Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಕಿವಿಗೆ ಹೂವು ಮುಡಿಸಿದ ಕಾಂಗ್ರೆಸ್ ಸರ್ಕಾರ : ಜಿಲ್ಲಾಧ್ಯಕ್ಷ ಸುಭಾಷ  ಪಾಟೀಲ

ಬೆಳಗಾವಿ. ಮಾ. 13.ಜನರ ವಿರೋಧಿ ಹಾಗೂ ರೈತ ವಿರೋಧಿ ಬಜೆಟ್ ಮಂಡಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಜಿಲ್ಲೆಯ ವತಿಯಿಂದ ನಡೆದ ಪ್ರತಿಭಟನೆಯು ನಗರದ ರಾಣಿ ಚೆನ್ನಮ್ಮ ಸರ್ಕಲ್ ದಲ್ಲಿ ರಸ್ತೆ ತಡೆ ಮಾಡಿ ಅಪಾರ ಸಂಖ್ಯೆಯ ಕಾರ್ಯಕರ್ತರು  ಚಕ್ಕಡಿ, ಟ್ರ್ಯಾಕ್ಟರ್ ಗಳ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ತೆರಳಿ  ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ  ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ  ಮಾತನಾಡಿ ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊನ್ನೆ ಮಂಡಿಸಿರುವ ರಾಜ್ಯದ 2025-26ರ ಬಜೆಟ್

ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ.


ಇದು ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ. ಶಿಕ್ಷಣದ ಕ್ಷೇತ್ರದ ಸಮಗ್ರಅಭಿವೃದ್ಧಿ ಬಗ್ಗೆ ಯಾವುದೇ ಕೊಡುಗೆ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಅವಕಾಶವಿರುವ ಕೈಗಾರಿಕೆಗಳಿಗೆ ಉತ್ತೇಜನವೇ ಇಲ್ಲಎಂದು ಬಿಜೆಪಿ ಆಕ್ಷೇಪಿಸುತ್ತದೆ.ವಿಶೇಷವಾಗಿ ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದೆ.ದಿನೇ ದಿನೇ ಗ್ರಾಮೀಣ ಪ್ರದೇಶಗಳಿಂದ ಗುಳೇ ಹೋಗುವ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ, ಅದನ್ನು ತಡೆಯುವಯಾವುದೇ ಕಾರ್ಯಕ್ರಮವನ್ನೂ ಪ್ರಕಟಿಸಿಲ್ಲ. ಹಾಗಾಗಿ ಇದು ಗ್ರಾಮೀಣ ಹಾಗೂ ರೈತ ವಿರೋಧಿ ಬಜೆಟ್ ಎಂದುಗಮನ ಸೆಳೆಯುತ್ತಿದ್ದೇವೆ.


ಸರ್ಕಾರಿ ಶಾಲೆಗಳ ಕಟ್ಟಡಗಳ ವಿಸ್ತರಣೆ ಹಾಗೂ ನವೀಕರಣಕ್ಕೆ ಬಜೆಟ್ ನಲ್ಲಿ ಯಾವುದೇ ಹಣ ನೀಡದೇ, ಕೇವಲ5,000 ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಗುಣಮಟ್ಟದ ಶಿಕ್ಷಣ ಹಾಗೂಮೂಲ ಸೌಕರ್ಯದತ್ತ ದೃಷ್ಟಿ ಹರಿಸದೆ ಕೈ ತೊಳೆದುಕೊಳ್ಳಲಾಗಿದೆ. 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಖಂಡನಾರ್ಹ ಎಂದು ತಿಳಿಸುತ್ತಿದ್ದೇವೆ.


ಸಾಂಸ್ಕೃತಿಕ ವಲಯ ಹಾಗೂ ಪ್ರವಾಸೋದ್ಯಮವನ್ನು ಬಹುವಾಗಿ ವಿಸ್ತರಿಸುವ ನಿರ್ದಿಷ್ಟವಾದ ಯೋಜನೆಗಳನ್ನುಬಜೆಟ್ ನಲ್ಲಿ ಪ್ರಕಟಿಸದೇ ಈ ಕ್ಷೇತ್ರಗಳಬೆಳವಣಿಗೆ ಪ್ರೋತ್ಸಾಹ ನೀಡುವ ಪೊಳ್ಳು ಭರವಸೆ ನೀಡಲಾಗಿದೆ. ಪರಿಶಿಷ್ಟ,ಹಿಂದುಳಿದ ಹಾಗೂ ಅತಿ ಹಿಂದುಳಿದ ಸಮುದಾಯದವರ ಜಪ ಮಾಡಿ ರಾಜಕೀಯವಾಗಿ ಬೆಳೆದು ಬಂದಸಿದ್ದರಾಮಯ್ಯನವರು ಈ ಸಮುದಾಯಗಳ ಏಳಿಗೆಗೆ ಯಾವ ಯೋಜನೆಗಳನ್ನೂ ಪ್ರಕಟಿಸಿಲ್ಲ. ವಿವಿಧ ಹಿಂದುಳಿದ

ವರ್ಗಗಳ ನಿಗಮಗಳಿಗೆ ಈ ಹಿಂದಿನ ಬಜೆಟ್ ನಲ್ಲಿ ಘೋಷಣೆಯಾದ ಪೂರ್ಣ ಪ್ರಮಾಣದ ಅನುದಾನವನ್ನೇಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಅನಿಲ್ ಬೆನಕೆ, ಮಹಾಂತೇಶ ದೊಡ್ಡಗೌಡರ, ಬಿ.ಜೆ.ಪಿ ಹಿರಿಯ ಮುಖಂಡರಾದ ಎಂ.ಬಿ.ಜಿರಲಿ ಅವರು ಮಾತನಾಡಿ  ಕುಲಕಸುಬು ಆಧಾರಿತ ಸಮುದಾಯಗಳ ಬದುಕು ರಕ್ಷಿಸಲು ಯಾವುದೇ ಕಾರ್ಯಕ್ರಮಗಳನ್ನು ಕೊಡದೇ ಕೇವಲ ಅಧಿಕಾರಕ್ಕೆಬರಲು ಮಾತ್ರ ದಲಿತ, ಹಿಂದುಳಿದವರ ಜಪ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅಭಿವೃದ್ಧಿಯಲ್ಲಿ ಹಿಂದುಳಿದಸಮುದಾಯಗಳ ಕಷ್ಟದ ತಾಪವನ್ನು ಕಡಿಮೆ ಮಾಡುವ ಯಾವುದೇ ಯೋಜನೆ ಪ್ರಕಟಿಸದೇ ಒಬಿಸಿ ಸಮುದಾಯಗಳಹಿತಾಸಕ್ತಿಯನ್ನು ಪೂರ್ಣ ಕಡೆಗಣಿಸಲಾಗಿದೆ.


ಶಿಕ್ಷಣ ತರಬೇತಿ ಪಡೆದು ಉದ್ಯೋಗಕ್ಕಾಗಿ ಕಾದು ಕುಳಿತಿರುವ ಶಿಕ್ಷಕ ಸಮುದಾಯವನ್ನು ಸಂಪೂರ್ಣ ನಿರಾಸೆಗೊಳಿಸುವಮೂಲಕ ಶಿಕ್ಷಣ ಕ್ಷೇತ್ರವನ್ನು ಗಟ್ಟಿಗೊಳಿಸುವಲ್ಲಿ ತನ್ನ ನಿರಾಸಕ್ತಿಯನ್ನು ಮುಖ್ಯಮಂತ್ರಿ ಬಜೆಟ್‌ ಮೂಲಕ ತೋರಿಸಿದ್ದಾರೆ.ಕೆಳ ಮಧ್ಯಮ ವರ್ಗಗಳ ಅಭ್ಯುದಯ ಕೇಂದ್ರೀಕರಿಸುವ ಯಾವ ಯೋಜನೆಯೂ ಇಲ್ಲ. ವಸತಿ ಸಮಸ್ಯೆ ನೀಗಿಸಲು ಈಬಜೆಟ್ ನಲ್ಲಿ ಯಾವುದೇ ಯೋಜನೆ ಪ್ರಕಟಿಸಿಲ್ಲದಿರುವುದು ಈ ಸರ್ಕಾರ ಕೇವಲ ಬಡವರ ವಿರೋಧಿ ಅಷ್ಟೇ ಅಲ್ಲ,ಮಧ್ಯಮ ಹಾಗೂ ಕೆಳವರ್ಗಗಳ ವಿರೋಧಿ ಎನ್ನುವುದನ್ನು ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ತೋರಿಸಿದ್ದಾರೆ.


ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ ಮಾತನಾಡಿ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಕೇವಲ ಕಾಗದದಲ್ಲೇ ಉಳಿಯುವ ಸಾಧ್ಯತೆ ಗೋಚರವಾಗುತ್ತಿದೆ. 'ಹೇಳುವುದುಒಂದು ಮಾಡುವುದು ಇನ್ನೊಂದು' ಎಂಬಂತೆ ಈ ಬಜೆಟ್ ಆಗಬಾರದು, ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿದ್ದವೆಲ್ಲವೂಘೋಷಣೆಯಾಗಿಯೇ ಉಳಿದಿದೆ, ಈ ಬಜೆಟ್ ಗೂ ಅದೇ ಗತಿ ಆಗುವ ಸಾಧ್ಯತೆಯೇ ಹೆಚ್ಚು ಎನ್ನುವುದು ರಾಜ್ಯದ ದಯನೀಯ ಆರ್ಥಿಕ ಪರಿಸ್ಥಿತಿ ಹೇಳುತ್ತಿದೆ ಎಂದು ತಿಳಿಸುತ್ತಿದ್ದೇವೆ.


ತನ್ನ ತೆರಿಗೆ ಪಾಲನ್ನು ಪಡೆಯುವಲ್ಲಿ ಎಡವಿ ಬಿದ್ದಿರುವ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಕೇಂದ್ರಸರ್ಕಾರದ ಮೇಲೆ ಆರೋಪ ಹೊರಿಸುವ ಅಂಶಗಳನ್ನು ಸೇರಿಸಿಕೊಂಡು ರಾಜ್ಯದ ಆರ್ಥಿಕ ಸ್ಥಿತಿಯ ನಿರ್ವಹಣೆಯ ವೈಫಲ್ಯವನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ. ಕೃಷಿಕರು, ಕಾರ್ಮಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು,ಎನ್‌ಎಚ್ ಎಂ ನೌಕರರು ಸೇರಿದಂತೆ ಶ್ರಮಿಕ ವರ್ಗಗಳನ್ನು ಕಡೆಗಣಿಸಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿಘೋಷಿಸಿದ್ದ ಯಾವುದೇ ಅಂಶಗಳನ್ನು ಬಜೆಟ್ ನಲ್ಲಿ ಕಾರ್ಯಗತಗೊಳಿಸಲು ಯಾವುದೇ ಹೊಸ ಭರವಸೆಯ ಹೆಜ್ಜೆಇಡದೇ ಕೊಟ್ಟ ಮಾತು ತಪ್ಪಿದ ಜನ ವಿರೋಧಿ ಬಜೆಟ್ ಅನ್ನು ಮಾನ್ಯ ಮುಖ್ಯಮಂತ್ರಿಗಳು ಮಂಡಿಸಿದ್ದಾರೆ ಎಂದುತಿಳಿಸಲು ಬಯಸುತ್ತೇವೆ.


ತಾವು ಘೋಷಿಸಿರುವ ಹೊಸ ಕಾರ್ಯಕ್ರಮಗಳಿಗೆ ಹಾಗೂ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿಜನರಿಗೆ ಹೊರೆಯಾಗದ ರೀತಿಯಲ್ಲಿ ಸಂಪನ್ಮೂಲ ಕ್ರೋಡೀಕರಣದ ಮೂಲಗಳನ್ನು ಸ್ಪಷ್ಟವಾಗಿ ಎಲ್ಲಿಯೂ ವಿವರಿಸಿಲ್ಲ.ಆ ಮೂಲಕ ಇದೊಂದು ತೋರಿಕೆಯ ಹಾಗೂ ಜನರ ಕಿವಿಗೆ ಹೂ ಮುಡಿಸುವ ಬಜೆಟ್ ಆಗಿದೆ ಎಂಬುದು ಸ್ಪಷ್ಟವಾಗಿಗೋಚರಿಸುತ್ತದೆ ಎಂದು ತಿಳಿಸುತ್ತಿದ್ದೇವೆ.


ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುವ ಅಂಶಗಳನ್ನು ಮತ್ತು ರೈತಪರ ನಿಲುವು- ಯೋಜನೆಗಳನ್ನು ಒಳಗೊಳ್ಳಬೇಕೆಂದುಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ  ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಮಾದಮ್ಮನವರ ,ಸಂದೀಪ ದೇಶಪಾಂಡೆ ,ಧನಶ್ರೀ ದೇಸಾಯಿ, ಮುಖಂಡರಾದ ಮುರುಗೇಂದ್ರಗೌಡ ಪಾಟೀಲ, ಸೋನಾಲಿ ಸರ್ನೋಬತ್, ಕಲ್ಲಪ್ಪ ಶಹಾಪೂರಕರ, ಈರಣ್ಣ ವಾರದ,ಪ್ರಮೋದ ಕೋಚೇರಿ, ಬಸನಗೌಡ ಕೊಳದೂರ, ಮಾರುತಿ ಕೊಪ್ಪದ, ಸಚಿನ್ ಕಡಿ, ಸಂತೋಷ್ ದೇಶನೂರ, ಮಹಾಂತೇಶ ಚಿನ್ನಪ್ಪಗೌಡ್ರ, ವಿಠ್ಠಲ ಸಾಯಣ್ಣವರ, ಮನೋಜ್ ಪಾಟೀಲ, ವೀರಭದ್ರ ಪೂಜಾರಿ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ