಸ್' (ಕರ್ನಾಟಕ ಸುಧಾರಿತ ಹಾಜರಾತಿ ನಿರ್ವಹಣಾ ವ್ಯವಸ್ಥೆ) ತಂತ್ರಾAಶದ ಮೂಲಕ ಹಾಜರಾತಿಯನ್ನು ತಪ್ಪದೇ ದಾಖಲಿಸಬೇಕು. ಕರ್ತವ್ಯದ ಅವಧಿಯಲ್ಲಿ ಕೇಂದ್ರಸ್ಥಾನದಿAದ ಹೊರಗೆ ಹೋಗುವ ಸಂದರ್ಭ ಎದುರಾದರೆ ಕಡ್ಡಾಯವಾಗಿ ಚಲನವಲನ ಪುಸ್ತಕದಲ್ಲಿ ನಮೂದಿಸಬೇಕು ಎಂದು ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಹ ನಿರ್ದೇಶಕ ಡಾ.ಶಂಕ್ರಪ್ಪ ಮೈಲಾರಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ನಗರದ ಡಿಹೆಚ್‌ಓ ಸಭಾಂಗಣದಲ್ಲಿ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಬುಧವಾರ ಆಯೋಜಿಸಿದ್ದ ವೈದ್ಯಾಧಿಕಾರಿಗಳ ಜಿಲ್ಲಾ ಮಟ್ಟದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ಕಾರಣಕ್ಕೂ ರೋಗಿಗಳಿಗೆ ಹೊರಗಿನ ಔಷಧಿಗಳನ್ನು ಬರೆದುಕೊಡಬಾರದು. ಖಾಸಗಿ ಆಸ್ಪತ್ರೆ ಅಥವಾ ಲ್ಯಾಬ್‌ಗಳಿಗೆ ರೋಗಿಗಳನ್ನು ಶಿಫಾರಸ್ಸು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆಸ್ಪತ್ರೆಗೆ ಅಗತ್ಯವಿರುವ ಔಷಧಿಗಳನ್ನು ಮುಂಚಿತವಾಗಿಯೇ ಇಂಡೆAಟ್ ಮಾಡಿಕೊಳ್ಳಬೇಕು. ಆಸ್ಪತ್ರೆಯ ಒಳಗಡೆ ಮತ್ತು ಹೊರಗಡೆ ಸ್ವಚ್ಛತೆಯನ್ನು ಕಾಪಾಡಲು ಮೇಲ್ವಿಚಾರಣಾ ಸಿಬ್ಬಂದಿ ಪ್ರತಿದಿನ ಗಮನ ಹರಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸುರಕ್ಷಿತ ಹೆರಿಗೆಗಳನ್ನು ಹೆಚ್ಚಿಸಲು ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲೇ ಹೆಚ್ಚಿನ ಹೆರಿಗೆಗಳನ್ನು ನಿರ್ವಹಿಸಬೇಕು. ಗರ್ಭಿಣಿಯರ ವಿವರಗಳನ್ನು ಮೊದಲ ಮೂರು ತಿಂಗಳ ಒಳಗಾಗಿಯೇ ಕಡ್ಡಾಯವಾಗಿ ದಾಖಲಿಸಿ, ನಿಯಮಿತ ತಪಾಸಣೆ ನಡೆಸಬೇಕು. ಇದರಿಂದ ತೊಡಕಿನ ಗರ್ಭಿಣಿಯರನ್ನು ಆರಂಭದಲ್ಲೇ ಪತ್ತೆ ಹಚ್ಚಿ, ರಕ್ತಹೀನತೆ ನಿವಾರಿಸಿ ತಾಯಿ-ಶಿಶು ಮರಣಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ ಆರೋಗ್ಯ ಕೇಂದ್ರಗಳಲ್ಲಿ ನಡೆಯುವ ಮಾಸಿಕ ಸಭೆಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ತೊಡಕಿನ ಗರ್ಭಿಣಿಯರ ಮನೆ ಭೇಟಿ ಹಾಗೂ ಹೆರಿಗೆ ಹತ್ತಿರವಿರುವ ಗರ್ಭಿಣಿಯರ ಮಾಹಿತಿಯನ್ನು ವೈದ್ಯರಿಗೆ ಕಡ್ಡಾಯವಾಗಿ ತಲುಪಿಸಬೇಕು ಎಂದರು.
ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಆಸ್ಪತ್ರೆಗಳಲ್ಲಿರುವ ಟಿವಿಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಪ್ರಸ್ತುತ ಮಳೆಗಾಲ ಆರಂಭವಾಗಿರುವುದರಿAದ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಲು ಕ್ಷೇತ್ರ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನಾಯಿ ಕಡಿತ ಹಾಗೂ ಹಾವಿನ ಕಡಿತದ ಕುರಿತು ಗ್ರಾಮ ಪಂಚಾಯತಿ, ಶಾಲೆಗಳು ಮತ್ತು ಸಮುದಾಯ ಸಭೆಗಳ ಮೂಲಕ ನಿರಂತರವಾಗಿ ಜಾಗೃತಿ ಮೂಡಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಅವರು ಮಾತನಾಡಿ, ಕ್ಷಯರೋಗಿಗಳ ಪೌಷ್ಟಿಕಾಂಶದ ಕೊರತೆ ನೀಗಿಸಲು ‘ನಿಕ್ಷಯ ಮಿತ್ರ' ಯೋಜನೆಯಡಿ ದಾನಿಗಳನ್ನು ನೋಂದಾಯಿಸಲು ಕ್ರಮ ಕೈಗೊಳ್ಳಲಾಗುವುದು ಮತ್ತು ಗರ್ಭಿಣಿಯರಿಗೆ ಮೊದಲ ತ್ರೆöÊಮಾಸಿಕದಲ್ಲೇ ಹೆಚ್.ಐ.ವಿ., ಹೆಪಟೈಟೀಸ್ ಮತ್ತು ಸಿಫಿಲಿಸ್ ಪರೀಕ್ಷೆಗಳನ್ನು ಮಾಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಎಲ್ಲಾ ಆಡಳಿತ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ