Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದ ಬೆಳವಣಿಗೆಗೆ ಗಾನಯೋಗಿ ಪುಟ್ಟರಾಜ ಗವಾಯಿಗಳ ಕೊಡುಗೆ ಅನನ್ಯ

ರಾಮದುರ್ಗ: ಗಾನಯೋಗಿ ಲಿಂ. ಪಂಚಾಕ್ಷರಿ ಗವಾಯಿಗಳ ೮೧ ನೇ ಪುಣ್ಯಸ್ಮರಣೆ ಹಾಗೂ ಲಿಂ. ಪುಟ್ಟರಾಜ ಗವಾಯಿಗಳ ೧೫ ನೇ ಪುಣ್ಯಾರಾಧನೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಪಟ್ಟಣದ ಗಾನಯೋಗಿ ಪುಟ್ಟರಾಜ ನಾದಸ್ವರ ಸಂಗೀತ ಪಾಠ ಶಾಲೆಯ ನೇತೃತ್ವದಲ್ಲಿ ಸ್ಥಳೀಯ ಸ್ವಾಮಿ ವಿವೇಕಾನಂದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ಮಾತನಾಡಿ, ಗದುಗಿನ ಪುಟ್ಟರಾಜ ಗವಾಯಿಗಳು ಹಾನಗಲ್‌ನ ಕುಮಾರಸ್ವಾಮೀಜಿ, ತುಮಕೂರಿನ ಶಿವಕುಮಾರ ಸ್ವಾಮೀಜಿಗಳು ಸಮಾಜದಲ್ಲಿನ ಬಡ ಹಾಗೂ ನಿರ್ಗತಿಕ ಮಕ್ಕಳಿಗೆ ಊಟ, ವಸತಿ ಮತ್ತು ಶಿಕ್ಷಣ ನೀಡಿ ಮುನ್ನಲೆಗೆ ತಂದಿದ್ದಾರೆ. ನಾನೂ ಕೂಡ ಧಾರವಾಡದ ಮುರುಘಾಮಠದಲ್ಲಿ ಶಿಕ್ಷಣ ಪಡೆದು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಅಂಚಿನಲ್ಲಿದ್ದೇನೆ. ಸಮಾಜದ ಬೆಳವಣಿಗೆಗೆ ಗಾನಯೋಗಿ ಪುಟ್ಟರಾಜ ಗವಾಯಿಗಳ ಕೊಡುಗೆ ಅನನ್ಯ ಎಂದು ಬಣ್ಣಿಸಿದರು.
ಸಮಾರಂಭದ ಸಾನಿಧ್ಯ ವಹಿಸಿದ್ದ ಸ್ಥಳೀಯ ಶಿವಮೂರ್ತೇಶ್ವರ ಮಠದ ಶ್ರೀ ಶಾಂತವೀರ ಸ್ವಾಮೀಜಿ ಆಶೀರ್ವಚನ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಪುಟ್ಟರಾಜ ನಾದಸ್ವರ ಸಂಗೀತ ಪಾಠ ಶಾಲೆಯ ಸಂಸ್ಥಾಪಕ ಪಿ.ಎಂ ಹೂಗಾರ ವಹಿಸಿಸಿದ್ದರು.
ನಿವೃತ್ತ ಶಿಕ್ಷಕರಾದ ಬಿ.ವೈ. ನಡಮನಿ, ಆರ್.ಎಸ್. ಸಂಕಣ್ಣವರ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಆನಂದತೀರ್ಥ ಜೋಶಿ, ನಿವೃತ್ತ ಶಿಕ್ಷಕ ಎಸ್.ಎಚ್. ಪ್ರಭಾಕರ, ಬಿಆರ್‌ಸಿ ಎಸ್.ವೈ. ಛಾಯಪ್ಪಗೋಳ, ಬಿ.ಜಿ. ದಾಸರ, ಸ್ವಾಮಿ ವಿವೇಕಾನಂದ ಶಾಲೆಯ ಮುಖ್ಯೋಪಾಧ್ಯಾಯ ಬಿ.ವೈ. ಮಳಲಿ, ಪುಟ್ಟರಾಜ ನಾದಸ್ವರ ಸಂಗೀತ ಪಾಠ ಶಾಲೆಯ ಸಿಬ್ಬಂದಿ, ಸ್ವಾಮಿ ವಿವೇಕಾನಂದ ಶಾಲೆಯ ಶಿಕ್ಷಕ ಸಿಬ್ಬಂದಿ ಸೇರಿದಂತೆ ಇತರರಿದ್ದರು. ಶಿಕ್ಷಕ ಎಸ್.ಎಂ. ಬಡಿಗೇರ ಸ್ವಾಗತಿಸಿದರು. ಬಿಆರ್‌ಪಿ ಕೆ.ವೈ. ಪಾಟೀಲ ನಿರೂಪಿಸಿದರು ಉಲ್ಲಾಸರಾವ ರೇಣಕೆ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ