ಬಳ್ಳಾರಿ: 30.ನಗರದ ಶ್ರೀಮತಿ ಸರಳಾ ದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು.
ಕಾರಾಗೃಹದ ಆಡಳಿತ ಕ್ರಮ, ಕೈದಿಗಳ ಪುನರ್ವಸತಿ ಕಾರ್ಯಕ್ರಮಗಳು, ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ವಿವರಿಸಿದರು. ವಿದ್ಯಾರ್ಥಿಗಳು ಕಾರಾಗೃಹದ ವಿವಿಧ ವಿಭಾಗಗಳನ್ನು ವೀಕ್ಷಿಸಿ ಮಾಹಿತಿ ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಹ್ಲಾದ್ ಚೌದ್ರಿ, ಇತಿಹಾಸ ವಿಭಾಗದ ಮುಖ್ಯಸ್ಥೆ ನಾಜೀಯ ಖಾಜಿ, ಸಹಾಯಕ ಪ್ರಾಧ್ಯಾಪಕ ಬಸಪ್ಪ ಹಾಗೂ ಇತರ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು.
