Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸತ್ಯಕ್ಕೆ ಸಂದ ಜಯ, ಸಮಾಜದ ಅಭಿವೃದ್ಧಿ ಕಾಳಜಿ ನಮ್ಮದು - ಅಲ್ಲಿಪುರ ಕೆ.ಮೋಹನ್



ಬಳ್ಳಾರಿ.06.: ಬಳ್ಳಾರಿ ಜಿಲ್ಲಾ ಕುರುಬರ ಸಂಘದ ವಿರುದ್ಧ ಸಂಘಗಳ ನೋಂದಣಾಧಿಕಾರಿ ಗಳು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರು ಹೊರಡಿಸಿರುವ ಕಾನೂನು ಬಾಹಿರ ಆದೇಶಕ್ಕೆ, ಧಾರವಾಡದ ಮಾನ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಬಳ್ಳಾರಿ ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಅಲಿಪುರ ಕೆ.ಮೋಹನ್ ಅವರು ಹೇಳಿದರು. ನಗರದ ದೇವಿನಗರ ಪ್ರದೇಶದ ಸಂಘದ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಳ್ಳಾರಿ ಜಿಲ್ಲಾ ಕುರುಬರ ಸಂಘಕ್ಕೆ ಕಾನೂನು ಬದ್ಧವಾಗಿಯೇ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಸಮಾಜದ ಅಭಿವೃದ್ಧಿಗಾಗಿ ನಾವೆಲ್ಲರೂ ಹಗಲಿರುಳು ಶ್ರಮಿಸುತ್ತಿದ್ದೇವೆ. ಹೀಗಿರುವಾಗ ಸಂಘಗಳ ನೋಂದಣಾಧಿಕಾರಿ ಗಳು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರು, ಕಾನೂನು ಬದ್ಧವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಕಾನೂನು ಬಾಹಿರವಾಗಿ ಮಾಡಿದ್ದರು. ಕಳೆದ ಮಾ.3 ರಂದು ಕಾರ್ಯಕಾರಿ ಸಮಿತಿಯನ್ನು ಕಾನೂನು ಬಾಹಿರವಾಗಿ ರಚಿಸಿ ನೂತನ ಪದಾಧಿಕಾರಿಗಳನ್ನು ನೇಮಿಸಿ, ಅದನ್ನು ಅಧಿಕಾರಿಗಳು ಅನುಮೋದಿಸಿದ್ದರು. ಇದಕ್ಕೆ ಧಾರವಾಡದ ಮಾನ್ಯ ಉಚ್ಛ ನ್ಯಾಯಾಲಯ ಎ.26ರಂದು ತಡೆಯಾಜ್ಞೆ ನೀಡಿದೆ. ರಿಟ್ ಅರ್ಜಿಯಲ್ಲಿ ಮೂರು ಹಾಗೂ ನಾಲ್ಕನೇ ಪ್ರತಿವಾದಿಗಳಾದ ಕೆ.ಮಹಾಲಿಂಗನ ಗೌಡ, ಕೆ.ಎಸ್.ರಘು ಎನ್ನುವವರು, ಮೇ.5 ರಂದು ಆಕ್ಷೇಪಣೆಗಳನ್ನು ಸಲ್ಲಿಸಿ, ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ಕೋರಿದ್ದಾರೆ, ನ್ಯಾಯಾಲಯ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದರು. ಸಂಘದ ಜಿಲ್ಲಾಧ್ಯಕ್ಷ ಡಾ. ಪಿ.ಎಲ್.ಗಾದಿಲಿಂಗನ ಗೌಡ ಅವರು ಮಾತನಾಡಿ, ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು, ಒಗ್ಗಟ್ಟಿನಿಂದ ಸಮಾಜದ ಅಭಿವೃದ್ಧಿಗಾಗಿ, ಸಮಾಜದ ಮಕ್ಕಳ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದು, ಇದನ್ನು ಸಹಿಸದ ಕೆಲವರು ಕಾನೂನು ಬಾಹಿರ ಕೆಲಸಕ್ಕೆ ಮುಂದಾಗಿದ್ದಾರೆ, ನ್ಯಾಯಾಲಯವೇ ಉತ್ತರ ನೀಡಲಿದೆ, ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದರು.

ಈ ಸಂದರ್ಭದಲ್ಲಿ  ಸಂಘಟನಾ ಕಾರ್ಯದರ್ಶಿ ಕೆ. ಬಿ. ಕೊಳಗಲ್ ಅಂಜನಿ, ಯುವ ನಾಯಕ ಬಿ.ಎಂ.ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ