ಚನ್ನಮ್ಮನ ಕಿತ್ತೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಜನಸೇವಾ ಆಂದೋಲನ’ ಕಾರ್ಯಕ್ರಮವನ್ನು ಸೆ.5ರಂದು ಬೆಳಿಗ್ಗೆ 10 ಗಂಟೆಗೆ ಅಂಬಡಗಟ್ಟಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ತಹಶೀಲ್ದಾರ ಕಲಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ಬಾಬಾಸಾಹೇಬ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಲಿದ್ದು ಸರ್ಕಾರದ ವಿವಿಧ ಯೋಜನೆಗಳು, ಸೌಲಭ್ಯಗಳು ಹಾಗೂ ಸೇವೆಗಳು ತಾಲೂಕಿನ ಕಟ್ಟಕಡೆಯ ನಾಗರಿಕರಿಗೂ ತಲುಪಿಸುವುದು ‘ಜನಸೇವಾ ಆಂದೋಲನ’ದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಕುಂದುಕೊರತೆ, ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳಲು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ಸಾರ್ವಜನಿಕರಿಂದ ಸ್ವೀಕರಿಸುವ ಅಹವಾಲುಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿಯೇ ಸೂಕ್ತ ಮಾರ್ಗದರ್ಶನ ಹಾಗೂ ಪರಿಹಾರ ಒದಗಿಸುವುದರ ಜೊತೆಗೆ, ಅಗತ್ಯವಿರುವ ಪ್ರಕರಣಗಳಲ್ಲಿ ಸಂಬಂಧಿಸಿದ ಇಲಾಖೆಗಳ ಮೂಲಕ ತ್ವರಿತ ಕ್ರಮ ಕೈಗೊಳ್ಳಲಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಆಯೋಜಿಸಿರುವ ಈ ಜನಪರ ಕಾರ್ಯಕ್ರಮದಲ್ಲಿ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವಂತೆ ಕೋರಲಾಗಿದೆ.