Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೊ. ಎಂ. ಮುನಿರಾಜು ಅವರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ









ಬಳ್ಳಾರಿ,ಏ,08:ನಾಡಿನ ಪ್ರತಿಷ್ಠಿತ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆ ಕೊಡಮಾಡುವ ‘ಸುವರ್ಣ ಕನ್ನಡಿಗ-2026’ರ ಪ್ರಶಸ್ತಿಗೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ಭಾಜನರಾಗಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿದ ಅದ್ದೂರಿ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಾಡಿನ ವಿವಿಧ ಕ್ಷೇತ್ರಗಳಲ್ಲಿ ಅವಿರತ ಸೇವೆ ಮತ್ತು ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಸುವರ್ಣ ವಾಹಿನಿಯು ಪ್ರತಿವರ್ಷ ಈ ಪ್ರಶಸ್ತಿಯನ್ನು ನೀಡುತ್ತದೆ.

ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ 35 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಅವರಿಗೆ ಪ್ರಶಸ್ತಿ ಲಭಿಸಿರುವುದು ಸಂತಸ ನೀಡಿದೆ ಎಂದು ಪ್ರೊ ಎಂ ಮುನಿರಾಜು ಅವರ ಕುಟುಂಬವರ್ಗ ಹರ್ಷ ವ್ಯಕ್ತಪಡಿಸಿದೆ.

ವಿವಿಯ ಅಧ್ಯಾಪಕರ ಸಂಘದಿAದ ಗೌರವ:

ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯ ‘ಸುವರ್ಣ ಕನ್ನಡಿಗ-2026’ರ ಪ್ರಶಸ್ತಿಗೆ ಪಾತ್ರರಾಗಿರುವ ಕುಲಪತಿಗಳಿಗೆ ವಿಶ್ವವಿದ್ಯಾಲಯದ ಅಧ್ಯಾಪಕರ ಸಂಘ (ರಿ) ದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಪ್ರೊ ಎನ್ ಎಂ ಸಾಲಿರವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಗೌರವಾನ್ವಿತರಿಗೆ ದೊರಕಿರುವ ಪ್ರಶಸ್ತಿಯು ವಿಶ್ವವಿದ್ಯಾಲಯದ ಘನತೆಯನ್ನು ಹೆಚ್ಚಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ದಣಿವರಿಯದೆ ನಿರಂತರ ಸೇವೆ ನೀಡುತ್ತಿರುವ ಕುಲಪತಿಗಳ ಕಾರ್ಯಕ್ಕೆ ಒದಗಿರುವ ಗರಿಮೆಯಾಗಿದೆ ಎಂದು ಹೇಳಿದರು.

ಅಧ್ಯಾಪಕರ ಸಂಘದ ಅಧ್ಯಕ್ಷರಾದ ಪ್ರೊ ತಿಪ್ಪೇರುದ್ರಪ್ಪ ಜೆ ಅವರು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕುಲಪತಿಗಳಿಗೆ ಪ್ರಶಸ್ತಿ ಬಂದಿರುವುದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ. ಮುಂದೆ ಮತ್ತಷ್ಟು ಪ್ರಶಸ್ತಿಗಳು ಅವರಿಗೆ ಒಲಿದು ಬರಲಿ ಎಂದು ಸಂಘದ ಪರವಾಗಿ ಹಾರೈಸಿದರು.

ವಿವಿಯ ಸಿಂಡಿಕೇಟ್ ಸದಸ್ಯರು, ವಿತ್ತಾಧಿಕಾರಿ ಸ್ಫೂರ್ತಿ ಕೆ ಜಿ, ಅಧ್ಯಾಪಕರ ಸಂಘದ ಪದಾಧಿಕಾರಿಗಳು, ಎಲ್ಲ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ಇದ್ದರು.


























Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ