LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಯೋಗಿ ಆದಿತ್ಯನಾಥ್​ ಅವರನ್ನು ಕೊಲ್ಲುವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ


ಬರೇಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಕೊಲ್ಲುವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.


ಅನಿಲ್​ ಎಂಬಾಂತ ಬಂಧಿತ ವ್ಯಕ್ತಿ. ತುರ್ತು ಸೇವಾ ಸಂಖ್ಯೆ 112ಕ್ಕೆ ಕರೆ ಮಾಡಿ, ಜನವರಿ 26ರಂದು ಸಿಎಂ ಯೋಗಿ ಆದಿತ್ಯನಾಥ್​ ಅವರನ್ನು ಗುಂಡಿಕ್ಕಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೇ, ಇಜತ್​ನಗರ್​ ಪೊಲೀಸ್​ ಠಾಣಾ ಅಧಿಕಾರಿ ಮತ್ತು ಇತರ ಅಧಿಕಾರಿಗಳಿಗೂ ಕೂಡ ಈತ ಬೆದರಿಕೆ ಹಾಕಿದ್ದ.


ಮಂಗಳವಾರ ರಾತ್ರಿ ಈತನ ಕರೆ ಸ್ವೀಕರಿಸಿದ ಬಳಿಕ ಪೊಲೀಸರು ಈತನ ಪತ್ತೆಗೆ ಮುಂದಾಗಿದ್ದರು. ಆದರೆ, ಆರೋಪಿಯ ಫೋನ್​ ಸ್ಪೀಚ್ಡ್​​ ಆಫ್​​ ಆಗಿದ್ದು, ರಾತ್ರಿ ಪೂರ ಈತನ ಶೋಧಕ್ಕೆ ಅವಿರತ ಪ್ರಯತ್ನ ನಡೆಸಲಾಯಿತು. ಕಡೆಗೆ ಆತನನ್ನು ಪತ್ತೆ ಮಾಡಿ, ಬಂಧಿಸಲಾಗಿದೆ ಎಂದು ಇಜತ್​ನಗರ್​ ಪೊಲೀಸ್​ ಠಾಣಾ ಅಧಿಕಾರಿ ಧನಂಜಯ್​ ಪಾಂಡೆ ತಿಳಿಸಿದ್ದಾರೆ.


ಆರೋಪಿ ವಿರುದ್ಧ ಎಫ್​ಐಆರ್​; ಎಫ್​ಐಆರ್​ ದಾಖಲಿಸಿರುವ ಪೊಲೀಸರು ಇದೀಗ ವಿಚಾರಣೆ ಆರಂಭಿಸಿದ್ದಾರೆ. ಆರೋಪಿಯನ್ನು ಗುರುವಾರ ನ್ಯಾಯಾಲಯದ ಮುಂದೆ ಕೂಡ ಹಾಜರು ಪಡಿಸಲಾಗುವುದು. ಈತನ ಬೆದರಿಕೆಗಳು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸುವ ಜೊತೆಗೆ, ಕೋಮು ಅಶಾಂತಿಯ ಭಯವನ್ನು ಸೃಷ್ಟಿಸಿತು ಎಂದಿದ್ದಾರೆ.




ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇದೀಗ ಕಾರ್ಯ ನಿರ್ವಹಿಸಲಾಗುತ್ತಿದ್ದು, ಆರೋಪಿಯ ಉದ್ದೇಶ ಮತ್ತು ಮಾನಸಿಕ ಸ್ಥಿತಿಯ ಬಗ್ಗೆ ಕೂಡಾ ತನಿಖೆ ನಡೆಸಲಾಗುತ್ತಿದೆ.


ಮಂಗಳವಾರ ಅನಿಲ್​ ಸ್ಥಳೀಯ ಪಿಆರ್‌ವಿ ತಂಡಕ್ಕೆ ದೂರು ದಾಖಲಿಸಿದ್ದು, ಅಲ್ಲಿ ತನ್ನ ಸ್ನೇಹಿತ ತನ್ನ ಮೋಟಾರ್‌ಸೈಕಲ್ ಪಡೆದು, ಅದನ್ನು ಹಿಂದಿರುಗಿಸಿಲ್ಲ ಎಂದು ಆರೋಪಿಸಿದ್ದಾನೆ. ಈ ವೇಳೆ ಆತನನ್ನು ವಿಚಾರಣೆ ನಡೆಸಿದಾಗ ಆತ, ಬಯ್ಯಲು ಆಂಭಿಸಿ, ಬೆದರಿಕೆ ಹಾಕಿದ್ದಾನೆ. 11ಗಂಟೆ ಸುಮಾರಿಗೆ 112ಕ್ಕೆ ಕರೆ ಮಾಡಿ, ಈ ರೀತಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್