Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯಾಣಿಕರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಿ : ಜೆ.ಟಿ ಪಾಟೀಲ

ಬೀಳಗಿ ಡಿಪೋ ಮ್ಯಾನೇಜರಗೆ ನೋಟಿಸ್ ಜಾರಿ

ಬಾಗಲಕೋಟೆ, ಮೇ ೨೨ : ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ ಸಂಚಾರ ಮಾಡುವದರ ಜೊತೆಗೆ ಸಾರ್ವಜನಿಕರ ದೂರುಗಳಿಗೆ ಗಂಭೀರವಾಗಿ ಪರಿಗಣಿಸಿ, ಸಮಸ್ಯೆ ಇರುವ ಮಾರ್ಗಗಳ ಪರಿಶೀಲನೆ ನಡೆಸಿ ತಕ್ಷಣ ಪರಿಹಾರ ಕಲ್ಪಿಸುವಂತೆ ಬೀಳಗಿ ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನವನಗರದ ಎನ್.ಡಬ್ಲೂ.ಕೆ.ಎಸ್.ಆರ್.ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಬೀಳಗ ಮತಕ್ಷೇತ್ರದ ಪ್ರಯಾಣಿಕರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್ ಸೌಲಭ್ಯಗಳ ಕೊರತೆಯಿಂದ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ವಿಶೇಷವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತ ಸಮಯದಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರಿಂದ ಬಂದ ದೂರುಗಳಿಗೆ ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಇರುವ ಮಾರ್ಗಗಳ ಪರಿಶೀಲನೆ ನಡೆಸಿ, ಬಸ್ ನಿಲುಗಡೆ ಸೇರಿದಂತೆ ನಾಮಫಲಕ ಅಳವಡಿಕೆಗೆ ತಕ್ಷಣ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈಗಾಗಲೇ ಕಗಲಗೊಂಬ, ಹೂಲಗೇರಿ, ಕೆರೂರ ಮಾರ್ಗದಲ್ಲಿ ೨ ಸರತಿ, ಸೀಮಿಕೇರಿ ಬೈಪಾಸ್ ಕ್ರಾಸ್‌ನಲ್ಲಿ ನಿಲುಗಡೆ, ಹಳೆ ಅನಗವಾಡಿ ಕ್ರಾಸ್, ದೇವನಾಳ ಪುನರ್ವಸತಿ ಕೇಂದ್ರ, ಗುಳಬಾಳ ಪು.ಕೇ ಶಾಲೆಗೆ ಬಸ್ ನಿಲುಗಡೆ, ಅಮಲಝರಿ ಗ್ರಾಮದಲ್ಲಿರುವ ಇಂದಿರಾ ಪ್ಲಾಟಗೆ ಬೋರ್ಡ ಹಾಗೂ ಬಾಗಲಕೋಟೆ-ಅರಕೇರಿ ತಾಂಡಾ ವಸ್ತಿ ಸಾರಿಗೆ ಪುನಃ ಪ್ರಾರಂಭಿಸುವ ಕುರಿತು ತಿಳಿಸಲಾಗಿತ್ತು. ಆದರೆ ಸರಿಯಾದ ಕ್ರಮ ಆಗದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ಸಾರ್ವಜನಿಕರ ಸೂಕ್ತ ಪ್ರಯಾಣಕ್ಕೆ ಕ್ರಮಕೈಗೊಳ್ಳಲು ತಿಳಿಸಿದರು.
ಬೇರೆ ರಾಜ್ಯಗಳಿಗೆ ತೆರಲುವ ಕೆಲವೊಂದು ಬಸ್‌ಗಳನ್ನು ಸ್ಥಳೀಯವಾಗಿ ಸಂಚರಿಸಲು ಕ್ರಮಕೈಗೊಳ್ಳಲು ತಿಳಿಸಿದ ಶಾಸಕರು ಹೆಚ್ಚುವರಿ ೧೦ ಬಸ್‌ಗಳನ್ನು ಬೀಳಗಿ ಘಟಕಕ್ಕೆ ನೀಡುವಂತೆ ತಿಳಿಸಿದರು. ಅಲ್ಲದೇ ಬೀಳಗಿಯಿಂದ ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಪ್ರತ್ಯೇಕ ಬಸ್‌ನ್ನು ಹೊಸದಾಗಿ ಪ್ರಾರಂಭಿಸಲು ತಿಳಿಸಿದರು. ಬೀಳಗಿ, ಬಾಗಲಕೋಟೆ ಹಾಗೂ ಬಾದಾಮಿ ಡಿಪೋಗಳಲ್ಲಿನ ಪ್ರತಿ ರೂಟಗಳ ಮಾಹಿತಿಯನ್ನು ನೀಡುವಂತೆ ತಿಳಿಸಿದರು. ದೂರುಗಳಿಗೆ ತಕ್ಷಣ ಸ್ಪಂಧನೆ ನೀಡಲು ಆಡಳಿತಕ್ಕೆ ಚುರುಕು ನೀಡುವಂತೆ ತಿಳಿಸಿದರು. ಅಲ್ಲದೇ ಸಾರ್ವಜನಿಕರು ಕೊಟ್ಟ ದೂರಿನನ್ವಯ ಬಸ್‌ಗಳು ಸಂಚರಿಸಿದಾಗ ಸದರ ಸದುಪಯೋಗವಾದರೆ ಮಾತ್ರ ಚಾಲನೆಯಲ್ಲಿಡಲು ತಿಳಿಸಿದರು.
ಸಭೆಗೆ ಆಗಮಿಸಿದ ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಬಗ್ಗೆ ಸಭೆಯ ಮುಂದಿಟ್ಟರು. ಪ್ರತಿಯೊಂದ ದೂರುಗಳಿಗೆ ಸೂಕ್ತ ಕ್ರಮಕೈಗೊಂಡು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಬಸ್ ಸಂಚರಿಸುವಂತೆ ಮಾಡಲು ತಿಳಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡುವದರ ಜೊತೆಗೆ ಬೇಜವಾಬ್ದಾರಿತನ ತೋರಿದ ಬೀಳಗಿ ಘಟಕ ವ್ಯವಸ್ಥಾಪಕ ಆರ್.ಸಿ.ಖೇಡರ ಅವರಿಗೆ ನೋಟಿಸ್ ಜಾರಿ ಮಾಡಿ ಶಿಸ್ತುಕ್ರಮ ಕೈಗೊಳ್ಳುವಂತೆ ವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎನ್.ಟಿ.ಪಾಟೀಲ, ಜಿಲ್ಲಾ ಸಂಚಾರಿ ಅಧಿಕಾರಿ ಕೆ.ಕೆ.ಲಮಾಣಿ. ಘಟಕ ವ್ಯವಸ್ಥಾಪಕರಾದ ಕೃಷ್ಣಾ ಚವ್ಹಾಣ, ಎ.ಎ.ಕೋರಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು. 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ