Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶರಣರ ವಿಚಾರಗಳನ್ನು ಅರಿಯಬೇಕು : ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ವಿಜಯಪುರ, ಜು. ೨೯ (ಕರ್ನಾಟಕ ವಾರ್ತೆ):  ವಚನಗಳಲ್ಲಿ ಜೀವನದ ಸಾರ ಅಡಗಿದ್ದು,ಸತ್ಯ ಪಥದ  ನಡೆ-ನುಡಿ,ಸಮಾಜ ಸುಧಾರಣೆಯ ಮೌಲ್ವಿಕ ವಿಚಾರಗಳು ಬಸವಾದಿ ಶರಣರು ರಚನೆಯ ವಚನಗಳು ಬೆಳಕು ಚೆಲ್ಲುತ್ತವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ  ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು ಹಡಪದ ಅಪ್ಪಣ್ಣನವರ ರಚನೆಯ ೧೫೦ಕ್ಕೂ ಹೆಚ್ಚು ವಚನಗಳು ಜೀವನದ ಸತ್ಯ, ಮಾನವೀಯ ಮೌಲ್ಯಗಳು ಹಾಗೂ ಮಾನವೀಯತೆಯನ್ನು ಪ್ರತಿಪಾದಿಸುತ್ತವೆ.  ಸಮಾಜದ ಒಳಿತಿಗಾಗಿ ಶ್ರಮಿಸಿದ ಶರಣರು ಜನರಾಡುವ ಭಾಷೆಯಲ್ಲಿ ವಚನಗಳನ್ನು ಜನಮಾನಸಕ್ಕೆ ನೀಡಿ, ಸಮಾಜ ಸುಧಾರಣೆಗೆ ಅವರ ಕೊಡುಗೆ ಮಹತ್ತರವಾಗಿದೆ. ತನ್ನ ತಾನು ಅರಿತು ನಡೆಯಬೇಕೆಂಬ ಶರಣರ ಆಶಯದಂತೆ ನಡೆಯೋಣ ಯುವ ಪೀಳಿಗೆ ಶರಣ ಸಾಹಿತ್ಯ ಅಧ್ಯಯನ ಮಾಡುವ ಮೂಲಕ ವಚನಗಳಲ್ಲಿ ಸತ್ವ ತಿಳಿಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಬಿ.ಎಂ. ಪಾಟೀಲ ಮಾತನಾಡಿ, ಸತ್ಯ, ಶುದ್ಧತೆ, ಕಾಯಕ ಮತ್ತು ನಿಷ್ಠೆಯ ಮೌಲ್ಯಗಳನ್ನು ಪ್ರತಿಪಾದಿಸುವ ವಚನ ಸಾಹಿತ್ಯವು ಸಮಾಜಕ್ಕೆ ದಾರಿದೀಪವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ನಾಗಭೂಷಣ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಂತೋಷ್ ಭೋವಿ ಸೇರಿದಂತೆ ಭೀಮರಾಯ ಜಿಗಜಣಗಿ, ಸೋಮನಗೌಡ ಕಲ್ಲೂರ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೆರವಣಿಗೆ ಚಾಲನೆ:  ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿಗಳಾದ ಡಾ.ಔದ್ರಾಮ ಅವರು ಚಾಲನೆ  ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ ಜಿಪಂ ಉಪ ನಿರ್ದೇಶಕ ನಾಗಭೂಷಣ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯ ನಿರ್ದೇಶಕರಾದ ಸಂತೋಷ ಭೋವಿ ಸಮಾಜದ ಮುಖಂಡರ ಬಸವರಾಜ ಶಿವಶರಣ ,ಅಶೋಕ ನಾವಿ,ಭೀಮರಾಯ ಜಿಗಜಿಣಗಿ,ಸೋಮನಾಥ ಕಲ್ಲೂರ ಇದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಶಿಕ್ಷಣವು ನ್ಯಾಯಯುತ ಸಮಾಜ ನಿರ್ಮಾಣದ ಪ್ರಮುಖ ಸಾಧನ: ಹಿರಿಯ ನ್ಯಾಯವಾದಿ ಕೆ.ಎಲ್. ಪಾಟೀಲ’ನನ್ನ ದೇಹ, ನನ್ನ ಸುರಕ್ಷತೆ’ ಪರಿಕಲ್ಪನೆಯಡಿ ಮಕ್ಕಳಿಗೆ ಜಾಗೃತಿ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು "ಫಲಾಪೇಕ್ಷೆಯಿಲ್ಲದ ಕಾರ್ಯ ಶ್ಲಾಘನೀಯ" -ಶ್ರೀಗುರುಸಿದ್ದೇಶ್ವರ ಶ್ರೀದೇಶನೂರ ಬಂಗಲೆ ರಸ್ತೆ, ದೇವಸ್ಥಾನದ ಅಭಿವೃದ್ಧಿ ಆದಷ್ಟು ಬೇಗ  ಪ್ರಾರಂಭ : ಬಾಬಾಸಾಹೇಬ ಪಾಟೀಲ ಹತ್ತರಗಿ : ದೀಪ ಸಂಜೀವಿನಿ ಉತ್ಪನ್ನಗಳ ಮಳಿಗೆ ಉದ್ಘಾಟನೆ,"ನಾಡು ನುಡಿ, ಗಡಿ ವಿಚಾರದಲ್ಲಿ ಒಗ್ಗಟ್ಟಿನಿಂದ ಶ್ರಮಿಸಿ  / ನಾಡು ನುಡಿಯ ರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗ ಮುಂದಾಗಬೇಕು"  *ಶಾಲಾ ದಾಖಲಾತಿಯಲ್ಲಿ ಗಣನೀಯ ಏರಿಕೆ: ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು*ವಕೀಲರ ಸಂರಕ್ಷಣೆಯ ಕಾಯ್ದೆ ಪರಿಣಾಮಕಾರಿ ಜಾರಿಗೆ ಸವದತ್ತಿ ವಕೀಲರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಮನವಿ  ಇಂಡಿ: ಸಿದ್ದೇಶ್ವರ ಸ್ವಾಮೀಜಿ ಮಳಿಗೆಗಳ ಬಹಿರಂಗ ಹರಾಜು – ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆವಿದ್ಯುತ್‌ ಸಮಸ್ಯೆಗಳಿಗೆ ಶೀಘ್ರ ಪರಿಹರಿಸಲು ಆಗ್ರಹಿಸಿ ಅನಿರ್ದಿಷ್ಟ ಹೋರಾಟ