Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಸರ್ಕಾರ ಮರೆತಿದೆ: ಶಾಸಕ ರಮೇಶ ಜಾರಕಿಹೊಳಿ

ಯರಗಟ್ಟಿ: ನಾಡಿನಲ್ಲಿ ಸಂಸ್ಕೃತಿ, ಸಂಪ್ರದಾಯಗಳು ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ದೇವಾಲಯಗಳು, ದೇವರ ಕೆಲಸಗಳನ್ನು ಭಕ್ತಾಧಿಗಳು ಮಾಡುತ್ತಿರಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು.

ಪಟ್ಟಣದಲ್ಲಿ ನೂತನವಾಗಿ ನವಿಕರಣಗೊಂಡ ದುರ್ಗಾದೇವಿ ದೇವಾಲಯ ಮತ್ತು ದುರ್ಗಾದೇವಿ ಜಾತ್ರೆ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪುರಾತನ ಕಾಲದ ಐತಿಹಾಸಿಕ ದೇವಸ್ಥಾನಗಳು ಜೀರ್ಣೋದ್ಧಾರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೆವೆ ಆದರೆ ಈಗನ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮರೆತಿದೆ ಎಂದರು.

ಈಗಿನ ಯುವ ಪೀಳಿಗೆಯ ಪ್ರತಿಯೊಬ್ಬರೂ ಆಚಾರ-ವಿಚಾರಗಳನ್ನು ತಿಳಿಯಬೇಕು ಹಾಗೂ ಐತಿಹಾಸಿಕ ಇತಿಹಾಸಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ನೂತನ ದೇವಸ್ಥಾನ ವೀಕ್ಷಿಸಿ ಶುಭ ಹಾರೈಸಿದರು.

ಇದೇ ವೇಳೆ ಬೆಳ್ಳಿಗೆ ರುದ್ರಾಭಿಷೇಕ, ವಿಶೇಷ ಪೂಜೆ, ಹೊಮ ಹವನ, ನವಗೃಹ ಪೂಜೆಯನ್ನು ವೈದೀಕರಾದ ರಾಜು ಹಿರೇಮಠ, ಆಕಾಶ ಹಿರೇಮಠ, ವಿಶ್ವನಾಥ ಹಿರೇಮಠ ಇವರಿಂದ ಪೂಜಾ ವಿಧಿ ವಿಧಾನಗಳನ್ನು ನೆಡೆಸಿದ್ದರು.

ಈ ಸಂದರ್ಭಧಲ್ಲಿ ಸಾನಿಧ್ಯವನ್ನು ರಾಜರಾಜೇಶ್ವರಿ ಆಶ್ರಮದ ಗಣಪತಿ ಮಹಾರಾಜರು, ದೇವಾಲಯ ಅಭಿವೃದ್ದಿ ಸಮಿತಿಯ ಸುರೇಶ ಭಜಂತ್ರಿ, ರಾಜು ಭಜಂತ್ರಿ, ಕೃಷ್ಣಪ್ಪ ಭಜಂತ್ರಿ, ಮಲ್ಲಿಕಾರ್ಜುನ ಭಜಂತ್ರಿ, ಲಕ್ಷ್ಮಣ ಭಜಂತ್ರಿ, ರುದ್ರಪ್ಪ ಭಜಂತ್ರಿ, ಕಾಂತು ಭಜಂತ್ರಿ, ಭೀಮಶಿ ಭಜಂತ್ರಿ, ಶಿವು ಭಜಂತ್ರಿ, ಹನುಮಂತ ಭಜಂತ್ರಿ, ಮಹೇಶ ಭಜಂತ್ರಿ, ರಫೀಕ ಡಿ. ಕೆ. ಸೇರಿದಂತೆ ಅನೇಕರು ಭಜಂತ್ರಿ ಸಾಮಾಜದ ಗುರು ಹಿರಿಯರು, ಯುವಕರು ಇದ್ದರು.
೦೯ ಯರಗಟ್ಟಿ ೦೧
ಪೋಟೋ ಶೀರ್ಷಿಕೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ