LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪದ್ಮಶ್ರೀ ಪ್ರಶಸ್ತಿ ಕೆಎಲ್ಇ ಕುಟುಂಬಕ್ಕೆ ಸಂದ ಗೌರವ

ಹಸಿರು ಕ್ರಾಂತಿ ವರದಿ ಬೆಳಗಾವಿ

ಕಳೆದ 110 ವರ್ಷಗಳಿಂದ ಕೆಎಲ್ಇ ಸಂಸ್ಥೆ ಹಾಗೂ ಕಾಹೇರ್‌ನ ಬೆಳವಣಿಗೆಗೆ ಶ್ರಮಿಸಿದ ಎಲ್ಲ ಶಿಕ್ಷಕರು, ವೈದ್ಯರು, ಸಿಬ್ಬಂದಿ ಮತ್ತು ಕೆಎಲ್ಇ ಕುಟುಂಬದ ಸದಸ್ಯರಿಗೆ ಈ ಪದ್ಮಶ್ರೀ ಪ್ರಶಸ್ತಿಯನ್ನು ಸಮರ್ಪಿಸುತ್ತೇನೆ. ಇದು ವೈಯಕ್ತಿಕ ಗೌರವವಲ್ಲ, ಇಡೀ ಕೆಎಲ್ಇ ಕುಟುಂಬಕ್ಕೆ ಸಂದ ಗೌರವ ಎಂದು ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಕಾಹೇರ್) ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ, ಪದ್ಮಶ್ರೀ ಪುರಸ್ಕೃತ ಡಾ.ಪ್ರಭಾಕರ ಕೋರೆ ಹೇಳಿದರು.

ಶಿಕ್ಷಣ, ಆರೋಗ್ಯ ಹಾಗೂ ಸಾಹಿತ್ಯ ಕ್ಷೇತ್ರಗಳಿಗೆ ನೀಡಿದ ವಿಶಿಷ್ಟ ಸೇವೆಗಾಗಿ ಭಾರತ ಸರ್ಕಾರ ನೀಡುವ ಪದ್ಮಶ್ರೀ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಕಾಹೇರ್ ಆವರಣದಲ್ಲಿ ಕೆಎಲ್ಇ ವತಿಯಿಂದ ಬುಧವಾರ ಆಯೋಜಿಸಿದ ಅದ್ಧೂರಿ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೆಎಲ್ಇ ಸಂಸ್ಥೆಯ 110 ವರ್ಷಗಳ ಸೇವಾ ಪರಂಪರೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಇಂದಿನ ಆಡಳಿತ ಮಂಡಳಿಯ ಮೇಲಿದೆ. ವೈದ್ಯರು ಸಹಾನುಭೂತಿ, ನೈತಿಕತೆ, ಪ್ರಾಮಾಣಿಕತೆ ಹಾಗೂ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿ ವೈದ್ಯರ ದಿನಾಚರಣೆಯ ಅಂಗವಾಗಿ ವೈದ್ಯ ಸಮುದಾಯಕ್ಕೆ ಶುಭಾಶಯ ಕೋರಿದರು.

ಕಾಹೇರ್ ಕುಲಪತಿ ಡಾ.ಸಂದೀಪ ಶ್ರೀವಾಸ್ತವ ಮಾತನಾಡಿ, ಡಾ.ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕೆಎಲ್ಇ ಕುಟುಂಬಕ್ಕೆ ಹೆಮ್ಮೆಯ ಕ್ಷಣವಾಗಿದೆ. ಅವರ ದೂರದೃಷ್ಟಿಯ ನಾಯಕತ್ವ ಹಾಗೂ ಶಿಕ್ಷಣ, ಆರೋಗ್ಯ ಮತ್ತು ಸಾಹಿತ್ಯ ಕ್ಷೇತ್ರಗಳಿಗೆ ಸಲ್ಲಿಸಿದ ಜೀವಮಾನ ಸಾಧನೆಗೆ ರಾಷ್ಟ್ರ ನೀಡಿರುವ ಸೂಕ್ತ ಗೌರವ ಇದಾಗಿದೆ ಎಂದರು.

ಹಿರಿಯ ಶಿಕ್ಷಣತಜ್ಞ ಡಾ.ಎಚ್.ಬಿ.ರಾಜಶೇಖರ ಮಾತನಾಡಿ, ಡಾ.ಪ್ರಭಾಕರ ಕೋರೆಯವರ ನಾಯಕತ್ವದಿಂದ ಕೆಎಲ್ಇ ಶಿಕ್ಷಣ, ಆರೋಗ್ಯ, ಕೃಷಿ, ಸಂಶೋಧನೆ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಗುರುತನ್ನು ಪಡೆದುಕೊಂಡಿದೆ. ಪದ್ಮಶ್ರೀ ಪ್ರಶಸ್ತಿಯು ಅವರ ಸಮಾಜಮುಖಿ ಸೇವೆಗೆ ದೊರೆತ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು ಡಾ.ಪ್ರಭಾಕರ ಕೋರೆ ಅವರನ್ನು ಸನ್ಮಾನಿಸಿದರು. ವೇದಿಕೆಯಲ್ಲಿ ಆಶಾತಾಯಿ ಕೋರೆ, ಕಾಹೇರ್ ಕುಲಸಚಿವ ಡಾ.ವಿ.ಎಂ.ಪಟ್ಟಣಶೆಟ್ಟಿ, ಪರೀಕ್ಷಾ ನಿಯಂತ್ರಕ ಡಾ.ಚಂದ್ರ ಮೆಟಗುಡ, ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಎಸ್.ಕೌಜಲಗಿ, ಉಪಾಧ್ಯಕ್ಷ ಬಸವರಾಜ ಎಸ್.ತಟವಟಿ, ಆಡಳಿತ ಮಂಡಳಿಯ ಸದಸ್ಯರಾದ ಎಂ.ಕೆ.ಕವಟಗಿಮಠ, ಜಯಾನಂದ ಎಸ್.ಮುನವಳ್ಳಿ, ಡಾ.ವಿ.ಐ.ಪಾಟೀಲ, ವೈ.ಎಸ್.ಪಾಟೀಲ, ಪ್ರವೀಣ ಬಾಗೇವಾಡಿ, ಡಾ.ಪ್ರೀತಿ ದೊಡ್ಡವಾಡ, ಎಂ.ಸಿ.ಕೊಲ್ಲಿ ಹಾಗೂ ಕೆಎಲ್ಇ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ.ಎಸ್.ಎಸ್.ಜಲಾಲಪೂರೆ, ಕೆಎಲ್ಇ ಸಂಸ್ಥೆಯ ಆಜೀವ ಸದಸ್ಯರು, ವಿಶ್ವವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ಕೆಎಲ್ಇ ಹಾಗೂ ಕಾಹೇರ್‌ನ ವಿವಿಧ ಘಟಕ ಸಂಸ್ಥೆಗಳ ಪ್ರಾಂಶುಪಾಲರು, ವೈದ್ಯರು, ಅಧ್ಯಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಕಾಹೇರ್ ಕುಲಸಚಿವ ಡಾ.ವಿ.ಎಂ.ಪಟ್ಟಣಶೆಟ್ಟಿ ಸ್ವಾಗತಿಸಿ, ಪ್ರಶಂಸಾ ಪತ್ರ ವಾಚಿಸಿದರು. ಶಿಕ್ಷಣ, ಆರೋಗ್ಯ, ಸಂಶೋಧನೆ ಹಾಗೂ ಸಾಹಿತ್ಯ ಕ್ಷೇತ್ರಗಳ ಅಭಿವೃದ್ಧಿಗೆ ಡಾ.ಪ್ರಭಾಕರ ಕೋರೆ ಅವರು ನೀಡಿರುವ ಅಸಾಧಾರಣ ಕೊಡುಗೆ, ಗುಣಮಟ್ಟದ ಶಿಕ್ಷಣ ಹಾಗೂ ಜನಸಾಮಾನ್ಯರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಅವರ ದೂರದೃಷ್ಟಿಯ ನಾಯಕತ್ವವನ್ನು ಪ್ರಶಂಸಾ ಪತ್ರದಲ್ಲಿ ಸ್ಮರಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 *ಕಾರ್ಯಕ್ರಮದಲ್ಲಿ ಡಾ. ರಾಮಕೃಷ್ಣ ರೆಡ್ಡಿಯವರಿಗೆ ಗೌರವ, ಸನ್ಮಾನ,,* 15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆನಾಳೆ ಶ್ರೀ ದ್ಯಾಮವ್ವ, ದುರಗಮ್ಮ ದೇವಿಯರ ಅದ್ದೂರಿ ಮೇರವಣಿಗೆ: ರಾಜು ಖಾನಪ್ಪನವರಮಾಧ್ಯಮ ಮಿತ್ರರು ಕ್ರೀಡೆಯಲ್ಲಿ ಭಾಗವಹಿಸಿದ್ದು ಉತ್ತಮ ಬೆಳವಣಿಗೆಕೊಪ್ಪಳ ತಾ.ಪಂ. ಇಒ ಎತ್ತಂಗಡಿಗೆ ಆಗ್ರಹಿಸಿ ಆ. 31ಕ್ಕೆ ಬೃಹತ್ ಪ್ರತಿಭಟನೆಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳಸಪ್ಟೆಂಬರ್ 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ: ಜಿಲ್ಲೆಯಲ್ಲಿ 13,53,946 ಮತದಾರರ ಕರಡು ಪಟ್ಟಿ ಪ್ರಕಟ30ರಂದು  ಶ್ರೀ ಬಾಳುಮಾಮಾ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಿತ್ಯ ನೇಮ ಉಪಾಷಣೆಯಿಂದ ನೆಮ್ಮದಿ ಜೀವನ.....ಪ್ರಭುಜಿ   ಮಹಾರಾಜ.ಮಳೆ ದೇವರು ಕೊಡುತ್ತಾನೆ, ಅದರ ಹಂಚಿಕೆ ಸರ್ಕಾರ ಮಾಡಬೇಕು  : ಮಹಾಂತೇಶ ದೊಡ್ಡಗೌಡರ