ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.
ಗಾಲಿ ಜನಾರ್ಧನ ರೆಡ್ಡಿಗೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಪ್ರಕರಣವು ಕರ್ನಾಟಕದ ರಾಜಕೀಯ ಮತ್ತು ಗಣಿಗಾರಿಕೆ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಒಬುಲಾಪುರಂ ಗಣಿಗಾರಿಕೆ ಕಂಪನಿ (OMC)ಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಯವರನ್ನು ಸಿಬಿಐ ಕೋರ್ಟ್ ಮೇ 6 ರಂದು ಸುದೀರ್ಘ ವರ್ಷಗಳ ತನಿಖೆಯ ನಂತರ ದೋಷಿಯೆಂದು ಘೋಷಿಸಿತ್ತು.