Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bijapur

 ಕುಡಿಯುವ ನೀರು ಪೂರೈಸದ ಅಧಿಕಾರಿಗೆ ತಾಪಂ ಇಒ ತರಾಟೆ!

ಪ್ರಗತಿ ಪರಿಶೀಲನಾ ಸಭೆ * ಕುಡಿಯುವ ನೀರಿನ ಸಮಸ್ಯೆ ಉಲ್ಬಣ * ತುಂಟುನೆಪ ಹೇಳದೇ ನೀರುಕೊಡಿ



ತಾಳಿಕೋಟೆ: ಹರನಾಳ ಹಾಗೂ ಗಡಿಸೋಮನಾಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದರೂ ಹಲವು ಬಾರಿ ಮೌಖಿಕವಾಗಿ ಹಾಗೂ ಪತ್ರದ ಮೂಲಕ ಮನವಿ ಮಾಡಿದರೂ ನೀರು ಪೂರೈಕೆಗೆ ಕ್ರಮ ಕೈಗೊಳ್ಳದಿರುವುದಕ್ಕೆ ತಾಳಿಕೋಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಸೂಯಾ ಚಲವಾದಿ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಭಿಯಂತರ ಸಿ.ಎಲ್.ರಾಠೋಡ ಅವರನ್ನು ಸಭೆಯಲ್ಲಿಯೇ ತರಾಟೆಗೆ ತೆಗೆದುಕೊಂಡರು.
      ಮಂಗಳವಾರರಂದು ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಳಿಕೋಟೆ ಹಾಗೂ ಮುದ್ದೇಬಿಹಾಳ ತಾಲೂಕು ಪಂಚಾಯಿತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಘಟನೆ ನಡೆಯಿತು. ಹರನಾಳ ಹಾಗೂ ಗಡಿಸೋಮನಾಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಕುರಿತು ನಮ್ಮ ಇಲಾಖೆಯಿಂದ ಹಲವು ಬಾರಿ ಮೌಖಿಕವಾಗಿ ತಿಳಿಸಲಾಗಿದೆ. ಅಲ್ಲದೇ, ಪತ್ರದ ಮೂಲಕವೂ ಗಮನಕ್ಕೆ ತರಲಾಗಿದೆ. ಆದರೂ ನೀರು ಪೂರೈಸುವ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಗ್ರಾಮಸ್ಥರ ವಿರೋಧವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ನಮ್ಮ ಇಲಾಖೆ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಯ ನಿರ್ಲಕ್ಷದ ಕಾರ್ಯವೈಖರ್ಯದ ಕುರಿತು ಅನಸೂಯಾ ಚಲವಾದಿ ಅಸಮಾಧಾನ ವ್ಯಕ್ತಪಡಿಸಿದರು. ಇದೇ ಸಮಯದಲ್ಲಿ ಉಪಸ್ಥಿತರಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಹಿರೇಗೌಡರ ಅವರಿಗೆ ಸೂಚಿನೆ ನೀಡಿದ ಅಧಿಕಾರಿಗಳು ನೀರು ಪೂರೈಸುವ ಭರವಸೆ ನೀಡುವುದಷ್ಟೇ ಸಾಕಾಗುವುದಿಲ್ಲ. ಕೂಡಲೇ ಕಾರ್ಯಪ್ರವೃತ್ತರಾಗಿ ಗ್ರಾಮಗಳಿಗೆ ನೀರು ಪೂರೈಸಬೇಕು. ಇದರ ಜೊತೆಗೆ ಕೆಲವು ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳು ಬಂದ್ ಬಿದ್ದಿವೆ ಮೂಕೀಹಾಳ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ಮೂಲಕ ಹಲವು ಗ್ರಾಮಗಳಿಗೆ ನೀರು ಪೂರೈಸುವದರಲ್ಲಿಯೂ ನಿಮ್ಮ ಇಲಾಖೆಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಚಾಲು ಮಾಡಲು ಸಾಕಷ್ಟು ಭಾರಿ ತಿಳಿಸಲಾಗಿದ್ದರೂ ಕೂಡಾ ಯಾವುದೇ ಕ್ರಮ ಕೈಗೊಂಡಿಲ್ಲಾ ನೀರು ಪೂರೈಕೆಯಲ್ಲಿ ನಿಮ್ಮ ಇಲಾಖೆಯ ಅಧಿಕಾರಿ ರಾಠೋಡ ಅವರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಈ ಸಮಸ್ಯೆಗಳನ್ನು ಸರಿಪಡಿಸಿ ಇಲ್ಲವಾದಲ್ಲಿ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗದಿರುವ ಕುರಿತು ನಿಮ್ಮ ಮೇಲೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕಾಗುತ್ತದೆ ಎಂದು ಹಿರೇಗೌಡರ ಅವರಿಗೆ ಎಚ್ಚರಿಕೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ:
       ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಪಂ ಆಡಳಿತಾಧಿಕಾರಿ ಹಾಗೂ ವಿಜಯಪುರ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಈ ಬಾರಿ ಇಡೀ ರಾಜ್ಯದಲ್ಲಿ ಅದರಲ್ಲೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆಯಾಗಿದೆ. ಇದರಿಂದ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅಧಿಕಾರಿಗಳು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
      ತಾಳಿಕೋಟೆ ತಾಲೂಕಿನ ಹರನಾಳ ಹಾಗೂ ಗಡಿಸೋಮನಾಳ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ಈ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ನೀರಿನ ಲಭ್ಯತೆ ಕಡಿಮೆ ಇರುವ ಕಡೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಮೂಲಕ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು ಸರಕಾರದ ಯೋಜನೆಗಳು ಬಡವರಿಗೆ ಸಮರ್ಪಕವಾಗಿ ಮುಟ್ಟಬೇಕು ನಿಮ್ಮಿಂದ ಬಡವರಿಗೆ ಯೋಜನೆಗಳು ಲಾಭ ಸಿಗದಿದ್ದರೆ ಸಹಿಸುವದಿಲ್ಲಾ ಕೂಡಲೇ ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಲು ಕ್ರಮ ವಹಿಸಿ ಎಂದು ಏಚ್ಚರಿಸಿದರು.
ಆರೋಗ್ಯ ಸೇವೆಯಲ್ಲಿ ನಿರ್ಲಕ್ಷ್ಯ ಬೇಡ:
      ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ ಅವರು ಆರೋಗ್ಯ ಇಲಾಖೆಯ ಪ್ರಗತಿ ವರದಿ ಮಂಡಿಸಿದ ಸಂದರ್ಭದಲ್ಲಿ ಮಾತನಾಡಿದ ಶಿವನಗೌಡ ಪಾಟೀಲ, ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಅತ್ಯಂತ ಪ್ರಮುಖ ಸೇವೆ ಒದಗಿಸುವ ಇಲಾಖೆಯಾಗಿದೆ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವುದು ಇಲಾಖೆಯ ಜವಾಬ್ದಾರಿಯಾಗಿದೆ. ಈ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು. ಇತ್ತೀಚೆಗೆ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಅಗತ್ಯ ಕ್ರಮಗಳೊಂದಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಹುತೇಕರು ಬಡವರಾಗಿದ್ದು, ಅವರಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿ:
     ಹೆಸ್ಕಾಂ ಅಧಿಕಾರಿಗಳಿಂದ ಎರಡೂ ತಾಲೂಕುಗಳ ವಿದ್ಯುತ್ ವ್ಯವಸ್ಥೆಯ ಕುರಿತು ಮಾಹಿತಿ ಪಡೆದ ಅವರು, ನೀರಿನ ಅಭಾವದ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯ ಮೇಲೂ ಒತ್ತಡ ಉಂಟಾಗುವ ಸಾಧ್ಯತೆಯಿದೆ. ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು. ವಿದ್ಯುತ್‌ನ್ನು ಮಿತವಾಗಿ ಬಳಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಶೈಕ್ಷಣಿಕ ಪ್ರಗತಿಗೆ ಇಲಾಖೆಗಳ ಸಮನ್ವಯ ಅಗತ್ಯ:
      ಗ್ರಾಮೀಣ ಭಾಗದ ಮಕ್ಕಳು ನಗರ ಪ್ರದೇಶಗಳ ಶಾಲೆಗಳಿಗೆ ತೆರಳಲು ಅನುಕೂಲವಾಗುವಂತೆ ಸಾಕಷ್ಟು ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು. ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
     ಸಭೆಯಲ್ಲಿ ತಾಳಿಕೋಟೆ ತಾಪಂ ಇಒ ಅನಸೂಯಾ ಚಲವಾದಿ, ಮುದ್ದೇಬಿಹಾಳ ತಾಪಂ ಇಒ ಸಂಗನಗೌಡ ಬಿರಾದಾರ, ತಾಪಂ ಸಹಾಯಕ ನಿರ್ದೇಶಕ ಕಸನಕ್ಕಿ, ಬಿಇಒ ಬಡದಾನಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ.ಎಂ.ಎಂ.ಬೆಳಗಲ್ಲ, ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಸುರೇಶ ಭಾವಿಕಟ್ಟಿ, ಸಿಡಿಪಿಒ ಶಿವಮೂರ್ತಿ ಕುಂಬಾರ, ಪುರಸಭೆ ಕಂದಾಯ ಅಧಿಕಾರಿ ಸುರೇಶ ಅಮ್ರಣ್ಣವರ, ಸೇರಿದಂತೆ ಎರಡೂ ತಾಲೂಕುಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿ ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಶಿಕ್ಷಣವು ನ್ಯಾಯಯುತ ಸಮಾಜ ನಿರ್ಮಾಣದ ಪ್ರಮುಖ ಸಾಧನ: ಹಿರಿಯ ನ್ಯಾಯವಾದಿ ಕೆ.ಎಲ್. ಪಾಟೀಲ’ನನ್ನ ದೇಹ, ನನ್ನ ಸುರಕ್ಷತೆ’ ಪರಿಕಲ್ಪನೆಯಡಿ ಮಕ್ಕಳಿಗೆ ಜಾಗೃತಿ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು "ಫಲಾಪೇಕ್ಷೆಯಿಲ್ಲದ ಕಾರ್ಯ ಶ್ಲಾಘನೀಯ" -ಶ್ರೀಗುರುಸಿದ್ದೇಶ್ವರ ಶ್ರೀದೇಶನೂರ ಬಂಗಲೆ ರಸ್ತೆ, ದೇವಸ್ಥಾನದ ಅಭಿವೃದ್ಧಿ ಆದಷ್ಟು ಬೇಗ  ಪ್ರಾರಂಭ : ಬಾಬಾಸಾಹೇಬ ಪಾಟೀಲ ಹತ್ತರಗಿ : ದೀಪ ಸಂಜೀವಿನಿ ಉತ್ಪನ್ನಗಳ ಮಳಿಗೆ ಉದ್ಘಾಟನೆ,"ನಾಡು ನುಡಿ, ಗಡಿ ವಿಚಾರದಲ್ಲಿ ಒಗ್ಗಟ್ಟಿನಿಂದ ಶ್ರಮಿಸಿ  / ನಾಡು ನುಡಿಯ ರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗ ಮುಂದಾಗಬೇಕು"  *ಶಾಲಾ ದಾಖಲಾತಿಯಲ್ಲಿ ಗಣನೀಯ ಏರಿಕೆ: ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು*ವಕೀಲರ ಸಂರಕ್ಷಣೆಯ ಕಾಯ್ದೆ ಪರಿಣಾಮಕಾರಿ ಜಾರಿಗೆ ಸವದತ್ತಿ ವಕೀಲರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಮನವಿ  ಇಂಡಿ: ಸಿದ್ದೇಶ್ವರ ಸ್ವಾಮೀಜಿ ಮಳಿಗೆಗಳ ಬಹಿರಂಗ ಹರಾಜು – ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆವಿದ್ಯುತ್‌ ಸಮಸ್ಯೆಗಳಿಗೆ ಶೀಘ್ರ ಪರಿಹರಿಸಲು ಆಗ್ರಹಿಸಿ ಅನಿರ್ದಿಷ್ಟ ಹೋರಾಟ