LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Gadag

ಅರ್ಥಪೂರ್ಣ ಹಾಗೂ ವ್ಯವಸ್ಥಿತ ಆಚರಣೆಗೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ




ಗದಗ  15 : ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಸಂಭ್ರಮದಿAದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಅಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿಯವರು ತಮಗೆ ವಹಿಸಿದ ಕೆಲಸವನ್ನು ನಿರ್ವಹಿಸಿ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಬೇಕೆಂದು ಸೂಚಿಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನ ಎರಡು ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಕಾರ್ಯಕ್ರಮದ ಸ್ಥಳದ ಸ್ವಚ್ಛತೆಗೆ ಆದ್ಯತೆ ವಹಿಸಬೇಕು. ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆ, ವೇದಿಕೆ ಅಲಂಕಾರ, ಸನ್ಮಾನ ವ್ಯವಸ್ಥೆ ಕುರಿತಂತೆ ಯಾವುದೇ ಲೋಪದೋಷಗಳಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಅಂದು ಬೆಳಿಗ್ಗೆ 7.30 ಗಂಟೆಗೆ ಗದಗ ಬೆಟಗೇರಿ ನಗರಸಭೆ ಪದವಿ ಪೂರ್ವ ಕಾಲೇಜ ಆವರಣದಿಂದ ಕಲಾತಂಡಗಳ ಜೊತೆಗೆ ತಾಯಿ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿ ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಲಿದೆ. ಬೆ.9 ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಿರಬೇಕು ಎಂದರು.
ಪೊಲೀಸ್ ಪಡೆ, ಹೋಮಗಾರ್ಡ, ಭಾರತ ಸೇವಾ ದಳಗಳಿಂದ ಪರೇಡ್, ಪಥ ಸಂಚಲನ ಜರುಗಲಿವೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ದಚಿತ್ರಗಳ ಪ್ರದರ್ಶನ ಅಚ್ಚುಕಟ್ಟಾಗಿ ನಡೆಯುವಂತೆ ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘಸAಸ್ಥೆಯವರು ಈ ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ಮಾತನಾಡಿ ಶಿಷ್ಟಾಚಾರದನ್ವಯ ಅತಿಥಿ ಗಣ್ಯರ ಅಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪರಿಣಿತರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಮಿಥುನ್ ಎಚ್.ಎನ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಬಾಗಾಧಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಡಿಡಿಎಲ್‌ಆರ್ ರುದ್ರನಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎA.ತುAಬರಮಟ್ಟಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದರೂರ ಜಿಲ್ಲಾ ಪಂಚಾಯತ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ: ತಾಪಂ ಸದಸ್ಯ ದಿಲೀಪ ಕಾಂಬ್ಳೆಸೈನಿಕರ ತ್ಯಾಗ ಮತ್ತು ದೇಶಪ್ರೇಮ ಯುವಜನತೆಗೆ ಆದರ್ಶ: ಶ್ರೀ ಹೊಳೇಹುಚೇಶ್ವರ ಶ್ರೀಗಳುಬಿಜೆಪಿಯಿಂದ ಉಚಿತ ಅರೋಗ್ಯ ತಪಾಸಣೆ ಶಿಬಿರಸಮಾಜಮುಖಿ ಕೆಲಸಕ್ಕೆ ಎಲ್ಲರೂ ಕೈಜೋಡಿಸಿದರೆ ಹೆಚ್ಚು ಶಕ್ತಿ ಬರುತ್ತದೆ : ಸಿ ಆರ್ ಸಾಂಗ್ಲೀಕರಯರಗಟ್ಟಿ ತಾ.ಪಂ. ಪ್ರಭಾರಿ ಇಓ ಆಗಿ ಬಸವರಾಜ ಅಯ್ಯನಗೌಡರ ಅಧಿಕಾರ ಸ್ವೀಕಾರಎಸ್ ಐ ಆರ್ ಲೋಪ ಸರಿಪಡಿಸಲು ಡಿ ಸಿ ಗೆ ಬಿಜೆಪಿ ಮನವಿ.ಅರ್ಥಪೂರ್ಣ ಹಾಗೂ ವ್ಯವಸ್ಥಿತ ಆಚರಣೆಗೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪುಸ್ತಕ ಸೊಗಸು ಬಹುಮಾನ: ದರ್ವೇಶಿ ಪದ್ಯ ಸಂಕಲನ ಆಯ್ಕೆ ಮನಸ್ಸಿನ ಸಂತೃಪ್ತಿಗಾಗಿ ಪುರಾಣ-ಪ್ರವಚನ ಆಲಿಸಿ : ರೇಣುಕಾ ಶಿವಾಚಾರ್ಯ ಶ್ರೀಮಂಡಲ ಅಧ್ಯಕ್ಷರಿಗೆ ಉಚ್ಛಾಟಿಸುವ ಅಧಿಕಾರ ಇದೆಯಾ : ಉಮೇಶ ಪಾಟೀಲ