LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Beauty Tips

ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನ

ರಾಯಗಢ03: ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ಶುಕ್ರವಾರ ನಡೆದಿದೆ. ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ವಾಲಿದ ಪರಿಣಾಮ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ.

ಘಟನೆ ಸಂಭವಿಸಿದಾಗ ಚಾಪರ್ ಶಿವಸೇನೆಯ ಶಿಂಧೆ ಬಣದ (ಯುಬಿಟಿ) ನಾಯಕಿ ಸುಷ್ಮಾ ಅಂಧಾರೆಯನ್ನು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಸಾರ್ವಜನಿಕ ರ್ಯಾಲಿಗಾಗಿ ಕರೆದೊಯ್ಯಲು ಹೋಗುತ್ತಿತ್ತು.

ಬೆಳಗ್ಗೆ 9.30ರ ಸುಮಾರಿಗೆ ಹೆಲಿಕಾಪ್ಟರ್‌ನ ಪೈಲಟ್‌ಗಳು ಅದನ್ನು ಮಹುಹಾದ್‌ನಲ್ಲಿರುವ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಇಳಿಸಲು ಪ್ರಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಹೆಲಿಕಾಪ್ಟರ್ ವಾಲಿದ್ದು, ಪೈಲಟ್‌ಗಳಿಗೆ ಗಾಯಗಳಾಗಿವೆ.

ಲ್ಯಾಂಡಿಂಗ್ ಸಮಯದಲ್ಲಿ ಹೆಲಿಕಾಪ್ಟರ್ ತನ್ನ ನಿಯಂತ್ರಣವನ್ನು ಕಳೆದುಕೊಂಡಿತ್ತು, ಹೆಲಿಪ್ಯಾಡ್​ನಲ್ಲಿ ಧೂಳೆಬ್ಬಿಸುತ್ತಿತ್ತು, ದೊಡ್ಡದಾಗಿ ಶಬ್ದ ಮಾಡುತ್ತಾ ಸಮತೋಲನವನ್ನು ಕಳೆದುಕೊಂಡಿತ್ತು. ಘಟನೆಯಲ್ಲಿ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗಳಿಗೂ ಹಾನಿಯಾಗಿದೆ.

ಘಟನೆಯ ನಂತರ, ಪೊಲೀಸರು ಮತ್ತು ತುರ್ತು ತಂಡದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪೈಲಟ್‌ಗಳನ್ನು ರಕ್ಷಿಸಿದರು ಮತ್ತು ಅವರಿಗೆ ಪ್ರಥಮ ಚಿಕಿತ್ಸೆ ನೀಡಿದರು.

ಮೈದಾನವು ಸಮತಟ್ಟಾಗಿರದ ಕಾರಣ ಘಟನೆ ಸಂಭವಿಸಿದೆ ಎನ್ನಲಾಗಿದೆ. ರಾಯಗಢ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರ ಕರ್ನಾಟಕದಿಂದಲೇ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ : ಭೀಮಪ್ಪ ಗಡಾದ ಧರ್ಮಸ್ಥಳ ಗ್ರಾಮೀಣ ಸಂಘದಿಂದ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಇಂಡಿ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ: ಝಳಕಿ ಹೆದ್ದಾರಿಯಲ್ಲಿ ರೈತರ ಬೃಹತ್ ಪ್ರತಿಭಟನೆಸೆ.೬ರಂದು ಶ್ರೀ ಉಳವೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಶ್ರೀ ಎಚ್.ಎಸ್. ಪಾಟೀಲ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಐನಾಪುರ: ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಕರ ಸಂಘದಿಂದ ಬೃಹತ್ ರಕ್ತದಾನ ಶಿಬಿರಶಾಸಕ ಬಾಬಾಸಾಹೇಬ ಪಾಟೀಲ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಭೆಹೂವು–ಬೊಕ್ಕೆ ಬದಲು ರಕ್ತದಾನ: ಕಿತ್ತೂರಿನಲ್ಲಿ ವಿಭಿನ್ನ ಶಿಕ್ಷಕರ ದಿನಾಚರಣೆರಾಮದುರ್ಗ: ಅಕ್ರಮ ಗೋಹತ್ಯೆ ತಡೆಗೆ ಆಗ್ರಹಿಸಿ ವಿಎಚ್‌ಪಿ, ಭಜರಂಗದಳದಿಂದ ಮನವಿ89 ಗ್ರಾಮಗಳ ದಾಖಲೆಗಳ ಇಂಡೆಕ್ಸ್, ಕ್ಯಾಟಲಾಗ್ ಸಿದ್ಧತೆ; 80 ಸರ್ವೇಯರ್‌ಗಳಿಂದ ಮೂರು ದಿನಗಳ ಕಾರ್ಯಾಚರಣೆ, ರೈತರಿಗೆ 24 ಗಂಟೆಯೊಳಗೆ ಭೂ ದಾಖಲೆ ಪೂರೈಸುವ ಗುರಿ