LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನ: ಮರುಗಿದ ವಿಶ್ವ!

ತಬಲಾ ಮಾಂತ್ರಿಕ ಎಂದೇ ಖ್ಯಾತರಾಗಿರುವ ಜಾಕಿರ್ ಹುಸೇನ್ ನಿಧನರಾಗಿದ್ದಾರೆ, ಕೇವಲ ಭಾರತ ಮಾತ್ರವಲ್ಲ ಇಡೀ ವಿಶ್ವವೇ ಮರುಗಿದೆ. ಅವರು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. 73ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರು ತಬಲ ನುಡಿಸುವ ಪರಿ ಜನರನ್ನು ಮಂತ್ರಮುಗ್ದಗೊಳಿಸುತ್ತಿತ್ತು. ಅವರಿಗೆ ಸಂಬಂಧಿಸಿದ ಹಲವು ಮಾಹಿತಿ ಇಲ್ಲಿದೆ.





ಅವರು ತಬಲಾ ವಾದಕ ಉಸ್ತಾದ್ ಅಲ್ಲಾ ರಖಾ ಅವರ ಮಗ, ಜಾಕಿರ್​ ತಂದೆಯಿಂದಲೇ ತಬಲಾ ನುಡಿಸುವುದನ್ನು ಕಲಿತಿದ್ದರು. ಅವರು ಶ್ಲೋಕ, ಮಂತ್ರಗಳನ್ನೂ ಕಲಿತಿದ್ದರು. ಅವರ 11ನೇ ವಯಸ್ಸಿನಲ್ಲಿ ಅಮೆರಿಕದಲ್ಲಿ ತಮ್ಮ ಮೊದಲ ಸಂಗೀತ ಕಚೇರಿ ನಡೆಸಿದ್ದರು. ಅವರು 1973 ರಲ್ಲಿ ತಮ್ಮ ಮೊದಲ ಆಲ್ಬಂ ಲಿವಿಂಗ್ ಇನ್ ದಿ ಮೆಟೀರಿಯಲ್ ವರ್ಲ್ಡ್ ಅನ್ನು ಪ್ರಾರಂಭಿಸಿದರು.



ತಬಲಾ ವಾದನ ಜಾಕಿರ್ ಪಯಣ ಜಾಕಿರ್ ಚಿಕ್ಕ ವಯಸ್ಸಿನಲ್ಲೇ ತಬಲಾ ಮೇಲಿನ ಹಿಡಿತವನ್ನು ಗಟ್ಟಿಗೊಳಿಸಿದ್ದರು. 11-12ರಿಂದಲೇ ತಬಲಾ ನುಡಿಸುವ ಪಯಣ ಆರಂಭಿಸಿದ್ದರು. ಸಂಗೀತ ಕಚೇರಿಗಳಿಗಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಿದ್ದರು. ತಾವು ರೈಲಿನಲ್ಲಿ ಪ್ರಯಾಣಿಸುವಾಗ ಕಾಯ್ದಿರಿಸಿದ ಟಿಕೆಟ್​ಗಳನ್ನು ಪಡೆಯುವಷ್ಟು ಹಣ ತನ್ನ ಬಳಿ ಇರಲಿಲ್ಲ ಎಂದು ಹೇಳಿಕೊಂಡಿದ್ದರು.

ತಬಲಾವನ್ನು ಮಡಿಲಿನಲ್ಲಿಟ್ಟುಕೊಳ್ಳುತ್ತಿದ್ದರು ಜನರು ಕಿಕ್ಕಿರಿದು ತುಂಬಿರುವ ಜನರಲ್ ಕೋಚ್​ಗೆ ಅವರು ಹತ್ತುತ್ತಿದ್ದರು. ಯಾರ ಪಾದವಾಗಲೀ, ಪಾದರಕ್ಷೆಯಾಗಲೀ ತಾಗದಂತೆ ತಡೆಯಲು ಅವರು ತಬಲಾವನ್ನು ಮಗುವಿನಂತೆ ತೊಡೆಯ ಮೇಲೆ ಇಟ್ಟುಕೊಳ್ಳುತ್ತಿದ್ದರು.

ಗ್ರ್ಯಾಮಿ ಪ್ರಶಸ್ತಿಯೂ ಬಂದಿತ್ತು ಅನೇಕ ಕಠಿಣ ಹಾದಿಗಳು, ಸವಾಲುಗಳನ್ನು ದಾಟಿ ಪ್ರಪಂಚದಾದ್ಯಂತ ಜನರ ಹೃದಯದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಜಾಕಿರ್ ಹುಸೇನ್​ಗೆ 2009ರಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. 1988 ರಲ್ಲಿ ಪದ್ಮಶ್ರೀ ಮತ್ತು 2002 ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. 1990 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್