LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಲೋಕಸಭಾ ಚುನಾವಣೆ ವೇಳೆಯಲ್ಲಿ ಕೇಜ್ರಿವಾಲ್ ಬಂಧನ : ಇಡಿಯಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ನವದೆಹಲಿ30:  ಲೋಕಸಭಾ ಚುನಾವಣೆ ವೇಳೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿದ್ದು, ಇಡಿಯಿಂದ ಪ್ರತಿಕ್ರಿಯೆ ಕೇಳಿದೆ.

ಬಂಧನದ ಸಮಯ ಕುರಿತು ಪ್ರತಿಯಿಸುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರನ್ನು ಕೇಳಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠ, ಜೀವನ ಮತ್ತು ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದ್ದು, ಅದನ್ನು ನೀವು ಅಲ್ಲಗಳೆಯುವಂತಿಲ್ಲ ಎಂದು ಹೇಳಿದೆ.

ಎಸ್ ವಿ ರಾಜುಗೆ ಇತರ ಹಲವು ಪ್ರಶ್ನೆಗಳನ್ನು ಕೇಳಿದ ಪೀಠ, ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಬಂಧನ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ಮುಂದಿನ ದಿನಾಂಕದಂದು ಉತ್ತರಿಸಲು ತನಿಖಾ ಸಂಸ್ಥೆಗೆ ಸೂಚಿಸಿತು. ಈ ಅರ್ಜಿಯನ್ನು ಬುಧವಾರದಿಂದ ಶುಕ್ರವಾರ ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಿದ ನಂತರ ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಸುಪ್ರೀಂ ಕೋರ್ಟ್ ಏಪ್ರಿಲ್ 15 ರಂದು ಇಡಿಗೆ ನೋಟಿಸ್ ಜಾರಿ ಮಾಡಿತು ಮತ್ತು ಕೇಜ್ರಿವಾಲ್ ಅವರ ಮನವಿಗೆ ಪ್ರತಿಕ್ರಿಯೆ ಕೇಳಿತು. ಏಪ್ರಿಲ್ 9 ರಂದು ಹೈಕೋರ್ಟ್ ಕೇಜ್ರಿವಾಲ್ ಅವರ ಬಂಧನವನ್ನು ಎತ್ತಿಹಿಡಿದಿತ್ತು. ಯಾವುದೇ ಅಕ್ರಮವಾಗಿ ಬಂಧಿಸಿಲ್ಲ, ಪದೇ ಪದೇ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇಡಿ ಬಂಧಿಸಿರುವುದಾಗಿ ಹೈಕೋರ್ಟ್ ಹೇಳಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್