ಬೀಳಗಿ : 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಉದ್ದೇಶದಿಂದ ಮೇ 31ರಂದು ‘ಪ್ರತಿಭಾ ಪುರಸ್ಕಾರ’ ಸಮಾರಂಭವನ್ನು ಆಯೋಜಿಸಲಾಗಿದೆ.
ಬೀಳಗಿ ಕ್ರಾಸ್ ಸಮೀಪದ ತೋಟದ ಹೊಲದಲ್ಲಿ ಪ್ರಗತಿಪರ ರೈತ ಹಾಗೂ ಸಾವಯವ ಬೆಲ್ಲ ತಯಾರಕರಾದ ರಾಮಣ್ಣ ಕಾಳಪ್ಪಗೋಳ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಭಾನುವಾರ ಬೆಳಿಗ್ಗೆ 11 ಗಂಟೆಗೆ ಸಮಾರಂಭ ಆರಂಭವಾಗಲಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ತಮ್ಮ ಹೆಸರುಗಳನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಣಿಗೆ ಮೊಬೈಲ್ ಸಂಖ್ಯೆ 9353630490 ಬಸವರಾಜ. ಬಿ. ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
