LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ತೋಟಗಾರಿಕೆ ಇಲಾಖೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ,ಜೂ.13: ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಣ್ಣು ಮತ್ತು ನೀರಿನ ಸಂರಕ್ಷಣೆ ಕಾರ್ಯಕ್ರಮಗಳಾದ ಬದು ನಿರ್ಮಾಣ, ಕೃಷಿಹೊಂಡ, ಕಾಮಗಾರಿಗಳಿಗೆ ಸಹಾಯಧನ. ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಸಪೋಟ, ದಾಳಿಂಬೆ, ಪೇರಲ, ಮಾವು, ಡ್ರಾö್ಯಗನ್ ಹಣ್ಣು, ತೆಂಗು, ತಾಳೆ ಹಾಗೂ ಇತರೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸಹಾಯಧನ ನೀಡಲಾಗುತ್ತದೆ.
ಈ ಯೋಜನೆಯಡಿ ಕೂಲಿ ಮತ್ತು ಸಾಮಾಗ್ರಿ ವೆಚ್ಚವನ್ನು ಆನ್ ಲೈನ್ ಮೂಲಕ ಪಾವತಿಸುವ ವ್ಯವಸ್ಥೆಯಿದ್ದು, ಆಸಕ್ತ ರೈತರು ಅಗತ್ಯ ದಾಖಲಾತಿಗಳಾದ ಪಹಣಿ, ಆಧಾರ್ ಕಾರ್ಡ್, ಉದ್ಯೋಗ ಚೀಟಿ, ಬಿಪಿಎಲ್ ಪಡಿತರ ಚೀಟಿ ಜೆರಾಕ್ಸ್ ಪ್ರತಿ ಅಥವಾ ಎಸ್.ಸಿ ಮತ್ತು ಎಸ್.ಟಿ ಜಾತಿ ಪ್ರಮಾಣ ಪ್ರತಿ ಜೆರಾಕ್ಸ್ ಅಥವಾ ಸಣ್ಣ ರೈತರ ಪ್ರಮಾಣ ಪತ್ರ ಹಾಗೂ ಇತರೆ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯ ದೂ.08392-278177 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್