ನೇಸರಗಿ. ಸಮೀಪದ ಮೇಕಲಮರಡಿ ಗ್ರಾಮದ ವಿದ್ಯಾರ್ಥಿಗಳಿಂದ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದಿನನಿತ್ಯ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಸಮಸ್ಯೆಆಗುತ್ತಿದ್ದು, ಸರಿಯಾದ ಸಮಯಕ್ಕೆ ಕ್ಲಾಸ್ ಗೆ ಹೋಗಲು ಆಗುತ್ತಿಲ್ಲ, ಇದರ ಸಲುವಾಗಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡರು ಕ್ರಮ ತೆಗೆದುಕೊಂಡಿಲ್ಲ. ಇದಕ್ಕೆ ಕ್ಯಾರೇ ಅನ್ನದ ಸಾರಿಗೆ ಇಲಾಖೆಗೆ ಮುಂದಿನ ವ್ಯಾಸಂಗಕ್ಕಾಗಿ ತೆರೆಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯವೇನು? ತಕ್ಷಣ ಬಸ್ಸಿನ ಸಂಚಾರ ಸಮಸ್ಯೆಯನ್ನು ಬಗೆಹರಿಸುವರೆಗೆ ಹೋರಾಟ ನಿರಂತರವಾಗಿರುತ್ತದೆ. ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ಸರಿಯಾದ ಸಮಯಕ್ಕೆ ಬಸ್ ಬರುವ ವ್ಯವಸ್ಥೆ ಆಗಬೇಕು, ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವದೆಂದು ಗ್ರಾಮದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಗ್ರಾಮದ ಹಿರಿಯರು, ಗ್ರಾಮಸ್ಥರು ತಿಳಿಸಿದ್ದಾರೆ.