Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೆಲಿಗ್ರಾಂ ಭಾರತದಲ್ಲಿ ನಿಷೇಧಕ್ಕೊಳಗಾಗುವ ಸಾಧ್ಯತೆ

ನವದೆಹಲಿ: ರಷ್ಯಾ ಮೂಲದ ಖ್ಯಾತ ಸಾಮಾಜಿಕ ಜಾಲತಾಣ Telegram ಭಾರತದಲ್ಲಿ ನಿಷೇಧಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹೌದು.. ಮನಿಕಂಟ್ರೋಲ್‌ನಲ್ಲಿನ ವರದಿಯ ಪ್ರಕಾರ, ಟೆಲಿಗ್ರಾಮ್ ವಿರುದ್ಧ ಕೇಳಿಬಂದಿರುವ ಈ ಆರೋಪಗಳು ಸಾಬೀತಾದರೆ ಭಾರತದಲ್ಲಿ ಟೆಲಿಗ್ರಾಂ ನಿಷೇಧವಾಗುವ ಎಲ್ಲ ಸಾಧ್ಯತೆಗಳಿವೆ. ವರದಿಯಲ್ಲಿರುವಂತೆ ಟೆಲಿಗ್ರಾಂ ಆ್ಯಪ್ ಬಳಕೆ ಮಾಡಿಕೊಂಡು ಸುಲಿಗೆ ಮತ್ತು ಜೂಜಾಟದಂತಹ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ.

ದುಷ್ಕರ್ಮಿಗಳು ತಮ್ಮ ಕಾನೂನು ಬಾಹಿರ ಚುಟುವಟಿಕೆಗಳನ್ನು ನಡೆಸಲು ಟೆಲಿಗ್ರಾಂ ವೇದಿಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದ್ದು, ಇದು ಸಾಬೀತಾದರೆ ಟೆಲಿಗ್ರಾಂ ಆ್ಯಪ್ ಅನ್ನು ಭಾರತದಲ್ಲಿ ನಿಷೇಧ ಮಾಡುವ ಸಾಧ್ಯತೆ ಇದೆ.

ಈಗಾಗಲೇ ಭಾರತ ಸರ್ಕಾರ ಈ ಸಂಬಂಧ ಹೆಚ್ಚಿನ ಪರಿಶೀಲನೆಯಲ್ಲಿ ತೊಡಗಿದ್ದು, ಭಾರತ ಸರ್ಕಾರವು ಸಹ ವೇದಿಕೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ. ಈ ಸಂಬಂದ ತಜ್ಞರ ವರದಿ ಮತ್ತು ತನಿಖಾಧಿಕಾರಿಗಳ ಅಭಿಪ್ರಾಯದ ಮೇರೆಗೆ ನಿಷೇಧ ಹೇರುವ ಸಾಧ್ಯತೆಯಿದೆ.

ಭಾರತ ಸರ್ಕಾರದ ತನಿಖೆಯನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ನಡೆಸುತ್ತಿದೆ. ಸುಲಿಗೆ ಮತ್ತು ಜೂಜಾಟದಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಟೆಲಿಗ್ರಾಮ್ ಅನ್ನು ಹೇಗೆ ಬಳಸಲಾಗಿದೆ ಎಂಬುದರ ಕುರಿತು ಅಧಿಕಾರಿಗಳು ವಿಶೇಷವಾಗಿ ಆಸಕ್ತಿ ಹೊಂದಿದ್ದಾರೆ. ನಿಷೇಧವನ್ನು ತಳ್ಳಿಹಾಕದಿದ್ದರೂ, ಅಂತಿಮ ನಿರ್ಧಾರವು ತನಿಖೆಯ ಫಲಿತಾಂಶವನ್ನು ಅವಲಂಬಿಸಿರುತ್ತದೆ ಎಂದು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ