LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೋಧಕರ ತರಬೇತಿ ಶಿಬಿರ

ಬೆಳಗಾವಿ,

ಬೆಳಗಾವಿ ಜಿಲ್ಲಾ ಪಂಚಾಯತ್ , ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಣ್ಣೂರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚನ್ನಮ್ಮನ ಕಿತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಉಲ್ಲಾಸ ನವಭಾರತ ಸಾಕ್ಷರತಾ ಕಾರ್ಯಕ್ರಮದ ಬೋಧಕರ ತರಬೇತಿ ಶಿಬಿರವನ್ನು ಇಂದು ಹೊಸಕಾದರವಳ್ಳಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ಗಾಯತ್ರಿ ಅಜ್ಜನ್ನವರ ಮಾತನಾಡಿ, “ಇದು ರಾಷ್ಟ್ರೀಯ ಹೆಮ್ಮೆಯ ಕೆಲಸವಾಗಿದೆ. ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಿ ಅವರ ಬಾಳಿಗೆ ಬೆಳಕಾಗಿಸುವ ಮಹತ್ವದ ಜವಾಬ್ದಾರಿ ನಿಮ್ಮದಾಗಿದೆ” ಎಂದು ಹೇಳಿದರು.

ತರಬೇತಿ ಶಿಬಿರದಲ್ಲಿ ಸಾಕ್ಷರತಾ ಕಾರ್ಯಕ್ರಮದ ಉದ್ದೇಶಗಳು, ಬೋಧನಾ ವಿಧಾನಗಳು ಹಾಗೂ ಕಾರ್ಯಯೋಜನೆ ಕುರಿತು ಮಾರ್ಗದರ್ಶನ ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಣ್ಣಪ್ಪ ರಾಮರಾವ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಿ.ಆರ್.ಪಿ ಗಳಾದ ಎಂ.ವೈ. ಕಡಕೋಳ, ಇ.ಸಿ.ಓ ಎಸ್.ಎಂ. ಶಹಪೂರಮಠ, ಶ್ರೀಮತಿ ಜೆ.ಸಿ. ಕೋಟಗಿ, ಸಿ.ಆರ್.ಪಿ ಗಳಾದ ವಿನಾಯಕ ಲಕ್ಕನಗೌಡರ, ವಿನೋದ ಪಾಟೀಲ, ಬಸವರಾಜ ಕುಂಬಾರ ಹಾಗೂ ವಿವಿಧ ಗ್ರಾಮಗಳ ಬೋಧಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ