Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಳ್ಳಬೇಕು : ದೊಡ್ಡನಗೌಡ ಪಾಟೀಲ


ಕೊಪ್ಪಳ,ಜು,೦೬: ಇಂದಿನ ಯುಗದಲ್ಲಿ ಎಲ್ಲಾ ವ್ಯವಸ್ಥೆಗಳು ಆನ್‌ಲೈನ್ ಆಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೀರ್ತಿ ತರಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ತಿಳಿಸಿದರು.
    ಜಿಲ್ಲೆಯ ಹನುಮಸಾಗರ ಪಟ್ಟಣದ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ದೇವಾಂಗ ಸಮಾಜ, ಡಾ. ಎಸ್.ಜಿ. ಬಿಜ್ಜಳ ಸ್ಮಾರಕ ಪ್ರತಿಷ್ಠಾನ, ಜಿಲ್ಲಾ ದೇವಾಂಗ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ದೇವಾಂಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕುಷ್ಟಗಿ ತಾಲೂಕು ದೇವಾಂಗ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
     ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ೫ ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು. ದೇವಾಂಗ ಸಮಾಜದ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಬೆಂಬಲ ಸದಾ ಇರುತ್ತದೆ ಎಂದರು. ಸಮಾಜದ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡುವುದಾಗಿ ಭರವಸೆ ನೀಡಿದರು. 
      ಜಿಲ್ಲಾ ದೇವಾಂಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಿವಶಂಕರ ಕರಡಕಲ್ ಮಾತನಾಡಿ, ಜಿಲ್ಲಾಮಟ್ಟದಲ್ಲಿ ಪ್ರತಿಭಾ ಪುರಸ್ಕಾರ, ಸಾಧಕರ ಸನ್ಮಾನ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಮಾಜದಲ್ಲಿ ಅಪಾರ ಜ್ಞಾನ ಹಾಗೂ ಸಾಧನೆ ಮಾಡಿದ ಅನೇಕ ಮಂದಿಯನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಮಾಜದ ಪ್ರತಿಯೊಬ್ಬರೂ ಸಮರ್ಪಕವಾಗಿ ಪಡೆದುಕೊಳ್ಳಬೇಕು ಎಂದು ಹೇಳಿದರು.
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ. ಮಹೇಶ್ ಮಾತನಾಡಿ, ಇಂದಿನ ದಿನಗಳಲ್ಲಿ ನೇಕಾರರ ಬದುಕು ಸಂಕಷ್ಟದಲ್ಲಿದೆ. ಯುವಕರು ಉತ್ತಮ ಶಿಕ್ಷಣ ಪಡೆದು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು. ಸಮಾಜದ ಅಗತ್ಯ ಕಾರ್ಯಗಳಿಗೆ ತಾವು ಸದಾ ಸಹಕಾರ ನೀಡುವುದಾಗಿ ತಿಳಿಸಿದರು.
     ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಮಾತನಾಡಿ, ಸಮಾಜ ಸಂಘಟಿತವಾದರೆ ಯಾವುದೇ ಗುರಿಯನ್ನು ಸಾಧಿಸಬಹುದು. ಶಿಕ್ಷಣವೇ ಸಮಾಜದ ಸುಧಾರಣೆಯ ಪ್ರಮುಖ ಸಾಧನವಾಗಿದ್ದು, ಜಿಲ್ಲೆಯಲ್ಲಿ ದೇವಾಂಗ ಸಮಾಜಕ್ಕೆ ಪ್ರತ್ಯೇಕ ವಸತಿ ನಿಲಯ ಸ್ಥಾಪಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.
     ದೇವಾಂಗ ಸಮಾಜದ ಜಗದ್ಗುರು ದಯಾನಂದ ಪುರಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. 
ಕಾರ್ಯಕ್ರಮದಲ್ಲಿ ಮುಖಂಡರಾದ ಬಸವರಾಜ ಹಳ್ಳೂರ, ಶಿವಶಂಕರ ಚೆನ್ನಿ, ನಾರಾಯಣಪ್ಪ ಕೊಳ್ಳಿ, ಶಂಕ್ರಪ್ಪ ಸಿನ್ನೂರ, ಶಿವನಗೌಡ ಪಾಟೀಲ, ವಿಶ್ವನಾಥ ಯಾಳಗಿ, ಚಂದ್ರಶೇಖರ ಬೆಟಗೇರಿ, ಧರ್ಮಜ್ಜ ಕುದರಿಮೊತಿ, ಬಸವಂತಪ್ಪ ಸಿಂಹಾಸನ, ಹನುಮಂತಗೌಡ ಗಾಳಿ, ಪ್ರಲ್ಹಾದಗೌಡ ಮೆದಿಕೇರಿ, ರಾಘವೇಂದ್ರ ಕೊಂಡಕುಂದಿ, ಕೆ. ಮಹೇಶ್, ಮೋಹನ್ ಹುಲಮನಿ, ಪಂಪಾಪತಿ ಅರಳಿಕಟ್ಟಿ, ವಿರೇಶ ಅರಳಿಕಟ್ಟಿ, ಶ್ರೀನಿವಾಸ ಕಂಟ್ಲಿ ಸೇರಿದಂತೆ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿದ್ದರು.
==

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ