Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ  


ಬಳ್ಳಾರಿ,ಸೆ.೦2: ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಆಗ್ರಹಿಸಿ ಎಸ್.ಜಿ.ಆರ್.ಸಿ.ಎಮ್. ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂದೆ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಓ ರಾಜ್ಯ ಖಜಾಂಚಿಗಳು ಸುಭಾಷ್.ಬಿ.ಜಿ ಮಾತನಾಡಿ, ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷರು ಕೆ ಈರಣ್ಣ ಮತ್ತು ವಿದ್ಯಾರ್ಥಿಗಳು ನರೇಂದ್ರ, ಭೀಮಣ್ಣ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ