Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಷಾತ್ರ ತೇಜಸ್ಸಿನ ಭಾಷೆ ಕನ್ನಡ: ಸಿದ್ಧರಾಮ ಕಲ್ಮಠ



ಬಳ್ಳಾರಿ :  ಸರ್ವಶ್ರೇಷ್ಠ ಮಾತೃಭಾಷೆಯಾದ ಕನ್ನಡವು ಜೀವ ಚೈತನ್ಯದಂತೆ ಕ್ಷಾತ್ರ ತೇಜಸ್ಸನ್ನು ಹೊಂದಿದ್ದು, ಕನ್ನಡದ ಮನಸ್ಸುಗಳ ಮೂಲಕ ಅಸ್ಮಿತೆಯನ್ನು ಜೀವಾಳವಾಗಿಸಿಕೊಂಡಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಉಪಾಧ್ಯಕ್ಷರಾದ ಸಿದ್ಧರಾಮ ಕಲ್ಮಠ ಹೇಳಿದರು.

ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಿದ್ದ ೭೦ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಚರಿತ್ರೆಯ ಪುಟಗಳಿಂದ ಭಾಷೆ ಮತ್ತು ಸಂಸ್ಕೃತಿಯ ಸೊಗಡನ್ನು ಮೆಲುಕು ಹಾಕಿದಾಗ ಕನ್ನಡದ ಅರಸರ ಆಳ್ವಿಕೆಯ ವಿಶಾಲ ವ್ಯಾಪ್ತಿ ಗಮನಕ್ಕೆ ಬರುತ್ತದೆ. ರಾಷ್ಟçಕೂಟರು, ಕದಂಬರು, ಗಂಗರು, ಚಾಲುಕ್ಯರು, ಹೊಯ್ಸಳರು, ವಿಜಯನಗರ ಸಂಸ್ಥಾನ, ಒಡೆಯರು, ಪಾಳೆಗಾಗರಂತಹ ರಾಜಮನೆತನಗಳು ಕನ್ನಡದ ಕುರುಹುಗಳನ್ನು ಜಗತ್ತಿನಾದ್ಯಂತ ಶಾಸನ, ಗ್ರಂಥ ಮತ್ತು ತಾಳೆಗರಿಗಳ ರೂಪದಲ್ಲಿ ಪಸರಿಸಿದ್ದಾರೆ ಎಂದರು.

೧೯೪೦ರಲ್ಲಿ ಕಾವು ಪಡೆದ ಕರ್ನಾಟಕ ಏಕೀಕರಣ ಚಳುವಳಿಗೆ ಮುನ್ನುಡಿ ಬರೆದಿದ್ದು ಬಳ್ಳಾರಿ ಜಿಲ್ಲೆ ಎಂದು ನೆನೆಸಿದರು. ಕನ್ನಡ ಭಾಷೆಗಾಗಿ ಪಿಂಜಾರ ರಂಜಾನ್ ಸಾಬ್ ಅವರ ವೀರಮರಣ, ಕುಂ. ಚನ್ನಬಸಪ್ಪ, ಅಲ್ಲಂ ಸುಮಂಗಳಮ್ಮ ಮೊದಲಾದವರ ಹೋರಾಟ ಕಥನ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿಗಳಾದ ಪ್ರೊ ಎಂ ಮುನಿರಾಜು ಮಾತನಾಡಿ, ರಾಜ್ಯದಲ್ಲಿ ಪರಭಾಷಿಗರ ಹಾವಳಿ ಹೆಚ್ಚಾಗಿದೆ. ಅದರಲ್ಲೂ ರಾಜಧಾನಿಯಲ್ಲಿ ಉತ್ತರ ಭಾರತದವರ ವಲಸೆಯಿಂದ ಮೂಲಕ ಕನ್ನಡಿಗರಿಗೆ ಧಕ್ಕೆಯಾಗಿದೆ. ನಮ್ಮ ಮಾತೃಭಾಷೆಯನ್ನು ಉಳಿಸಲು, ಬೆಳೆಸಲು ನಾವೆಲ್ಲ ಕೇವಲ ನವಂಬರ್ ತಿಂಗಳ ಕನ್ನಡಿಗರಾಗದೆ ನಮ್ಮ ಉಸಿರಿರುವರೆಗೆ ಭಾಷಾಭಿಮಾನವನ್ನು ಮೆರೆಯಬೇಕು ಎಂದು ಕರೆ ನೀಡಿದರು.

ವಿವಿಯ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ ಸಂತೋಷ್ ಜಿ ಕೆ ಅತಿಥಿಗಳನ್ನು ಸ್ವಾಗತಿಸಿದರು.

ವಿವಿಯ ಕುಲಸಚಿವರಾದ ಸಿ ನಾಗರಾಜು, ಪರೀಕ್ಷಾಂಗ ಕುಲಸಚಿವರಾದ ಪ್ರೊ ಎನ್ ಎಂ ಸಾಲಿ, ಕಲಾ ನಿಕಾಯದ ಡೀನರಾದ ಪ್ರೊ ರಾಬರ್ಟ್ ಜೋಸ್, ಪ್ರದರ್ಶನ ಕಲೆ ಮತ್ತು ನಾಟಕ ವಿಭಾಗದ ಮುಖ್ಯಸ್ಥರಾದ ಪ್ರೊ ಶಾಂತನಾಯ್ಕ್ ಎನ್ ವೇದಿಕೆಯಲ್ಲಿದ್ದರು.

ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮೊದಲು ಗಣ್ಯರು ರಾಷ್ಟç ಧ್ವಜಾರೋಹಣವನ್ನು ನೆರವೇರಿಸಿ ನಂತರ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ವಿವಿಯ ವಾಣಿಜ್ಯಶಾಸ್ತç ವಿಭಾಗದ ಉಪನ್ಯಾಸಕರುಗಳು ಹಾಗೂ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಕನ್ನಡ ಗೀತೆಗಳನ್ನು ಹಾಡಿದರು.

ಎಲ್ಲ ನಿಕಾಯಗಳು ಡೀನರು, ವಿಭಾಗಗಳ ಮುಖ್ಯಸ್ಥರು, ಸಂಯೋಜಕರುಗಳು, ವಿದ್ಯಾರ್ಥಿಗಳು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ