LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದ್ರಿಯ ಆರೋಗ್ಯ ಸಪ್ತಾಹದ ಸಮಾರೋಪ ಸಮಾರಂಭ ಯಶಸ್ವಿ

ಹಸಿರು ಕ್ರಾಂತಿ ವರದಿ ಬೆಳಗಾವಿ
ನಗರದ ಶ್ರೀ ಬಿ.ಎಂ.ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ AYURGRAMA 3.0 ಅಡಿಯಲ್ಲಿ ಆಯೋಜಿಸಲಾದ ಇಂದ್ರಿಯ ಆರೋಗ್ಯ ಸಪ್ತಾಹದ ಸಮಾರೋಪ ಸಮಾರಂಭ ಯಶಸ್ವಿಯಾಗಿ ಜರುಗಿತು.

ಒಂದು ವಾರದ ಕಾಲ ನಡೆದ ಈ ಅಭಿಯಾನದ ಉದ್ದೇಶ ಆಯುರ್ವೇದದ ಮೂಲಕ ಇಂದ್ರಿಯಗಳ ಆರೋಗ್ಯದ ಮಹತ್ವವನ್ನು ಜನರಲ್ಲಿ ಅರಿವು ಮೂಡಿಸುವುದು ಹಾಗೂ ತಡೆಗಟ್ಟುವ ಆರೋಗ್ಯ ಸೇವೆ ಉತ್ತೇಜಿಸಲಾಗಿತ್ತು.

ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸುಹಾಸಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲ ಡಾ.ಪಿ.ಜಿ.ಜಾಡರ, ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ.ರಾಜೇಶ್ವರಿ ಕಾಮತ್, ಡಾ.ಎಂ.ಬಿ.ರಾಮಣ್ಣವರ, ಡಾ.ಸವಿತಾ ಪಡಶೆಟ್ಟಿ, ಡಾ.ಸಂದೀಪ್ ಎಸ್.ಸಾಗರೆ, ಡಾ.ಉಷಾ ಸಾನು ಹಾಗೂ ಡಾ.ಸಿದ್ಧಿ ಪ್ರಭು ದೇಸಾಯಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಇಂದ್ರಿಯ ಆರೋಗ್ಯ ಸಪ್ತಾಹದ ಅವಧಿಯಲ್ಲಿ ಹಮ್ಮಿಕೊಳ್ಳಲಾದ ವಿವಿಧ ಚಟುವಟಿಕೆಗಳ ಸಮಗ್ರ ವರದಿಯನ್ನು ಮಂಡಿಸಲಾಯಿತು.

ತಜ್ಞರ ಉಪನ್ಯಾಸಗಳು, ಜಾಗೃತಿ ಅಭಿಯಾನಗಳು, ವರ್ತನೆ ಪರಿವರ್ತನೆ ಕಾರ್ಯಕ್ರಮಗಳು, ವಿವಿಧ ಸ್ಪರ್ಧೆಗಳು ಹಾಗೂ ಸಮುದಾಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನವನ್ನು ವರದಿಯಲ್ಲಿ ವಿವರಿಸಲಾಯಿತು. ವಾರದ ಅವಧಿಯಲ್ಲಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಂಸಾ ಪತ್ರಗಳನ್ನು ನೀಡಿ ಗೌರವಿಸಲಾಗಿದೆ.

ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳು ನುಕ್ಕಡ್ ನಾಟಕವನ್ನು ಪ್ರದರ್ಶಿಸಿ, ಆಯುರ್ವೇದದ ತತ್ವಗಳ ಮೂಲಕ ಇಂದ್ರಿಯಗಳ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಪರಿಣಾಮಕಾರವಾಗಿ ಜನರಿಗೆ ತಿಳಿಸಿದರು.

ಈ ಸಮಾರಂಭದೊಂದಿಗೆ AYURGRAMA 3.0 ಅಡಿಯಲ್ಲಿ ನಡೆದ ಇಂದ್ರಿಯ ಆರೋಗ್ಯ ಸಪ್ತಾಹ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ತಡೆಗಟ್ಟುವ ಆರೋಗ್ಯ ಸೇವೆ ಹಾಗೂ ಸಮಗ್ರ ಆರೋಗ್ಯ ಸಂರಕ್ಷಣೆಯತ್ತ ಸಂಸ್ಥೆಯ ಬದ್ಧತೆಯನ್ನು ಮತ್ತೊಮ್ಮೆ ಪ್ರತಿಪಾದಿಸಿಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್