LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಎಸ್ ವಿ ರಾಜೇಂದ್ರ ಸಿಂಗ್ ಬಾಬು ಚಿತ್ರ  ವೀರ ಕಂಬಳ ದುಬೈನಲ್ಲೂ  ಚಿತ್ರೀಕರಣ   









     ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ಅರುಣ್ ರೈ ತೊಡರ್ ಅವರ ನಿರ್ಮಾಣದಲ್ಲಿ ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿರುವ "ವೀರ ಕಂಬಳ" ಚಿತ್ರಕ್ಕೆ  ದುಬೈನಲ್ಲೂ ಚಿತ್ರೀಕರಣವಾಗಿದೆ.


     ಇತ್ತೀಚೆಗೆ ದುಬೈನಲ್ಲಿ ಚಿತ್ರೀಕರಣ ಮುಗಿಸಿದ ಚಿತ್ರತಂಡ ಬೆಂಗಳೂರಿಗೆ ವಾಪಸಾಗಿದೆ. ನಟ ಆದಿತ್ಯ, ನಿರ್ಮಾಪಕ ಅರುಣ್ ರೈ ತೊಡರ್, ಶೋಭ್ ರಾಜ್ ಮುಂತಾದವರು ದುಬೈ ಭಾಗದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.


     ಕಂಬಳ ದಕ್ಷಿಣ ಕನ್ನಡದ ಪ್ರಸಿದ್ಧ ಕ್ರೀಡೆ. ಇದನ್ನೇ ಮುಖ್ಯವಾಗಿಟ್ಟುಕೊಂಡು ರಾಜೇಂದ್ರ ಸಿಂಗ್ ಬಾಬು ಅವರು 'ವೀರ ಕಂಬಳ' ಚಿತ್ರದ ಕಥೆ ಬರೆದಿದ್ದಾರೆ. ಈ ಚಿತ್ರ  ತುಳುವಿನಲ್ಲಿ 'ಬಿರ್ದುದ ಕಂಬಳ' ಎಂಬ ಹೆಸರಿನಲ್ಲಿ ಮೂಡಿ ಬರುತ್ತಿದೆ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಮಂಗಳೂರು, ಮೂಡುಬಿದಿರೆ ಹಾಗೂ ಬೆಂಗಳೂರಿನಲ್ಲೂ ಚಿತ್ರೀಕರಣವಾಗಿದೆ.


     "ಕಂಬಳ ಆರಂಭವಾಗುವುದು ಒಂದು ಮನೆತನದಿಂದ. ಆ ಮನೆತನದವರು ದುಬೈನಲ್ಲಿ ನೆಲೆಸಿರುತ್ತಾರೆ. ಹಾಗಾಗಿ ಈ ಚಿತ್ರಕ್ಕೆ ದುಬೈನಲ್ಲೇ ಚಿತ್ರೀಕರಣ ಮಾಡಲಾಗಿದೆ. ಆದಷ್ಟು ಬೇಗ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿ ಏಪ್ರಿಲ್ ಮಧ್ಯದಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ" ಎಂದು ನಿರ್ದೇಶಕರು ತಿಳಿಸಿದ್ದಾರೆ.


     ವೀರ ಕಂಬಳಕ್ಕೆ  ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆರ್ ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಪಿ ಬಾಬು ಸಂಕಲನ, ಮದನ್ - ಹರಿಣಿ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ, ಮಾಸ್ ಮಾದ ಸಾಹಸ ನಿರ್ದೇಶನ,‌ ಚಂದ್ರಶೇಖರ ಸುವರ್ಣ ಮುಲ್ಕಿ ಕಲಾ ನಿರ್ದೇಶನ ಹಾಗೂ ಬೆನಕ ಕೊಟ್ರೇಶ್, ಅಕ್ಷತ ವಿಟ್ಲ ಅಸೋಸಿಯೇಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ರಾಜೇಶ್ ಕುಡ್ಲ


      ಆದಿತ್ಯ, ಪ್ರಕಾಶ್ ರೈ, ರವಿಶಂಕರ್, ಶೋಭ್ ರಾಜ್, ನವೀನ್ ಪಡಿಲ್, ಗೋಪಿನಾಥ್ ಭಟ್, ರಾಧಿಕಾ ಚೇತನ್, ಅರುಣ್ ರೈ ತೊಡರ್, ಭೋಜರಾಜ್ ವಾಮಂಜೂರ್, ಉಷಾ ಭಂಡಾರಿ, ಮೈಮ್ ರಮೇಶ್, ಗೀತಾ ಸುರತ್ಕಲ್, ಸುರೇಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ.










Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್