LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಅಪಘಾತಗಳು ಸಂಭವಿಸದಂತೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು: ಸೆ 02:, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ಅಪಘಾತಗಳು ಸಂಭವಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದೆಂದು ಕೆಎಸ್ಆರ್ ಟಿಸಿ ಸಂಸ್ಥೆಯ ಮುಖ್ಯ ಯಾಂತ್ರಿಕ ಅಭಿಯಂತರ ಕೆ.ಹೆಚ್. ಶ್ರೀನಿವಾಸ್ ರವರು ತಿಳಿಸಿದ್ದಾರೆ!
ಇತ್ತೀಚಿಗೆ ಶಿರೂರು ಗ್ರಾಮದ 17 ವರ್ಷದ ಐಟಿಐ ವಿದ್ಯಾರ್ಥಿ ಫಕ್ಕಿರೇಶ ಅವರು ಹುಬ್ಬಳ್ಳಿಯಿಂದ ಲಕ್ಷೇಶ್ವರಕ್ಕೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಚಲಿಸುತ್ತಿದ್ದ ಬಸ್ಸಿನ ಕಿಟಕಿಯಿಂದ ಗುಟ್ಕಾ ಉಗುಳಲು ತಲೆಯನ್ನು ಹೊರಹಾಕಿದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿಯ ಡಿಕ್ಕಿಯಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್ಸುಗಳಲ್ಲಿ ಗುಟ್ಕಾ ತಂಬಾಕು ಹಾಗೂ ಧೂಮಪಾನವನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು, ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ನಿಷೇಧಿಸುವುದು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಬಸ್ಸಿನ ಕಿಟಕಿಗಳಿಗೆ ಕಬ್ಬಿಣದ ಸರಳುಗಳನ್ನು ತ್ವರಿತವಾಗಿ ಅಳವಡಿಸಲು ಸಂಬಂಧಿಸಿದವರಿಗೆ ಅಗತ್ಯ ಆದೇಶ/ನಿರ್ದೇಶನ ನೀಡುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪನವರು ಸರ್ಕಾರಕ್ಕೆ ಪತ್ರ ಬರೆದ ನಿಮಿತ್ಯ ಕ.ರಾ.ರ.ಸಾ.ನಿಗಮದ ನಿಗಮವು ಸಾರ್ವಜನಿಕ ಪ್ರಯಾಣಿಕರಿಗೆ ಸುರಕ್ಷಿತ, ಸಮರ್ಪಕ ಮತ್ತು ಆರಾಮದಾಯಕ ಸಾರಿಗೆ ಸೇವೆಯನ್ನು ಒದಗಿಸುವ ಧೈಯೋದ್ದೇಶದೊಂದಿಗೆ ತನ್ನ ವಾಹನ ಬಲದಲ್ಲಿ ವಿವಿಧ ಮಾದರಿಯ ವಾಹನಗಳನ್ನು ರಾಜ್ಯ ಹಾಗೂ ಅಂತರರಾಜ್ಯದಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಎಲ್ಲಾ ವಿಭಾಗಗಳಲ್ಲಿ ಕಾರ್ಯಚರಣೆಯಲ್ಲಿರುವ ಬಸ್ಸುಗಳ ಕಿಟಕಿಗಳಿಗೆ ಕಬ್ಬಿಣದ ಸರಳುಗಳನ್ನು ಅಳವಡಿಸುವಂತೆ ಈಗಾಗಲೇ ಎಲ್ಲಾ ಹಿರಿಯ/ವಿ ನಿಯಂತ್ರಣಾಧಿಕಾರಿಗಳು, ಕ.ರಾ.ರ.ಸಾ.ನಿಗಮ ರವರಿಗೆ ಸೂಚನೆಗಳನ್ನು ನೀಡಲಾಗಿದ್ದು ಮುಂದುವರೆದು, ಪ್ರತಿ ಮಾಹೆ ಪ್ರಮುಖ ಬಸ್ ನಿಲ್ದಾಣಗಳಲ್ಲಿ ವಾಹನಗಳ ತಪಾಸಣಾ ಕಾರ್ಯಕೈಗೊಂಡಾಗ ಬಸ್ಸುಗಳ ಕಿಟಕಿಗಳಿಗೆ ಕಬ್ಬಿಣದ ಸರಳುಗಳನ್ನು ಅಳವಡಿಸಿರುವ ಬಗ್ಗೆ ಪರಿಶೀಲಿಸಿ, ಸದರಿ ಸರಳುಗಳನ್ನು ಅಳವಡಿಸದಿರುವ ಬಸ್ಸುಗಳಲ್ಲಿ ಕಿಟಕಿಗಳಿಗೆ ಕಬ್ಬಿಣದ ಸರಳುಗಳನ್ನು ಅಳವಡಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ವಿಭಾಗಗಳಿಗೆ ಸೂಚನೆಗಳು ನೀಡಲಾಗುತ್ತಿದ್ದು ಇದಲ್ಲದೇ, ಸಾರ್ವಜನಿಕರೇ ಸಂಸ್ಥೆಯ ಮೂಲಾಧಾರವಾಗಿರುವುದರಿಂದ ಸಾರ್ವಜನಿಕರ ಪ್ರಯಾಣಿಕರ ಹಾಗೂ ನೌಕರರ ಹಿತದೃಷ್ಟಿಯಿಂದ ಸಂಸ್ಥೆಯ ಸುತ್ತೋಲೆಯನ್ವಯ ನಿಗಮದ ವಾಹನಗಳಲ್ಲಿ, ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ/ಕಛೇರಿ/ಘಟಕ/ವಿಭಾಗೀಯ ಕಾರ್ಯಾಗಾರ/ತರಬೇತಿ ಕೇಂದ್ರ ಹಾಗೂ ಕ್ಯಾಂಟೀನ್ ಆವರಣಗಳಲ್ಲಿ ಧೂಮಪಾನ ಮಾಡುವ ಅಹಿತಕರ ಅಭ್ಯಾಸವನ್ನು ಹಾಗೂ ಉಗುಳುವ ಅಭ್ಯಾಸವನ್ನು ನಿವಾರಿಸಲು ಶಿಸ್ತಿನ ಮನೋಭಾವವನ್ನು ಮೂಡಿಸಲು ಹಾಗೂ ಉತ್ತಮ ಆರೋಗ್ಯಕರ ಪರಿಸರವನ್ನು ನಿರ್ಮಿಸುವ ನಿಟ್ಟಿನಲ್ಲಿ "ಇಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ ರೂ.100/-ಗಳ "ದಂಡವನ್ನು ವಿಧಿಸಲಾಗುವುದು" ಎಂಬ ಮಾಹಿತಿಯನ್ನು ಹಾಗೂ "ಧೂಮಪಾನ ನಿಷೇಧಿಸಿದೆ /NO SMOKING" ಎಂಬ ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಸೂಚನಾ ಫಲಕಗಳನ್ನು ಪ್ರದರ್ಶಿಸುವ ಜೊತೆಗೆ ಸದರಿ ಆದೇಶಗಳನ್ನು ಉಲ್ಲಂಘಿಸಿದ ನೌಕರರಿಗೆ ಹಾಗೂ ಸಾರ್ವಜನಿಕರಿಗೆ ತಲಾ ರೂ. 200/-ಗಳ ದಂಡವನ್ನು ವಿಧಿಸುವ ಜೊತೆಗೆ ಧೂಮಪಾನ ಮಾಡಬಾರದೆಂದು ಕಟ್ಟುನಿಟ್ಟಾಗಿ ತಿಳುವಳಿಕೆ ನೀಡಲು ಕ್ರಮ ಕೈಗೊಳ್ಳಲಾಗಿರುತ್ತದೆ ಮುಂದುವರೆದು, ನಿಗಮದ ಎಲ್ಲಾ ಬಸ್ ನಿಲ್ದಾಣ/ಘಟಕಗಳ ಬಳಿ ಸಾರ್ವಜನಿಕ ಪ್ರಯಾಣಿಕರಿಗೆ ಚಾಲಕ, ನಿರ್ವಾಹಕ ಹಾಗೂ ಇತರೆ ಸಿಬ್ಬಂದಿಗಳಿಗೆ ತಂಬಾಕು, ಪಾನ್ ಮಸಾಲ, ಸಿಗರೇಟ್ ಸೇವನೆಯಿಂದ ಉಂಟಾಗುವ ಕುರಿತು ಅರಿವು ಮೂಡಿಸುವಂತಹ ಛಾಯಾ ಚಿತ್ರಗಳನ್ನು ಪ್ರದರ್ಶಿಸಿ ಧ್ವನಿವರ್ದಕ ಹಾಗೂ PIS (Passenger Information System) /LED Board) ಡಿಸಿಪ್ಲೇ ಹಾಗೂ ಭಿತ್ತಿ ಪತ್ರಗಳನ್ನು ಹಂಚುವುದರ ಮೂಲಕ ಜಾಗೃತಿ ಮೂಡಿಸುವುದರೊಂದಿಗೆ ಬಸ್ ನಿಲ್ದಾಣಗಳ ಸ್ವಚ್ಚತೆ ಮತ್ತು ನೈರ್ಮಲ್ಯತೆಯನ್ನು ಕಾಪಾಡುವಂತೆ ಸಂದೇಶ ನೀಡಲಾಗಿರುತ್ತದೆ.
ಆದ್ದರಿಂದ, ನಿಗಮದ ಎಲ್ಲಾ ಬಸ್‌ಗಳಲ್ಲಿ ಕಬ್ಬಿಣದ ಸರಳುಗಳನ್ನು ಅಳವಡಿಸುವ ಬಗ್ಗೆ ವಿಭಾಗಗಳಿಗೆ ಈಗಾಗಲೇ ಸೂಚನೆ ನೀಡಿರುವುದನ್ನು ಹಾಗೂ ಬಸ್ಸುಗಳಲ್ಲಿ ತಂಬಾಕು, ಧೂಮಪಾನ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿರುವುದನ್ನು ತಮ್ಮ ಆದ್ಯ ಗಮನಕ್ಕೆ ತರುತ್ತಾ, ಮುಂದಿನ ದಿನಗಳಲ್ಲಿ ಈ ರೀತಿಯ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಕಟ್ಟುನಿಟ್ಟಿನ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಸಂಸ್ಥೆಯ ಮುಖ್ಯ ಯಾಂತ್ರಿಕ ಅಭಿಯಂತರ ಕೆ.ಹೆಚ್. ಶ್ರೀನಿವಾಸ್ ರವರು ಮೋಹನ್ ಕುಮಾರ್ ದಾನಪ್ಪನವರಿಗೆ ಪತ್ರದ ಮೂಲಕ ತಿಳಿಸಿರುತ್ತಾರೆ!

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ