ಚೆನ್ನಮ್ಮ ವೃತ್ತದಲ್ಲಿ ರೈತರ ರಸ್ತೆ ತಡೆಗೆ ವಿವಿಧ ಸಂಘಟನೆಗಳ ಬೆಂಬಲ..
ಕಾಗವಾಡ:ಕಬ್ಬಿಗೆ ಪ್ರತಿ ಟನ್ಗೆ ₹5,500 ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶನಿವಾರ ಕಾಗವಾಡದ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಹೋರಾಟ ನಡೆಸಲಾಗುವುದು ಎಂದು ಪ್ರಗತಿಪರ ರೈತ ಎಂ.ಬಿ. ಉದಗಾಂವೆ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಬೇಡಿಕೆಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಸೂಕ್ತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು. ಈ ಹೋರಾಟಕ್ಕೆ ನ್ಯಾಯವಾದಿಗಳ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘ ಬೆಂಬಲ ಸೂಚಿಸಿವೆ ಎಂದು ತಿಳಿಸಿದರು.
ಕಬ್ಬಿಗೆ ನ್ಯಾಯಯುತ ಬೆಲೆ ಸಿಗುತ್ತದೆಯೇ? ರೈತರ ಹೋರಾಟಕ್ಕೆ ಸರ್ಕಾರ ಹೇಗೆ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಈ ಸಮಯದಲ್ಲಿ ಹಸಿರು ಸೇನೆ ರೈತ ಸಂಘದ ಅಧ್ಯಕ್ಷ ಶರದ ಪಾಟೀಲ,ಉಪಾಧ್ಯಕ್ಷ ನಾನಾಸಾಹೇಬ ಶಿರಗೂರೆ, ಕಾರ್ಯದರ್ಶಿ ಜನಸೇವಕ ವಿನಾಯಕ ಕಾಂಬಳೆ,ಕಾಕಾ ಪಾಟೀಲ, ಬಸಗೌಡ ಪಾಟೀಲ,ಪ್ರಮೋದ ಪೂಜಾರಿ, ಬಸವರಾಜ ಮಗದುಮ್ಮ ,ಸಿದ್ದು ಒಡೆಯರ, ಗಣೇಶ ಕೊಳೆಕರ,ಅರುಣ ಬಾಲೋಜಿ, ಆದಿನಾಥ ಬಿಂದಗೆ, ರಾವಸಾಬ ಜುಗೂಳೆ ಉಪಸ್ಥಿತರಿದ್ದರು.