LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರೋತ್ಸಾಹ ಧನ ಬಾಕಿ ಮಧ್ಯೆ ಹಾಲಿನ ದರ ಏರಿಕೆಗೆ ಸರ್ಕಾರ ಚಿಂತನೆ

ಬೆಂಗಳೂರು, ಮಾರ್ಚ್ 05: ಅಗತ್ಯ ವಸ್ತು, ಸಾಮಾಗ್ರಿಗಳ ಬೆಲೆ‌ ಏರಿಕೆ ಆಯ್ತು. ಬಸ್ ಟಿಕೆಟ್ ದರ, ಮೆಟ್ರೊ ಪ್ರಯಾಣ ದರ ದುಪ್ಪಟ್ಟು ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಅಧಿವೇಶನ ಮುಗಿದ ಬಳಿಕ ಹಾಲಿನ ದರ (Milk rate) ಏರಿಕೆ ಆಗಲಿದೆ ಎಂಬ ಚರ್ಚೆ ಈಗಾಗಲೇ ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿಕೊಡುವಂತೆ ವಿಧಾನ ಪರಿಷತ್​ನಲ್ಲಿಂದು ಹಾಲಿನ ದರ ಏರಿಕೆ ಬಗ್ಗೆ ಪ್ರಸ್ತಾಪವಾಗಿದೆ.

ಹಾಲು ಉತ್ಪಾದಕರಿಗೆ ಸರ್ಕಾರ 656.07 ಕೋಟಿ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಇದರ ವಿಚಾರವಾಗಿ ಸದನದಲ್ಲಿ ಆಕ್ಷೇಪ ಶುವಾಯಿತು. ಕರ್ನಾಟಕದಲ್ಲಿ ಒಟ್ಟು 9,04,547 ಫಲಾನುಭವಿ ರೈತರಿಗೆ ಹಾಲು ಉತ್ಪಾದನಾ ಪ್ರೋತ್ಸಾಹ ಧನ ತಲುಪಬೇಕಿದೆ. ಕಳೆದ ಅಕ್ಟೋಬರ್ ತಿಂಗಳಿಂದ ಪ್ರೋತ್ಸಾಹ ಧನ ನೀಡದೇ ಸರ್ಕಾರ ತಡೆಹಿಡಿದಿದೆ. ಈ ಬಗ್ಗೆ ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯೆ ಉಮಾಶ್ರೀ ಹಾಗೂ ಎಂಜಿ ಮುಳೆ ಪ್ರಶ್ನೆ ಮಾಡಿದರು. ಈ ವೇಳೆ ಹಾಲಿನ ದರ ಏರಿಕೆಯ ಸುಳಿವನ್ನ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಪುನರುಚ್ಚರಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ