Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೇವಕರ ಮೇಲೆ ಬಿದ್ದ ದೇವರ ವಿಗ್ರಹ: ಒಂಬತ್ತು ಜನರಿಗೆ ಗಾಯ

ಭುವನೇಶ್ವರ್: ಪ್ರಸಿದ್ಧ ಪುರಿ ಜಗನ್ನಾಥ ರಥಯಾತ್ರೆ ನಿಮಿತ್ತದ ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ದೇವರ ಮೂರ್ತಿ ಕೆಳಗಿಳಿಸುವಾಗ ಅವಘಡ ಸಂಭವಿಸಿದೆ. ಬಲಭದ್ರ ದೇವರ ವಿಗ್ರಹ ಸೇವಕರ ಮೇಲೆ ಬಿದ್ದಿದೆ. ಇದರಿಂದ ಒಂಬತ್ತು ಜನರು ಗಾಯಗೊಂಡಿದ್ದಾರೆ.


ಜುಲೈ 7ರಂದು ಭಗವಾನ್ ಜಗನ್ನಾಥ, ದೇವಿ ಸುಭದ್ರ ಮತ್ತು ಭಗವಾನ್ ಬಲಭದ್ರರ ವೈಭವದ ರಥಯಾತ್ರೆ ಜರುಗಿತ್ತು. ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಬಲಭದ್ರ ದೇವರ ರಥದಿಂದ ಗುಂಡಿಚಾ ದೇವಸ್ಥಾನಕ್ಕೆ ದೇವರ ವಿಗ್ರಹವನ್ನು ಕೊಂಡೊಯ್ಯುತ್ತಿದ್ದಾಗ ಜಾರಿ ಸೇವಕರ ಮೇಲೆ ಬಿದ್ದಿದೆ. ಈ ಪೈಕಿ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ತಿಳಿಸಿದ್ದಾರೆ.


ಸಂಪೂರ್ಣ ವಿವರ: ದೇವರ ಮೂರ್ತಿ ಕೆಳಗಿಳಿಸುವಾಗ ಕಾರ್ಯವನ್ನು 'ಪಹಂಡಿ' ಆಚರಣೆ ಎಂದು ಕರೆಯಲಾಗುತ್ತದೆ. ಎಲ್ಲ ಮೂರು ದೇವರ ವಿಗ್ರಹಗಳನ್ನು ಅವರ ಜನ್ಮಸ್ಥಳವೆಂದು ಪರಿಗಣಿಸಲಾದ ಗುಂಡಿಚಾ ದೇವಾಲಯಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ಈ ವೇಳೆ, ಬಲಭದ್ರರ ಭಾರವಾದ ಮರದ ವಿಗ್ರಹವನ್ನು ಕೆಳಗಿಳಿಸುವಾಗ ಆ ಮೂರ್ತಿ ಹೊತ್ತಿದ್ದವರು ನಿಯಂತ್ರಣ ಕಳೆದುಕೊಂಡರು. ವಿಗ್ರಹಕ್ಕೆ ಕಟ್ಟಿದ್ದ ಹಗ್ಗದಂತಹ ವಸ್ತುವಿನಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ಗಾಯಗೊಂಡ ಸೇವಕರೊಬ್ಬರು ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*