Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಕ್ಕೆ ಮಾತೃ ಹೃದಯವಿರಬೇಕು; ಮಾದಿಗರು ಸಮಾಜಕ್ಕೆ ಮಾದರಿಯಾಗಬೇಕು ಎನ್.ಡಿ ವೆಂಕಮ್ಮ

ಬಳ್ಳಾರಿ ಆ 07. ಸುಪ್ರೀಮ್ ಕೋರ್ಟ್ ಆದೇಶವಾಗಿ ಒಂದು ವರ್ಷ ಕಳೆದರೂ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯಲ್ಲಿ ಮಾದಿಗ ಮತ್ತು ಇತರೆ ಜಾತಿಗಳಿಗೆ ಒಳ ಮೀಸಲಾತಿಯನ್ನು ಕಲ್ಪಿಸದೇ ವೃಥಾ ಕಾಲಹರಣ ಮಾಡುತ್ತಿದೆ, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಮತ್ತು ಕಾಂತರಾಜ್ ವರದಿಯ ಅಂಕಿ ಅಂಶಗಳನ್ನು ಪಡೆದುಕೊಂಡು ಒಳ ಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಬೇಕೆಂದು ಹಿರಿಯ ಸಾಹಿತಿ ಎನ್.ಡಿ ವೆಂಕಮ್ಮ ಸರ್ಕಾರವನ್ನು ಒತ್ತಾಯಿಸಿದರು.


ಅವರು  ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ಸರ್ಕಾರಕ್ಕೆ ಮಾತೃ ಹೃದಯವಿರಬೇಕು ಸಮ ಸಮಾಜವನ್ನು ನಿರ್ಮಾಣ ಮಾಡಲು ಕ್ರಮಕೈಗೊಳ್ಳಬೇಕು ಒಳ ಮೀಸಲಾತಿಯಿಂದ ಮಾತ್ರ ಸಮಾದಲ್ಲಿ ಎಲ್ಲರನ್ನು ಮುನ್ನೆಲೆಗೆ ತರಲು ಸಾಧ್ಯ, ಇದು ಸರ್ಕಾರದ ಮುಖ್ಯಮಂತ್ರಿಗಳಿಗೆ ವಿಶಾಲವಾದ  ಮಾತೃ ಹೃದಯವಿದ್ದಲ್ಲಿ ಮಾತ್ರ ಇದು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.


ಈ ಸಂದರ್ಭದಲ್ಲಿ ಕರಿಯಪ್ಪ ಗುಡಿಮನಿ ಮಾತನಾಡಿ, ಒಳ ಮೀಸಲಾತಿ ಹೋರಾಟವನ್ನು ಇದೇ ತಿಂಗಳು 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ಧಾಷ್ಟವಾಧಿ ಅಹೋರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ, ಈ ಹೋರಾಟಕ್ಕೆ ಮನೆಗೊಬ್ಬ ವ್ಯಕ್ತಿ ಜೊತೆಯಲ್ಲಿ ಪ್ರತಿಯೊಬ್ಬರು ಕೈಯಲ್ಲಿ ಬುತ್ತಿ ಹಿಡಿದುಕೊಂಡು ಹೋರಾಟಕ್ಕೆ ಬರಬೇಕು ಎಂದು ಅವರು ಕರೆ ನೀಡಿದರು. ಪ್ರತಿಪಕ್ಷಗಳು ನಮ್ಮ ಹೋರಾಟವನ್ನು ದುರುಪಯೋಗ ಮಾಡಿಕೊಳ್ಳಬಾರದು ಎಂದು ಬಿ.ಜೆ.ಪಿ ಮತ್ತು ಜೆ.ಡಿ.ಎಸ್ ಪಕ್ಷಗಳ ಮುಖಂಡರ ವಿರುದ್ಧ ಕಿಡಿಕಾರಿದರು. ಈ ಪತ್ರಿಕಾಗೋಷ್ಟಿಯಲ್ಲಿ ಬಸವರಾಜ್ ಕೌತಾಳ್, ಅಂಬಣ್ಣ ಆರೋಲಿಕರ್ , ಸಣ್ಣ ಮಾರೆಪ್ಪ , ಗೆಸ್ಟ್ ಹಾಸ್ ಈಶ್ವರಪ್ಪ, ರಾಮಕೃಷ್ಣ, ಆಂಜಿನೇಯ, ಹುಸೇನಪ್ಪ, ಸೇರಿದಂತೆ ಹಲವರಿದ್ದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ