ಸಾಧಕರಿಗೆ ಸನ್ಮಾನ ಹಾಗೂ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಬಳ್ಳಾರಿ:23. ಬೆಂಗಳೂರು ನಗರದ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ ಅವರ ಆಶ್ರಮದಲ್ಲಿ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕರ ಫೆಡ್ ರೇಶನ್ ಬೆಂಗಳೂರು ಆಶ್ರಯದಲ್ಲಿ ವಿವಿಧ ಸಾಧಕರಿಗೆ ಸನ್ಮಾನ ಹಾಗೂ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳಿಗೆ ಇತ್ತೀಚೆಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಇಲ್ಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಪ್ರಶಸ್ತಿಗೆ ಭಾಜನರಾದ ಮಹನೀಯರನ್ನು ಇಲ್ಲಿನ ಜಿಲ್ಲಾ ಸಮಿತಿ ಪದಾಧಿಕಾರಿಗಳು, ಸನ್ಮಾನಿಸಿ ಗೌರವಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಫೆಡ್ ರೇಶನ್ ರಾಜ್ಯ ಕಚೇರಿ ಕಾರ್ಯದರ್ಶಿ ಮಂಜುನಾಥ ಭಟ್, ಜಿಲ್ಲಾಧ್ಯಕ್ಷ ಗೋಪಿನಾಥ್, ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸಂಘಟನೆ ಕಾರ್ಯದರ್ಶಿ, ಕರಾಟೆ ಪಟು ವಿಜಯ ವಿಠಲ ಸೇರಿದಂತೆ ವಿವಿಧ ಮುಖಂಡರು, ಪದಾಧಿಕಾರಿಗಳು ಉಪಸ್ಥತರಿದ್ದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.