Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ



ಬಳ್ಳಾರಿ, ಏ.19: ಬಸವಣ್ಣನವರ ಬಹುಮುಖಿ ವ್ಯಕ್ತಿತ್ವವನ್ನು ಪರಿಚಯಿಸುವ ಡಾ.ತಿಪ್ಪೇರುದ್ರ ಅವರ  "ಬುವಿಯ ಬೆಳಕು ಬಸವಣ್ಣ" ಕೃತಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ. ಮೈತ್ರೇಯಿಣಿ ಗದಿಗೆಪ್ಪ ಗೌಡರ ಬಿಡುಗಡೆ ಮಾಡಿದ್ದಾರೆ.

ರಾಷ್ಟ್ರೀಯ ಬಸವದಳ ಹಾಗೂ ಬಸವ ಪಬ್ಲಿಕೇಶನ್ ಸಂಡೂರು ಸಂಯುಕ್ತಾಶ್ರಯದಲ್ಲಿ  ನಗರದ ಬಸವ ಮಂಟಪದಲ್ಲಿ ನಿನ್ನೆ ಸಂಜೆ ನಡೆದ ಡಾ. ತಿಪ್ಪೇರುದ್ರ ಸಂಡೂರು ಅವರ "ಬುವಿಯ ಬೆಳಕು ಬಸವಣ್ಣ" ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು ಈ ಕೃತಿಯಲ್ಲಿ ವಿವಿಧ ಆಯಾಮಗಳಲ್ಲಿ ಬಸವಣ್ಣನವರನ್ನು ದರ್ಶಿಸುವ ಮೂಲಕ ತಮ್ಮ ಅಧ್ಯಯನದ ಅನುಭವವನ್ನು ಲೇಖಕರು ವಿಶಿಷ್ಟವಾಗಿ ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ  ಎಂದರು.

ಸಂಡೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಬಿ ನಾಗನಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಅನುಸರಣಾ ಯೋಗ್ಯವಾಗಿವೆ.  ಅವರು ಬಯಸಿದ್ದ ಶೋಷಣಾ ಮುಕ್ತ ಸಮಾಜ ನಿರ್ಮಾಣದ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

ಕೃತಿಯ ಲೇಖಕ ಡಾ. ತಿಪ್ಪೇರುದ್ರ ಸಂಡೂರು ಅವರು ಮಾತನಾಡಿ ಬಸವಾದಿ ಶರಣರ ವಚನಗಳ ಅಧ್ಯಯನದ ಫಲಶ್ರುತಿಯೇ ಈ ಕೃತಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಬಸವದಳದ ಉಪಾಧ್ಯಕ್ಷ ಜಿ ಆರ್ ನಾಗರಾಜ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಜ್ಯೋತಿ ಪ್ರಕಾಶ್, ಜಿ ವೀರೇಶ್ ಸಂಡೂರು, ಸಿರಿಗೆರೆ ಪನ್ನರಾಜ್, ಬಿಎಸ್ ಪ್ರಭುಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2025 ನೇ ಸಾಲಿನ ಸಾಹಿತ್ಯ ಶ್ರೀ ಪ್ರಶಸ್ತಿಗೆ ಭಾಜನರಾದ ಡಾ. ನಿಷ್ಠಿ ರುದ್ರಪ್ಪ ಅವರನ್ನು ಸನ್ಮಾನಿಸಲಾಯಿತು.

ನೂಪುರ ಕಲಾ ಟ್ರಸ್ಟ್ ನ ಡಾಕ್ಟರ್ ಕೆ ವೀಣಾ ಅವರು ತಂಡದಿಂದ ವಚನ ನೃತ್ಯವನ್ನು ನಡೆಸಿಕೊಟ್ಟರು.

ಬಸವ ದಳದ ಕಾರ್ಯದರ್ಶಿಗಳಾದ ಕೆವಿ ರವಿಶಂಕರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಜಯಶ್ರೀ ವಚನ ಪ್ರಾರ್ಥನೆ ಸಲ್ಲಿಸಿದರು. ಟಿ. ಮಲ್ಲಿಕಾರ್ಜುನ ಅವರು ಸ್ವಾಗತಿಸಿ ವಂದನಾರ್ಪಣೆ ಸಲ್ಲಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ