Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳಕ್ಕೆ ಎಸ್.ಯು.ಸಿ.ಐ ಖಂಡನೆ

ಬಳ್ಳಾರಿ, ಮೇ.18: ಎಸ್.ಯು.ಸಿ.ಐ (ಸಿ) ಪಕ್ಷದ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವನ್ನು ವಿರೋಧಿಸಿ ಕುರುಗೋಡು ಪಟ್ಟಣದಲ್ಲಿಂದು ಪ್ರತಿಭಟನೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು 
ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಲೀಟರಿಗೆ ತಲಾ ರೂ. 3ರಂತೆ ಏರಿಸಿರುವ ಕ್ರಮವನ್ನು ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷವು ತೀವ್ರವಾಗಿ ಖಂಡಿಸುತ್ತದೆ. 
ಇಂಧನ ಬೆಲೆ ಏರಿಕೆಯು ಬೇರೆಲ್ಲ ಅವಶ್ಯಕ ವಸ್ತುಗಳನ್ನು ದುಬಾರಿಗೊಳಿಸಿ, ಹಣದುಬ್ಬರಕ್ಕೆ ಕಾರಣವಾಗುತ್ತಿದೆ. ಅಮೆರಿಕಾ - ಇಸ್ರೇಲ್ ಕೂಟವು ಇರಾನ್ ಮೇಲೆ ನಡೆಸುತ್ತಿರುವ ಯುದ್ಧವೇ ಈ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಬಿಜೆಪಿ ಸರ್ಕಾರವು ಸಮರ್ಥಿಸಿಕೊಳ್ಳುತ್ತಿದೆ. ಆದರೆ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಅವಕಾಶವನ್ನು ಅಮೆರಿಕಾದ ಒತ್ತಡಕ್ಕೆ ಮಣಿದು ಕೈಚೆಲ್ಲಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುವ ತೆರಿಗೆ ಗಳೇ ಇವೆ. 
ಹಾಗಾಗಿ ತಕ್ಷಣವೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಗಳನ್ನು ಕಡಿತಗೊಳಿಸಬೇಕು, ತೈಲ ಕಂಪನಿಗಳ ಲಾಭಕ್ಕಾಗಿ, ದೇಶದೊಳಗೆಯೇ ಶುದ್ಧೀಕರಣ ಮಾಡಿ ಉತ್ಪಾದಿಸುವ ಪೆಟ್ರೋಲ್ ಮತ್ತು ಡೀಸೆಲ್ ಗಳಿಗೆ ಜಾಗತಿಕ ದರಗಳನ್ನು ನಿಗದಿ ಮಾಡುವ ನೀತಿಯನ್ನು ಕೈಬಿಡಬೇಕು. ಈ ಯುದ್ಧವನ್ನು ನಿಲ್ಲಿಸಿ, ಬೇರೆ ದೇಶಗಳ ಆಂತರಿಕ ವ್ಯವಹಾರಗಳಲ್ಲಿ ಮೂಗು ತೂರಿಸದಂತೆ ಅಮೆರಿಕಾದ ಸಾಮ್ರಾಜ್ಯಶಾಹಿಗಳ ಮೇಲೆ ಭಾರತವು ಒತ್ತಡ ಹೇರಬೇಕು ಎಂದು ಆಗ್ರಹಿಸಿದರು
ಈ ಸಂಧರ್ಭದಲ್ಲಿ ಕುರುಗೋಡು ಸ್ಥಳೀಯ ಸಮಿತಿ ಕಾರ್ಯದರ್ಶಿ ಗೋವಿಂದ್, ಸಮಿತಿ ಸದಸ್ಯರಾದ ಗುರಳ್ಳಿ ರಾಜ , ಮಣಿಕಂಠ ಕಾರ್ಮಿಕರಾದ ಅಂಬರೀಷ್,  ಕುರಿ ಮಲ್ಲಯ್ಯ, ವೀರೇಶ್ , ತಿಪ್ಪೇಸ್ವಾಮಿ, ಬಸವರಾಜ್, ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ