LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸೂರಜ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಇಂದು ಅಂತ್ಯ: ಕಸ್ಟಡಿ ವಿಸ್ತರಣೆ ಸಾಧ್ಯತೆ !



ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್​ನ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ಹೆಚ್ಚಿನ ವಿಚಾರಣೆಗಾಗಿ ಮತ್ತೊಮ್ಮೆ ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.


ಜೂನ್ 23ರಂದು ಸೂರಜ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ ಸಿಐಡಿ ಪೊಲೀಸರು ಏಳು ದಿನಗಳ ಕಾಲ ಕಸ್ಟಡಿ ಪಡೆದಿದ್ದರು. ಈಗಾಗಲೇ ಸಂತ್ರಸ್ತ ಯುವಕನ ಹೇಳಿಕೆ ದಾಖಲಿಸಿರುವ ಎಸ್ಐಟಿ ಅಧಿಕಾರಿಗಳು, ಸೂರಜ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೂ ಸಹ ಒಳಪಡಿಸಿದ್ದರು.


ಮತ್ತೊಬ್ಬ ಸಂತ್ರಸ್ತ ಸಹ ಸೂರಜ್‌ ರೇವಣ್ಣ ಅವರ ವಿರುದ್ಧ ದೂರು ನೀಡಿದ್ದು, ಆ ಪ್ರಕರಣದ ತನಿಖೆಯನ್ನೂ ಸಿಐಡಿಗೆ ಒಪ್ಪಿಸಲಾಗಿದೆ. ಇಂದು ಮಧ್ಯಾಹ್ನ ಸೂರಜ್ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿರುವ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೇಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.







ಯುವಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜೂನ್‌ 22ರಂದು ಸೂರಜ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್