ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, 1,500 ಕೋಟಿ ವೆಚ್ಚದ ಸರಗೂರಿನಿಂದ ಹೊಸಪುರಕ್ಕೆ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಅಂದಾಜು 90 ಕೋಟಿ ರೂ. ವೆಚ್ಚದ ಸತ್ತೇಗಾಲ ಕುಡಿವ ನೀರಿನ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದರಿಂದ ರಾಮನಗರ, ಮಾಗಡಿ, ಕುಣಿಗಲ್ ತಾಲೂಕುಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಸಮೀಕ್ಷೆ ನಡೆಸುವಂತೆ ಸಚಿವರು ಅಭಿಪ್ರಾಯ ನೀಡಿದ್ದಾರೆ. ಮುಂದಿನ ವಾರ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.