ರಾಮದುರ್ಗ: ತಾಲೂಕಿನ ಚಿಪ್ಪಲಕಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರಿಯಾಶೀಲ ಶಿಕ್ಷಕ ಸುಭಾಸ ಕುಲಗೋಡ ಅವರು ಮಾಜಿ ಪ್ರಧಾನಿ ರಾಜೀವಗಾಂಧಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸೆಪ್ಟೆಂಬರ್ ೫ ರಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ಅವರು ಶಿಕ್ಷಕ ಸುಭಾಸ ಕುಲಗೋಡ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವರಾದ ರಾಣಿ ಸತೀಶ್, ಹೆಚ್ ಆಂಜನೇಯ, ವಿಧಾನ ಪರಿಷತ್ತಿನ ಸದಸ್ಯರು, ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ಸೇರಿದಂತೆ ಮುಂತಾದವರು ಇದ್ದರು.
ಪ್ರಶಸ್ತಿ ಪಡೆದ ಸುಭಾಸ ಕುಲಗೋಡ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ, ಸಮನ್ವಯಾಧಿಕಾರಿ ಶಿವಾನಂದ ಛಾಯಪ್ಪಗೋಳ, ಹುಲಕುಂದ ಸಿ.ಆರ್.ಪಿ ವಿಠ್ಠಲ ದಳವಾಯಿ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಯ ಅಧ್ಯಕ್ಷ ಎಸ್.ವಿ ಪಾಟೀಲ, ಪದಾಧಿಕಾರಿಗಳಾದ ಎಲ್.ಎಂ ಅಣ್ಣಿಗೇರಿ, ಅಶೋಕ ಬೂದಿ, ರಮೇಶ ಅಣ್ಣಿಗೇರಿ, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಾಲೆಯ ಶಿಕ್ಷಕರು ಹಾಗೂ ಮೆಚ್ಚಗೆ ವ್ಯಕ್ತಪಡಿಸಿದ್ದಾರೆ.