Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್

ಬಳ್ಳಾರಿ: ಎಸ್‌ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ



ಬಳ್ಳಾರಿ,ಜು.17 : ಎಸ್‌ಐಆರ್ ಅಂಗವಾಗಿ ಮನೆ ಮನೆಗೆ ವಿತರಿಸಲಾಗಿರುವ ಪ್ರಿ-ಪ್ರಿಂಟೆಡ್ ಭಾವಚಿತ್ರ ಹೊಂದಿರುವ ‘ಗಣತಿ ನಮೂನೆ' ಅನ್ನು ಭರ್ತಿ ಮಾಡಿ ಸಲ್ಲಿಸುವುದು ಅತ್ಯಂತ ಕಡ್ಡಾಯವಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರ್ಕು ಹೇಳಿದರು.
ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್ ಸಹಯೋಗದೊಂದಿಗೆ ನಗರದ ಮೊಹಮ್ಮದಿಯಾ ಹೈಸ್ಕೂಲ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ‘ವಿಶೇಷ ತೀವ್ರ ಪರಿಷ್ಕರಣೆ' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಳ್ಳಾರಿಯಲ್ಲಿ ಸದ್ಯ ಶೇ. 30 ರಿಂದ 40 ರಷ್ಟು ಮಾತ್ರ ಫಾರ್ಮ್ ಗಳು ಸಲ್ಲಿಕೆಯಾಗಿದ್ದು, ಉಳಿದ ಶೇ. 60 ರಷ್ಟು ಜನರು ಇನ್ನೂ ಫಾರ್ಮ್ ಗಳನ್ನು ಮನೆಯಲ್ಲೇ ಇಟ್ಟುಕೊಂಡಿದ್ದಾರೆ. ಒಂದು ವೇಳೆ ಈ ಫಾರ್ಮ್ ಅನ್ನು ಸಲ್ಲಿಸದಿದ್ದರೆ, ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.
*ಅರ್ಜಿ ಸಲ್ಲಿಕೆಗೆ ಆಗಸ್ಟ್ 10 ರವರೆಗೆ ಕಾಲಾವಕಾಶ ವಿಸ್ತರಣೆ:*
ಕರ್ನಾಟಕದಲ್ಲಿ ಈ ಗಣತಿ ನಮೂನೆಗಳನ್ನು ಸಲ್ಲಿಸಲು ಈ ಹಿಂದೆ ಜುಲೈ ಅಂತ್ಯದವರೆಗೆ ಇದ್ದ ಗಡುವನ್ನು ಈಗ ಆಗಸ್ಟ್ 10 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ತಮ್ಮ ಭಾಗದ ಬ್ಲಾಕ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣವೇ ಫಾರ್ಮ್ ಗಳನ್ನು ಸಲ್ಲಿಸುವಂತೆ ಕೋರಿದರು.
ಪ್ರತಿ ಗಣತಿ ನಮೂನೆಯ ಮೇಲ್ಭಾಗದಲ್ಲಿಯೇ ಸಂಬAಧಪಟ್ಟ ಬ್ಲಾಕ್ ಮಟ್ಟದ ಅಧಿಕಾರಿಯ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಲಾಗಿರುತ್ತದೆ. ಯಾವುದೇ ಗೊಂದಲಗಳಿದ್ದಲ್ಲಿ ಅವರನ್ನು ನೇರವಾಗಿ ಸಂಪರ್ಕಿಸಬಹುದು. ನಗರಗಳಿಗೆ ಕಾಯಂ ಆಗಿ ವಲಸೆ ಹೋದವರ ಹೆಸರನ್ನು ಸ್ಥಳೀಯ ಮತದಾರರ ಪಟ್ಟಿಯಿಂದ ತೆಗೆದುಹಾಕಿ, ಅವರು ಪ್ರಸ್ತುತ ಇರುವ ನಗರದ ಪಟ್ಟಿಗೆ ಸೇರಿಸಬೇಕಾಗುತ್ತದೆ. ಹಾಗೆಯೇ, ಮೃತಪಟ್ಟ ವ್ಯಕ್ತಿಗಳ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದು ಅತ್ಯಗತ್ಯ. ಇಲ್ಲದಿದ್ದರೆ ಬೋಗಸ್ ಮತದಾನಕ್ಕೆ ದಾರಿಯಾಗಲಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಹಾಗಾಗಿ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ, ನೆರೆಹೊರೆಯವರಿಗೆ ಹಾಗೂ ಸಂಬAಧಿಕರಿಗೆ ಎಸ್‌ಐಆರ್ ಫಾರ್ಮ್ ಅನ್ನು ನಿಖರವಾಗಿ ಭರ್ತಿ ಮಾಡಿ ಸಕಾಲದಲ್ಲಿ ಸಲ್ಲಿಸುವಂತೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡದ ಅವರು, ಮತದಾರರ ಪಟ್ಟಿಯಲ್ಲಿ ಯಾವುದೇ ತಪ್ಪುಗಳಿಲ್ಲದಂತೆ ದೋಷಮುಕ್ತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.
ಜಿಪA ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಅವರು ಮಾತನಾಡಿ, 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕನಿಗೂ ಮತದಾನದ ಹಕ್ಕನ್ನು ಖಾತರಿಪಡಿಸುವ ಉದ್ದೇಶದಿಂದ ವಿಶೇಷ ತೀವ್ರ ಪರಿಷ್ಕರಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನಿಮ್ಮ ಮನೆಗಳಲ್ಲಿ ಅಥವಾ ಸುತ್ತಮುತ್ತಲಿನ ಪರಿಸರದಲ್ಲಿ 18 ವರ್ಷ ಪೂರೈಸಿದರೂ, ಇನ್ನು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸದೇ ಇರುವವರಿದ್ದರೆ, ತಕ್ಷಣವೇ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಬರುವ ಜುಲೈ 29ರ ನಂತರ, ಸಾರ್ವಜನಿಕರು ಆನ್‌ಲೈನ್ ಮೂಲಕ ಫಾರ್ಮ್ ನಂಬರ್ 6 ಅನ್ನು ಭರ್ತಿ ಮಾಡಿ ತಾವಾಗಿಯೇ ಸುಲಭವಾಗಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಈ ವೇಳೆ ಜಿಪಂ ಸಹಾಯಕ ನಿರ್ದೇಶಕ ಬಸವರಾಜ್ ಹಿರೇಮಠ್, ಬಳ್ಳಾರಿ ತಾಲ್ಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ ಬಾರೆಕರ, ಮೊಹಮ್ಮದಿಯ ಶಾಲಾ- ಕಾಲೇಜು ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಮುಜಾಮಿಲ್ ಸೇರಿದಂತೆ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ