Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೆಣಸಿನಕಾಯಿ ಬೆಳೆಯಲ್ಲಿ ಕೊಳೆ ರೋಗ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಂತೋಷ್ ಸಪ್ಪಂಡಿ

ಬಳ್ಳಾರಿ,ಆ.30: ಜಿಲ್ಲೆಯಲ್ಲಿ ಮೆಣಸಿನಕಾಯಿ ಬೆಳೆ ಬೆಳೆಯುವ ರೈತರು ಮೆಣಸಿನಕಾಯಿ ಬೆಳೆಯಲ್ಲಿ ಸಸಿ ಕೊಳೆ ರೋಗ ಕಂಡುಬAದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುವ ಸಂಭವವಿರುವುದರಿAದ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿ ಮೆಣಸಿನಕಾಯಿ ಬೆಳೆಯಲ್ಲಿ ಸಸಿ ಕೊಳೆಯುವ ರೋಗ ಕಾಣಿಸಿಕೊಳ್ಳುತ್ತದೆ. ಹಾಗಾಗಿ ರೈತರು ಕೆಳಕಂಡAತೆ ಸೂಕ್ತ ಮುಂಜಾಗ್ರತೆ ಮತ್ತು ನಿರ್ವಹಣೆ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ.

ರೈತರು ನರ್ಸರಿಯಿಂದ ಸಸಿಗಳನ್ನು ತಂದು ನಾಟಿ ಮಾಡುವಾಗ ಆಳವಾಗಿ ನಾಟಿ ಮಾಡುವುದು ಸೂಕ್ತವಲ್ಲ. ಬದಲಾಗಿ ಸಸಿಗಳನ್ನು ಸಾಲಿನಿಂದ ಸಾಲಿಗೆ 120 ಸೆಂ.ಮೀ ಹಾಗೂ ಗಿಡದಿಂದ ಗಿಡಕ್ಕೆ 60 ಸೆಂ.ಮೀ ಅಂತರದಲ್ಲಿ ನಾಟಿ ಮಾಡಿದಲ್ಲಿ ಗಿಡಗಳ ಬೆಳೆವಣಿಗೆ, ಗಾಳಿಯಾಡಲು ಸಹಾಯ ಮಾಡುತ್ತದೆ ಹಾಗೂ ರೋಗ ನಿಯಂತ್ರಣ ಮಾಡಬಹುದಾಗಿದೆ.

ಮಣ್ಣಿನಲ್ಲಿ ಅಧಿಕ ತೇವಾಂಶ ಬಸಿದು ಹೋಗುವಂತೆ ಬಸಿ ಕಾಲುವೆ ಮಾಡಬೇಕು. ನೀರಾವರಿಯನ್ನು ನಿಯಂತ್ರಿಸಿ ಮಣ್ಣಿನಲ್ಲಿ ಹೆಚ್ಚಿನ ತೇವಾಂಶ ಇಲ್ಲದೇ ಇರುವಂತೆ ನೋಡಿಕೊಳ್ಳಬೇಕು. ಮಣ್ಣಿನ ತೇವಾಂಶ ಹೆಚ್ಚಾಗಿ ಸಸಿ ಕೊಳೆಯುವ ರೋಗ ಕಂಡುಬAದಲ್ಲಿ ಕಾರ್ಬನ್‌ಡೈಜಿಮ್ ಶೇ.50 ಡಬ್ಲೂö್ಯಪಿ ಅಥವಾ ಮ್ಯಾಂಕೋಜಬ್ ಶೇ.75 ಡಬ್ಲೂö್ಯಪಿ 2 ಗ್ರಾಂ ನಂತೆ ಅಥವಾ ಕಾಪರ್ ಆಕ್ಸಿಕೋಡ್ 4 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡುವುದರಿಂದ ರೋಗ ನಿಯಂತ್ರಣ ಹತೋಟಿಗೆ ಬರುತ್ತದೆ.

ಪ್ರತಿ ಎಕರೆಗೆ 100 ರಿಂದ 150 ಕೆ.ಜಿ ತಿಪ್ಪೆ ಗೊಬ್ಬರದ ಜೊತೆಯಲ್ಲಿ 5 ಕೆ.ಜಿ ಟ್ರೆöÊಕೋಡರ್ಮ್ ಮಿಶ್ರಣ ಮಾಡಿ ಗಿಡಗಳ ಸಾಲಿನಲ್ಲಿ ಹಾಕುವುದು. ಸಸಿಗಳ ಸುತ್ತಲಿನ ಕಳೆಗಳನ್ನು ತೆಗೆದು ಹಾಕಬೇಕು. ಇದರಿಂದ ಗಾಳಿಯಾಡಲು ಅನುಕೂಲವಾಗುತ್ತದೆ. ಕೊಳೆರೋಗ ಸೋಂಕಿತ ಸಸಿ ಅಥವಾ ಸಸಿಗಳ ಭಾಗಗಳನ್ನು ತೆಗೆದು ಹಾಕಿ ಅವುಗಳನ್ನು ನಾಶಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ