ಬೆಳಗಾವಿ: ವಿದ್ಯಾರ್ಥಿಗಳ ಬದುಕಿಗೆ ಜ್ಞಾನ, ಶಿಸ್ತು ಹಾಗೂ ಉತ್ತಮ ಮೌಲ್ಯಗಳನ್ನು ನೀಡುವ ಮೂಲಕ ಶಿಕ್ಷಕರು ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಅಮೃತಾ ವಿದ್ಯಾಲಯದ ವಿಶ್ರಾಂತಿ ಪ್ರಾಚಾರ್ಯರಾದ ಇಂದಿರಾ ಮಾಣಿಕ ಶಂಕರಗೌಡಾ ಅವರು ಹೇಳಿದರು.
ನಗರದ ಸುಭಾಷ ನಗರ ಅ.ಭಾ.ವೀ.ಮ. ವಿದ್ಯಾರ್ಥಿನಿಯರ ಉಚಿತ ವಸತಿ ನಿಲಯದಲ್ಲಿ ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಆಯೋಜಿಸಲಾದ ಶಿಕ್ಷಕರ ದಿನಾಚರಣೆ " ಗುರುಭ್ಯೋನಮಃ" ಮತ್ತು ಸಹೃದಯ ದಾನಿಗಳಿಗೆ " ಕೃತಜ್ಞತಾಕೂಟ" ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕ ವೃತ್ತಿ ಕೇವಲ ಪಾಠ ಬೋಧಿಸುವುದಕ್ಕೆ ಸೀಮಿತವಾಗಿರದೆ, ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ತರ ಕಾರ್ಯವಾಗಿದೆ. ಶಿಕ್ಷಕರು ತಮ್ಮ ಜ್ಞಾನ ಮತ್ತು ಅನುಭವದ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುತ್ತಾರೆ. ವಿದ್ಯಾರ್ಥಿಗಳ ಯಶಸ್ಸಿನ ಹಿಂದೆ ಶಿಕ್ಷಕರ ಪರಿಶ್ರಮ, ತ್ಯಾಗ ಮತ್ತು ಮಾರ್ಗದರ್ಶನ ಪ್ರಮುಖವಾಗಿದ್ದು, ಶಿಕ್ಷಕರ ಸೇವೆಯನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಅಗತ್ಯವಿರುವವರಿಗೆ ನೆರವು ನೀಡುವುದು, ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವುದು, ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ. ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸೇವಾ ಚಟುವಟಿಕೆಗಳನ್ನು ವಿಸ್ತರಿಸುವ ಉದ್ದೇಶ ಹೊಂದಿದೆ.
ಲಿಂಗಾಯತ ಮಹಿಳಾ ಸಮಾಜದ ಸಹೋದಿರಿಯರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ನೆರವು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಹಾಗೂ ಬಡ ಮಕ್ಕಳಿಗೆ ವಿವಿಧ ರೀತಿಯ ಸಹಾಯ ನೀಡುತ್ತಿರುವುದು ಸಂತಸವಾಗಿದೆ. ಅಗತ್ಯವಿರುವವರಿಗೆ ನೆರವು ನೀಡುವುದು, ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವುದು, ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ. ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸೇವಾ ಚಟುವಟಿಕೆಗಳನ್ನು ವಿಸ್ತರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರವಚನ -ಚಂದ್ರಿಕೆ, ಪ್ರಶಸ್ತಿ ಪುರಸ್ಕತರಾದ ದಿವ್ಯಾ ಅಂಗಡಿ, ಪ್ರೇಮಾ ಪಾನಶೆಟ್ಟಿ, ಶುಭಾ ತೇಲಸಂಗ, ಮಲ್ಲಿಕಾರ್ಜುನ ಮೂಲಿಮನಿ, ಲಿಂಗಾಯತ ಮಹಿಳಾ ಸಮಾಜ ಅಧ್ಯಕ್ಷರಾದ ರಾಜೇಶ್ವರಿ ಕಲೂತಿ, ಕಾರ್ಯದರ್ಶಿ ಶ್ರೀದೇವಿ ಅಂಟಿನ, ಸಹ ಕಾರ್ಯದರ್ಶಿ ಲಕ್ಷ್ಮೀ ಸಾನಿಕೊಪ್ಪ ಹಾಗೂ ಇತರರು ಇದ್ದರು.