Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಅಂಗವಾಗಿ ರೈತನ ಆವಿಷ್ಕಾರ ದಾಖಲೆ

೨೦೨೫-೨೬ ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಐ.ಸಿ.ಎ.ಆರ್-ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಕರ್ನಾಟಕ ರಾಜ್ಯ ಕೃಷಿ ಇಲಾಖೆ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ದಿನಾಂಕ ೨೯-೦೫-೨೦೨೫ ರಿಂದ ೧೨-೦೬-೨೦೨೫ ರ ವರೆಗೆ ಗದಗ ಜಿಲ್ಲೆಯ ಎಲ್ಲ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಕೃಷಿ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

೧೧-೦೬-೨೦೨೫ ರಂದು ಹದಿನಾಲ್ಕನೇಯ ದಿನ ರೋಣ ತಾಲೂಕಿನ ಸೂಡಿ, ಕೊತಬಾಳ, ಅಬ್ಬಿಗೇರಿ, ಹೊಳೆಮಣ್ಣೂರು, ಹೊಳೆಆಲೂರು, ಗಾಡಗೋಳಿ ಗ್ರಾಮಗಳಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿತ್ತು. ಗಾಡಗೋಳಿ ಗ್ರಾಮದ ಪ್ರಗತಿಪರ ರೈತರಾದ ಶ್ರೀ ರವಿಗೌಡ ಬೊಮ್ಮನಗೌಡರ ಅವರ ಕೃಷಿಯಲ್ಲಿನ ನಾವೀನ್ಯತೆ ದಾಖಲೆ ಮಾಡಲಾಯಿತು. ಅವರು ಟ್ರ್ಯಾಕ್ಟರ್ ಎಳೆಯುವ ಇಂಟರ್ ಕಲ್ಟಿವೇಟರ್, ಬಹು ಉಪಕರಣ ಜೋಡಣೆಯೊಂದಿಗೆ ಪ್ರೈಮ್ ಮೂವರ್ ನಂತಹ ಸುಧಾರಿತ ಯಾಂತ್ರೀಕೃತ ಯಂತ್ರೋಪಕರಣಗಳನ್ನು ಅಭಿವೃದ್ಧಿಪಡಿಸಿ, ಅಳವಡಿಸಿಕೊಂಡು, ಯಶಸ್ಸು ಕಂಡಿರುವರು.

ಐ.ಸಿ.ಎ.ಆರ್-ರಾಷ್ಟ್ರೀಯ ಪಶು ಪೋಷಣೆ ಹಾಗೂ ಶರೀರಕ್ರಿಯಾ ವಿಜ್ಞಾನ ಸಂಸ್ಥೆ, ಬೆಂಗಳೂರು ಹಾಗೂ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಆತ್ಮ ಸಿಬ್ಬಂದಿ, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರುಗಳು, ಪಶು ಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ರೈತ ಮುಖಂಡರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ಈ ಅಭಿಯಾನದಲ್ಲಿ ವಿವಿಧ ತಂತ್ರಜ್ಞಾನಗಳಾದ ಬೀಜೋಪಚಾರ, ಸುಧಾರಿತ ತಳಿಗಳು, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ತರಬೇತಿ ನೀಡಲಾಯಿತು. ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಮುಂಗಾರು ಹಂಗಾಮಿನ ಅಡಿ ಅಭಿವೃದ್ಧಿ ಪಡಿಸಿದ ಮುಂಗಾರು ಬೆಳೆಗಳಾದ ಹೆಸರು, ಶೇಂಗಾ, ಸೂರ್ಯಕಾಂತಿ, ಗೋವಿನ ಜೋಳ, ಈರುಳ್ಳಿ ಬೆಳೆಗಳ ಕುರಿತ ಕೃಷಿ ಕೈಪಿಡಿಯನ್ನು ರೈತರಿಗೆ ನೀಡಲಾಯಿತು. ಜೊತೆಗೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ವಿವಿಧ ಯೋಜನೆಗಳ ಬಗ್ಗೆ ಹಸ್ತಪ್ರತಿಗಳನ್ನು ವಿತರಿಸಲಾಯಿತು. ರೋಣ ತಾಲೂಕಿನ ೧೩೧೯ ಜನ ರೈತ ಹಾಗೂ ರೈತ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ