Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಗದದ ಚೀಲಗಳು ಪರಿಸರ ಸ್ನೇಹಿಯಾಗಿವೆ : ರಾಜಣ್ಣ ವೇರ್ಣೆಕರ

ಗದಗ, ಜು. 14 : ಕಾಗದದ ಚೀಲಗಳು ಪರಿಸರ ಸ್ನೇಹಿಯಾಗಿದ್ದು, ಇವು ಅನೇಕ ಪ್ರಯೋಜನಗಳನ್ನು ನೀಡುತ್ತವೆ. ಇವುಗಳನ್ನು ಮರುಬಳಕೆಯು ಸಹ ನಾವು ಮಾಡಬಹುದು. ಪ್ಲಾಸ್ಟಿಕ್ ಇಂದು ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದೆ. ಜೀವ ಸಂಕುಲಕ್ಕೆ ಮಾರಕವಾದ ಪ್ಲಾಸ್ಟಿಕ್‌ನ್ನು ನಾವು ತ್ಯಜಿಸಬೇಕು ಎಂದು ಗದಗ ಬೆಟಗೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರಾಜು ವೇರ್ಣೆಕರ ಹೇಳಿದರು.
ಅವರು ಶನಿವಾರ ಗದಗ ಬೆಟಗೇರಿ ಲಯನ್ಸ್ ಕ್ಲಬ್‌ದಿಂದ ಹಮ್ಮಿಕೊಂಡ ’ಕಾಗದದ ಚೀಲ ದಿನಾಚರಣೆ’ ನಿಮಿತ್ಯ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ಲಾಸ್ಟಿಕ್ ಉತ್ಪನ್ನಗಳು ಮಾನವನ ಹಾಗೂ ಪರಿಸರಕ್ಕೆ ಅಪಾಯಕಾರಿಯಾಗಿವೆ. ನಾವಿಂದು ನಮಗೆ ತಿಳಿದೋ ತಿಳಿಯದೋ ಪ್ಲಾಸ್ಟಿಕ್‌ನನ್ನು ಪ್ರತಿನಿತ್ಯ ಬಳಸುತ್ತಿದ್ದೇವೆ. ಇನ್ನು ಮುಂದಾದರೂ ಜಾಗೃತಿಗೊಂಡ ನಾವು ಅಪಾಯಕಾರಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆಗೊಳಿಸಿ ಮರುಬಳಕೆ ಮಾಡುವ ಹಾಗೂ ಹಾನಿಕಾರಕ ಅಲ್ಲದ ವಸ್ತುಗಳಿಂದ ತಯಾರಿಸಿದ ಕಾಗದ ಅಥವಾ ಬಟ್ಟೆ ಬ್ಯಾಗುಗಳನ್ನು ಬಳಸಿ ಜೀವ ಸಂಕುಲ ಹಾಗೂ ಪರಿಸರವನ್ನು ಉಳಿಸುವ ಮಹತ್ತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಜಾಥಾವು ನಗರದ ಮಹೇಂದ್ರಕರ್ ಸರ್ಕಲ್, ಟಾಂಗಾಕೂಟ ಮಾರ್ಗವಾಗಿ ಗ್ರೇನ್ ಮಾರ್ಕೆಟ್, ಬ್ಯಾಂಕ್ ರೋಡ್ ಮುಂತಾದ ಕಡೆ ಸಂಚರಿಸಿ ಗ್ರಾಹಕರು ಹಾಗೂ ವ್ಯಾಪಾರಿಗಳಿಗೆ ಕಾಗದದ ಚೀಲದ ಉಪಯೋಗ ಹಾಗೂ ಪ್ಲಾಸ್ಟಿಕ್ ನಿಷೇಧದ ಕುರಿತು ಜನಜಾಗೃತಿ ಮೂಡಿಸಲಾಯಿತು. ಕ್ಲಬ್‌ನ ಮಾಜಿ ಅಧ್ಯಕ್ಷ ರಮೇಶ ಶಿಗ್ಲಿ ಕಾಗದ ಚೀಲದ ಪ್ರಾಮುಖ್ಯತೆ ಕುರಿತು ಜಾಥಾದಲ್ಲಿ ತಿಳುವಳಿಕೆ ನೀಡಿದರು.

ಕ್ಲಬ್‌ನ ಕಾರ್ಯದರ್ಶಿ ರಾಜಣ್ಣ ಮಲ್ಲಾಡದ ಮಾತನಾಡಿ ಪ್ಲಾಸ್ಟಿಕ್ ತ್ಯಾಜ್ಯವು ಪರಿಸರದಲ್ಲಿನ ಜೀವ ಸಂಕುಲಕ್ಕೆ ಅಪಾಯಕಾರಿ ಆಗಿದೆ. ಮನುಷ್ಯ ಪ್ಲಾಸ್ಟಿಕ್‌ಗೆ ಹೊಂದಿಕೊಂಡು ಬಿಟ್ಟಿದ್ದಾನೆ. ಇವುಗಳನ್ನು ಆದಷ್ಟು ದೂರವಿಟ್ಟು ಪರಿಸರ ಸ್ನೇಹಿಗಳಾದ ಕಾಗದ ಹಾಗೂ ಬಟ್ಟೆಗಳಿಂದ ರಚನೆಗೊಂಡ ಚೀಲಗಳು ಅಪಾಯಕಾರಿ ಅಲ್ಲ. ಅದಕ್ಕಾಗಿ ಎಲ್ಲರೂ ಕಾಗದದ ಚೀಲ ಬಳಸಿ ಪ್ಲಾಸ್ಟಿಕ್ ಆದಷ್ಷು ನಿರ್ಮೂಲನೆ ಮಾಡಿ ಪರಿಸರ ಉಳಿಸೋಣ ಎಂದರು. ಕ್ಲಬ್‌ನ ಖಜಾಂಚಿ ರೇಣುಕಪ್ರಸಾದ ಹಿರೇಮಠ, ಪ್ರವೀಣ ವಾರಕರ, ಅರವಿಂದ ಪಟೇಲ, ರೇಣುಕಪ್ರಸಾಧ ಶಿಗ್ಲಿಮಠ, ಶಿವಪ್ರಭು ನೀಲಗುಂದ, ಕಾರ್ತಿಕ ಪಾಲನಕರ, ಯಶಸ್ಸ ಶಿಗ್ಲಿ ಮುಂತಾದವರು ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ