ತಾಳಿಕೋಟೆ: ಪಟ್ಟಣದ ಶ್ರೀ ಎಸ್.ಎಸ್. ವಿದ್ಯಾ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಎಚ್.ಎಸ್. ಪಾಟೀಲ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಬಿ.ಪಿ.ಎಡ್. ಪ್ರಥಮ ವರ್ಷದ ವಿದ್ಯಾರ್ಥಿ ತನ್ವೀರ್ ಜಮಾದಾರ್ ಅವರು ೨೦೨೬-೨೭ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಬಾಸ್ಕೆಟ್ಬಾಲ್ ತಂಡಕ್ಕೆ ಆಯ್ಕೆಯಾಗುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ವಿಜಯಪುರದ ಶ್ರೀ ಬಂಜಾರ ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವವಿದ್ಯಾಲಯದ ಬಾಸ್ಕೆಟ್ಬಾಲ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ತನ್ವೀರ್ ಜಮಾದಾರ್ ಅವರು ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ವಿದ್ಯಾರ್ಥಿಯ ಈ ಕ್ರೀಡಾ ಸಾಧನೆಗೆ ಶ್ರೀ ಎಸ್.ಎಸ್. ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್. ಪಾಟೀಲ್, ಕಾರ್ಯದರ್ಶಿ ಸಚಿನ್ ಎಚ್. ಪಾಟೀಲ್, ಆಡಳಿತಾಧಿಕಾರಿ ಕಿರಣ್ ಎಚ್. ಪಾಟೀಲ್, ಮಹಾವಿದ್ಯಾಲಯದ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ಮುಂದಿನ ಕ್ರೀಡಾ ಸ್ಪರ್ಧೆಗಳಲ್ಲಿಯೂ ಉತ್ತಮ ಸಾಧನೆ ಮಾಡುವ ಮೂಲಕ ಮಹಾವಿದ್ಯಾಲಯ ಹಾಗೂ ವಿಶ್ವವಿದ್ಯಾಲಯಕ್ಕೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.