Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಪಾಲ್ಗೊಂಡಿದ್ದ ವೇದಿಕೆ ಹಠಾತ್ತನೆ ಕುಸಿತ

ಪಾಟ್ನಾ: ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಪಾಲ್ಗೊಂಡಿದ್ದ ವೇದಿಕೆ ಹಠಾತ್ತನೆ ಕುಸಿದ ಘಟನೆ ಬಿಹಾರದ ಪಾಟಲಿಪುತ್ರದಲ್ಲಿ ನಡೆದಿದೆ. ಘಟನೆ ಕೆಲಕಾಲ ಗೊಂದಲ ಸೃಷ್ಟಿಸಿತ್ತು.

ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಪುತ್ರಿ ಮಿಸಾ ಭಾರತಿ ಪರ ಮತಯಾಚನೆ ಮಾಡಲು ರಾಹುಲ್‌ ಗಾಂಧಿ ಪಟ್ನಾಕ್ಕೆ ಬಂದಿದ್ದರು. ಪಾಲಿಗಂಜ್ ಪ್ರದೇಶದಲ್ಲಿ ಆಯೋಜಿಸಿದ್ದ ಚುನಾವಣಾ ಸಮಾವೇಶದಲ್ಲಿ ಅವರು ಭಾಗವಹಿಸಿದ್ದರು.

ಚುನಾವಣಾ ಪ್ರಚಾರಕ್ಕಾಗಿ ಸಿದ್ಧಪಡಿಸಲಾಗಿದ್ದ ವೇದಿಗೆ ಏರಿ ಮತದಾರರತ್ತ ಕೈ ಬೀಸುತ್ತಾ ರಾಹುಲ್ ಗಾಂಧಿ ಮಧ್ಯಭಾಗದಲ್ಲಿ ಬರುತ್ತಿದ್ದಂತೆ ವೇದಿಕೆಯ ಒಂದು ಭಾಗ ಏಕಾಏಕಿ ಕುಸಿದಿದೆ. ಪಕ್ಕದಲ್ಲಿದ್ದ ಮಿಸಾ ಭಾರತಿ ಅವರು ತಕ್ಷಣ ರಾಹುಲ್‌ ಅವರ ಕೈ ಹಿಡಿದು ರಕ್ಷಣೆಗೆ ಯತ್ನಿಸಿದ್ದಾರೆ.

ಭದ್ರತಾ ಸಿಬ್ಬಂದಿ ಕೂಡ ರಾಹುಲ್‌ ನೆರವಿಗೆ ಧಾವಿಸುತ್ತಿದ್ದಾರೆ. ಈ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಒಂದಲ್ಲ ಹಲವಾರು ಬಾರಿ ವೇದಿಕೆ ಏಕಾಏಕಿ ಕುಸಿದಿದ್ದರಿಂದ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಅದೇ ವೇದಿಕೆಯ ಸಮತಟ್ಟಾದ ಜಾಗದಲ್ಲಿ ನಿಂತು ಅಭ್ಯರ್ಥಿ ಪರ ಮತ ಯಾಚಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ